BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
news

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್ ಕಂಪೆನಿಗೆ ನೀಡಬಾರದು
By News Desk BenkiyabaleUpdated:June 18, 2026 1:42 pm

ತುಮಕೂರು: ಸಾರ್ವಜನಿಕ ಉದ್ಯಮವಾದ ಕರ್ನಾಟಕ ವಿದ್ಯುತ್ ವಿತರಣಾ ಸಂಸ್ಥೆಯಾದ ಕೆಪಿಟಿಸಿಎಲ್ ಮತ್ತು ಬೆಸ್ಕಾಂ, ಎಸ್ಕಾಂಗೆ ಸಂಬAಧಿಸಿದ ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್ ಕಂಪೆನಿಗೆ ನೀಡಬಾರದು ಎಂದು ಆಗ್ರಹಿಸಿ ನಗರದ ಕೋತಿತೋಪಿನಲ್ಲಿರುವ ಬೆಸ್ಕಾಂ ಕಚೇರಿ ಮುಂಭಾಗ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು.
ಬೆಸ್ಕಾಂ ಕಚೇರಿ ಮುಂಭಾಗ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಹಾಗೂ ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಜಮಾಯಿಸಿ ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳನ್ನು ಉಳಿಸಿ-ನಮ್ಮ ಹಕ್ಕನ್ನು ರಕ್ಷಿಸಿ ಎಂಬ ಕರಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮಾತನಾಡಿ, ಸರ್ಕಾರಿ ಸ್ವಾಮ್ಯದ ಬೆಸ್ಕಾಂ ಇಲಾಖೆ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದು ಆತಂಕ ಮೂಡಿಸಿದೆ. ಖಾಸಗಿ ಕಂಪೆನಿಯಾದ ಟಾಟಾ ಪವರ್ ಕಂಪೆನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡಿದರೆ ಗ್ರಾಹಕರು, ರೈತರಿಗೆ ತುಂಬಾ ತೊಂದರೆಯಾಗಲಿದೆ. ಜತೆಗೆ ನೌಕರರ ಸೇವಾ ಭದ್ರತೆಗೂ ಧಕ್ಕೆ ಉಂಟಾಗಲಿದೆ ಎಂದರು.
ವಿದ್ಯುತ್ ಕ್ಷೇತ್ರ ಖಾಸಗೀಕರಣದಿಂದ ಹಲವಾರು ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಇದು ರೈತ ವಿರೋಧಿ ಹಾಗೂ ಜನ ವಿರೋಧಿಯಾಗಿದ್ದು, ಸರ್ಕಾರ ಕೂಡಲೇ ಈ ಚಿಂತನೆಯನ್ನು ಕೈ ಬಿಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಕಂಪೆನಿಗೆ ನೀಡುತ್ತಿರುವುದನ್ನು ಬೆಸ್ಕಾಂ ನೌಕರರ ಒಕ್ಕೂಟ, ರೈತರು, ಗ್ರಾಹಕರು ಹಾಗೂ ಗುತ್ತಿಗೆದಾರರು ಎಲ್ಲರೂ ಸೇರಿ ವಿರೋಧ ಮಾಡಬೇಕು. ಖಾಸಗೀಕರಣದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಗ್ರಾಹಕರಿಗೆ ಮನದಟ್ಟು ಮಾಡಬೇಕು ಎಂದರು.
ಗ್ರಾಹಕರೇ ನಮ್ಮ ದೇವರು. ಗ್ರಾಹಕರಿಗೆ ಸೇವೆ ಸಲ್ಲಿಸುವುದು ನಮ್ಮ ಮುಖ್ಯ ಕರ್ತವ್ಯ ಎಂದ ಅವರು, ಈ ಹಿಂದೆ ವಿದ್ಯುತ್ ಉತ್ಪಾದನೆ ಮಾಡಲು ಹಾಗೂ ಬೆಟ್ಟಗುಡ್ಡಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಯಾವ ಖಾಸಗಿ ಕಂಪೆನಿಗಳು ಮುಂದೆ ಬಂದಿರಲಿಲ್ಲ. ಆ ಕೆಲಸವನ್ನು ನಮ್ಮ ಇಲಾಖೆಯೇ ಮಾಡಿತು. ಆದರೂ ಸಹ ಈಗ ಖಾಸಗೀಕರಣ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈಗಾಗಲೇ ರಿಲೆಯನ್ಸ್ನವರು ಉತ್ತಮವಾಗಿ ಕೆಲಸ ಮಾಡುತ್ತಿದ್ದ ಬಿಎಸ್‌ಎನ್‌ಎಲ್‌ನ್ನು ಮೂಲೆ ಗುಂಪು ಮಾಡಿ ಸಿಮ್ ಕಾರ್ಡ್ಗಳನ್ನು ಉಚಿತವಾಗಿ ಕೊಟ್ಟು ನಂತರ ಬೆಲೆ ನಿಗದಿ ಮಾಡಿ ಹಣ ವಸೂಲಿ ಮಾಡುತ್ತಿರುವುದನ್ನು ನಾವೆಲ್ಲಾ ನೋಡುತ್ತಿದ್ದೇವೆ. ಅದೇ ಮಾದರಿಯಲ್ಲಿ ಈಗ ವಿದ್ಯುತ್ ಇಲಾಖೆಯನ್ನು ಮೂಲೆ ಗುಂಪು ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಪ್ರಸ್ತುತ ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆಯಡಿ ಎಲ್ಲ ಮನೆಗಳಿಗೆ ಉಚಿತ ವಿದ್ಯುತ್ ನೀಡಿದೆ. ಯಾವುದೇ ಆದಾಯ ಇಲ್ಲದಿದ್ದರೆ ನಮ್ಮ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
ಸರ್ಕಾರದಿಂದ ಸಬ್ಸಿಡಿ ಬಂದರಷ್ಟೇ ಖಾಸಗಿ ಕಂಪೆನಿಗಳು ರೈತರಿಗೆ ವಿದ್ಯುತ್ ಸಂಪರ್ಕ ನೀಡುತ್ತವೆ. ಇಲ್ಲದಿದ್ದರೆ ವಿದ್ಯುತ್ ಸಂಪರ್ಕವನ್ನೇ ಕಡಿತ ಮಾಡುತ್ತವೆ. ಇದರಿಂದ ರೈತರು ಹಾಗೂ ಗ್ರಾಹಕರಿಗೆ ತುಂಬಾ ತೊಂದರೆಯಾಗುತ್ತದೆ. ಜತೆಗೆ ನಮ್ಮ ಅಧಿಕಾರಿಗಳು, ನೌಕರರ ಹುದ್ದೆಗಳಿಗೆ ಕತ್ತರಿ ಬೀಳುತ್ತದೆ. ಆದ್ದರಿಂದ ಗ್ರಾಹಕರು, ರೈತರು, ಸಂಘ ಸಂಸ್ಥೆಗಳು ಎಲ್ಲರೂ ಜತೆಗೂಡಿ ಹೋರಾಟ ನಡೆಸುವ ಮೂಲಕ ವಿದ್ಯುತ್ ಕ್ಷೇತ್ರ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಎಂದರು.
ಕೆಪಿಟಿಎಲ್ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ಮಾತನಾಡಿ, ವಿದ್ಯುತ್ ಕಂಪನಿ ಖಾಸಗೀಕರಣಗೊಂಡರೆ ಉದ್ಯೋಗ ಭದ್ರತೆ ಇಲ್ಲದಂತಾಗಿ ನೌಕರರು ಹಾಗೂ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿವೆ. ಖಾಸಗಿ ಕಂಪೆನಿಗಳು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿ, ಕೆಲಸಕ್ಕೆ ತಕ್ಕಷ್ಟು ಮಾತ್ರ ಸಂಬಳ ನೀಡುವುದರಿಂದ ನೌಕರರು ಹಲವಾರು ಸಮಸ್ಯೆಗಳಿಗೆ ಗುರಿಯಾಗುತ್ತಾರೆ ಎಂದರು.
ಇದರಿಂದ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ, ಎಸ್ಕಾಂಗಳು ತೀವ್ರ ಸಂಕಷ್ಟಕ್ಕೆ ಸಿಲುಕಲಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿದ್ಯುತ್ ಕ್ಷೇತ್ರ ಖಾಸಗೀಕರಣಕ್ಕೆ ಅವಕಾಶ ನೀಡಬಾರದು. ಇದನ್ನು ವಿರೋಧಿಸಿ ಹೋರಾಟ ನಡೆಸಬೇಕು ಎಂದು ಹೇಳಿದರು.
ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮಾತನಾಡಿ, ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್‌ನಲ್ಲಿ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಟಾಟಾ ಪವರ್ ಕಂಪೆನಿಯರು ನಮ್ಮ ನೌಕರರಿಗೆ ಕೆಲಸ ಕೊಡದೆ ಅನಿವಾರ್ಯವಾಗಿ ಸ್ವಯಂ ನಿವೃತ್ತಿ ಪಡೆದುಕೊಳ್ಳುವಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತಾರೆ. ಹಾಗಾಗಿ ನೌಕರರು, ನೌಕರ ಸಂಬAಧಿತ ಸಂಘಗಳು, ಒಕ್ಕೂಟಗಳು ಜತೆಗೂಡಿ ಖಾಸಗೀಕರಣ ವಿರೋಧಿಸಿ ಉಗ್ರ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ರಾಜ್ಯದಲ್ಲಿ ೧೯ ಜಿಲ್ಲೆಗಳಲ್ಲಿ ಟಾಟಾ ಪವರ್ ಕಂಪೆನಿಯರು ಪರವಾನಗಿ ಪಡೆದುಕೊಳ್ಳುತ್ತಿದ್ದು, ಈಗಾಗಲೇ ಅವರೇ ಇಂಜಿನಿಯರ್‌ಗಳು, ಲೈನ್‌ಮನ್‌ಗಳನ್ನು ನೇಮಕ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಇದರಿಂದ ಬೆಸ್ಕಾಂ ನೌಕರರಿಗೆ ತೊಂದರೆಯಾಗಲಿದೆ ಎಂದರು.
ರಿಲೆಯನ್ಸ್ನವರು ಸಹ ೧೪ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಗಿಯನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ ಪೈಕಿ ಪ್ರಮುಖವಾಗಿ ಬೆಂಗಳೂರು ನಗರವನ್ನು ಪಡೆದುಕೊಂಡಿದ್ದಾರೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಇದರ ವಿರುದ್ಧ ಪತ್ರ ಚಳವಳಿಯನ್ನು ಮಾಡಬೇಕು ಎಂದು ಅವರು ಹೇಳಿದರು.
ಪ್ರತಿಭಟನೆ ಬಳಿಕ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ನೌಕರರು ಎಂದಿನAತೆ ಕರ್ತವ್ಯಕ್ಕೆ ಹಾಜರಾದರು.
ಪ್ರತಿಭಟನೆಯಲ್ಲಿ ಬೆಸ್ಕಾಂನ ಅಧಿಕಾರಿಗಳಾದ ಪ್ರಕಾಶ್ ಎಂ.ವಿ., ಪ್ರಶಾಂತ್ ಕೂಡ್ಲಿಗಿ, ಜಗದೀಶ್ ಜಿ., ಸೋಮಶೇಖರಗೌಡ, ಪುರುಷೋತ್ತಮ್, ಹೆಚ್. ತಿಮ್ಮಪ್ಪ, ಎಂ.ಹೆಚ್. ವೆಂಕಟರಮಣಯ್ಯ ಸೇರಿದಂತೆ ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಅಧಿಕಾರಿಗಳು, ಲೈನ್‌ಮನ್‌ಗಳು ಸೇರಿದಂತೆ ನೂರಾರು ಮಂದಿ ನೌಕರರು ಪಾಲ್ಗೊಂಡಿದ್ದರು.

(Visited 1 times, 1 visits today)
bescom escom kptcl pretest tata power ltd tumkuru
Previous Articleಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
Next Article ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
News Desk Benkiyabale

Related Posts

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm news

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm news

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news
ತಾಜಾ ಸುದ್ಧಿಗಳು

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm
Our Youtube Channel
Our Picks

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

By News Desk BenkiyabaleJune 18, 2026 1:49 pm

ಕೊರಟಗೆರೆ: ಪ್ರತಿನಿತ್ಯದಂತೆ ತನ್ನ ತೋಟ ನೋಡಿಕೊಂಡು ಬರಲು ಹೋದ ವೃದ್ದೆಗೆ ಅಪರಿಚಿತ ವ್ಯಕ್ತಿಗಳು ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ…

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.