ತುರುವೇಕೆರೆ: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನೆಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ. ತುಮಕೂರು ಘಟಕದ ಸಂಘಟನಾ ಸಂಚಾಲಕ ನರಸಿಂಹಣ್ಣ ಮಾತನಾಡಿ ಉತ್ತಮವಾಗಿ ಕಾರ್ಯನಿರ್ವಾಹಿಸುತ್ತಿರುವ ವಿದ್ಯುತ್ ಇಲಾಖೆಯ ನ್ನು ಖಾಸಗಿಕರಣ ಮಾಡಲು ಅದಿಸೂಚನೆ ಹೊರಡಿಸಿದ್ದು ಅಕ್ಷೇಪಣೆ ಸಲ್ಲಿಸಲು ಇದೇ ತಿಂಗಳ ೨೩ ರಂದು ಕೊನೆಯ ದಿನವಾಗಿದೆ ಅದ್ದರಿಂದ ಕೆಇಆರ್.ಸಿಗೆ ಸಾರ್ವಜನಿಕರು, ರೈತರು ಅಕ್ಷೇಪಣೆ ಸಲ್ಲಿಸುವಂತೆ ಮನವಿ ಮಾಡಿದರು.
ನಾವು ಜನರ ಸೇವೆ ಹಿತ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ. ಖಾಸಗಿ ಕಂಪನಿಯಾದರೆ ಕೇವಲ ಲಾಭದ ಉದ್ದೇಶದಿಂದ ಕೆಲಸ ಮಾಡುತ್ತವೆ, ಇದರಿಂದ ಸಾಮಾನ್ಯ ಜನರಿಗೆ ಮತ್ತು ಬಡ ವರ್ಗದವರಿಗೆ ವಿದ್ಯುತ್ ದರ ಹೆಚ್ಚಾಗುತ್ತದೆ. ಹೊಸ ನೇಮಕಾತಿಯೂ ಮಾಡುವುದಿಲ್ಲ.ಖಾಸಗಿ ಕಂಪನಿಗಳಿಗೆ ಬಡ, ಮಧ್ಯಮ ದೀನ ದಲಿತರಿಗೆ ಮೀಸಲಾತಿ ಸಿಗದಂತಾಗುತ್ತದೆ. ಸಣ್ಣ ಮತ್ತು ಮಧ್ಯಮ ಗುಡಿ ಕೈಗಾರಿಕೆಗಳಿಗೆ ವಿದ್ಯುತ್ ದರ ಹೆಚ್ಚಳವಾದರೆ ಕೈಗಾರಿಕೆ ಬೆಳವಣಿಗೆ ಕುಂಠಿತಾಗುತ್ತದೆ. ಸರ್ಕಾರವು ಹಲವು ವರ್ಷಗಳ ಕಾಲ ಸಾರ್ವಜನಿಕರ ಹಣದಿಂದ ನಿರ್ಮಿಸಿದ ವಿದ್ಯುತ್ ಜಾಲ ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸುವುದು ನ್ಯಾಯಸಮ್ಮತವಲ್ಲ ಎಂದು ಒತ್ತಾಯಿಸಿದರು.
ಬೆಸ್ಕಾಂ ಎಇಇ ರಾಜಶೇಖರ್ ಮಾತನಾಡಿ, ಸಾರ್ವಜನಿಕ ಹಣದಿಂದ ನಿರ್ಮಿಸಿರುವ ವಿದ್ಯುತ್ ಗ್ರಿಡ್, ಕಂಬಗಳು ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನರ ಹಣದ ದುರುಪಯೋಗವಾಗಲಿದೆ. ಗ್ರಾಹಕರಿಗೆ, ರೈತರ ನೀರಾವರಿ ಯೋಜನೆಗಳಿಗೆ ಉಚಿತ ವಿದ್ಯುತ್/ ರಿಯಾಯಿತಿ ದರದಲ್ಲಿ ಖಾಸಗಿ ಕಂಪನಿಗಳು ವಿದ್ಯುತ್ ಪೂರೈಸುವುದಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿ ಕೃಷಿಗೆ ಅಪಾಯಕಾರಿಯಾಗುತ್ತದೆ ಮತ್ತು ಅಗತ್ಯ ಅಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುತ್ತದೆ. ವಿದ್ಯುತ್ ದೇಶದ ಭದ್ರತೆ ಮತ್ತು ಜನರ ಬದುಕಿಗೆ ಅತ್ಯಗತ್ಯವಾಗಿದ್ದು, ಇದನ್ನು ಖಾಸಗಿ ಲಾಭದ ಉದ್ದೇಶದ ಅಧೀನಕ್ಕೆ ನೀಡುವುದು ರಾಜ್ಯದ ಮತ್ತು ಒಕ್ಕೂಟ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕೆ ಮಾರಕವಾಗುತ್ತದೆ. ಇದನ್ನು ಲಾಭ ಲೆಕ್ಕಾಚಾರವಿಲ್ಲದೆ ಗ್ರಾಹಕರು ಕೈಗಾರಿಕೆ, ಕೃಷಿ ಅಭಿವೃದ್ಧಿಗೆ ಬಳಕೆ ಮಾಡುತ್ತಿದ್ದು, ಖಾಸಗಿಯವರು ಬರೀ ಲಾಭ ಮಾಡುವ ಉದ್ದೇಶ ಹೊಂದಿರುತ್ತಾರೆ.
ವಿದ್ಯುತ್ ಕ್ಷೇತ್ರದಲ್ಲಿ ಕೆಲವು ಭಾಗಗಳಲ್ಲಿ ಖಾಸಗಿ ಸಂಸ್ಥೆಗಳು ಪ್ರವೇಶಿಸಿದ್ದು, ಸಾರ್ವಜನಿಕ ಸೇವೆಗಳ ಮೇಲೆ ಪರಿಣಾಮ ಬೀರುತ್ತಿವೆ. ಕರ್ನಾಟಕದ ಜನರ ಹಿತಾಸಕ್ತಿ, ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ವಿದ್ಯುತ್ ಕಂಪನಿಗಳನ್ನು ಸರ್ಕಾರದ ಅಧೀನದಲ್ಲಿ ಮುಂದುವರೆಸಬೇಕಾಗಿ ಕೋರುತ್ತೇವೆ ಎಂದರು.
ಪ್ರತಿಭಟನೆಯಲ್ಲಿ ಎ.ಒ.ಹುಚ್ಚಪ್ಪ, ಎಸ್.ಒ ಗಳಾದ ನಾರಾಣಪ್ಪ, ಉಮೇಶ್ವರಯ್ಯ, ಧರಣೇಶ್, ಜಾನ್, ಕಾಂತರಾಜು ಸಿಬ್ಬಂದಿಗಳಾದ ಅಂಜನ್ ಸ್ವಾಮಿ, ಕಲ್ಲೇಗೌಡ, ವಿನಯ್, ಪುಟ್ಟರಾಜ್, ಬೈರಪ್ಪ ಸೇರಿz Àಂತೆ ಲೈನ್ ಮೆನ್ , ಗ್ಯಾಂಗ್ ಮಾನ್ ಹಾಗೂ ನಿವೃತ್ತ ನೌಕರರು ಇದ್ದರು.

(Visited 1 times, 1 visits today)