BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
news

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

ಚಿಕ್ಕನಾಯಕನಹಳ್ಳಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಾಲಕರ ಹಾಸ್ಟೆಲ್‌ನಲ್ಲಿ ನೂರಾರು ಸಮಸ್ಯೆ
By News Desk BenkiyabaleUpdated:June 18, 2026 1:46 pm

ಚಿಕ್ಕನಾಯಕನಹಳ್ಳಿ: ಜಿಲ್ಲೆಯ ಗಡಿ ಭಾಗದ ತಾಲೂಕಾದ ಚಿಕ್ಕನಾಯಕನಹಳ್ಳಿಯಲ್ಲಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರವಾಗಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸುವಲ್ಲಿ ವಿದ್ಯಾರ್ಥಿ ನಿಲಯ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಎಬಿವಿಪಿ ಮುಖಂಡರು, ಸರ್ಕಾರದಿಂದ ಸಾಕಷ್ಟು ಅನುದಾನ ಹಾಗೂ ಯೋಜನೆಗಳು ಜಾರಿಯಾದರೂ ಅವುಗಳ ಪ್ರಯೋಜನ ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ಪೌಷ್ಟಿಕ ಆಹಾರ ವಿತರಿಸುವಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ತಕ್ಷಣವೇ ಗುಣಮಟ್ಟದ ಮತ್ತು ಪೌಷ್ಟಿಕ ಆಹಾರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.


ಇನ್ನೊಂದೆಡೆ, ವಿದ್ಯಾರ್ಥಿ ನಿಲಯದಲ್ಲಿ ಸುರಕ್ಷತೆಯ ಕೊರತೆ ಕೂಡ ಕಂಡುಬAದಿದೆ. ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸದಿರುವುದು ಹಾಗೂ ವಾಚ್‌ಮನ್ ಇಲ್ಲದಿರುವುದರಿಂದ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಅನಾಹುತ ಸಂಭವಿಸಿದರೆ ಅದರ ಹೊಣೆ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ,
ವಿದ್ಯಾರ್ಥಿಗಳ ವಸತಿ ಕೊಠಡಿಗಳಲ್ಲಿ ಸರಿಯಾದ ಬೆಳಕು ಹಾಗೂ ಗಾಳಿಯ ವ್ಯವಸ್ಥೆ ಇಲ್ಲದಿರುವುದು, ಫ್ಯಾನ್‌ಗಳು ಬಳಕೆಗೆ ಯೋಗ್ಯವಾಗಿಲ್ಲದಿರುವುದು ಹಾಗೂ ವಿದ್ಯುತ್ ಸ್ವಿಚ್ ಬಾಕ್ಸ್ಗಳು ಸುರಕ್ಷಿತ ಸ್ಥಿತಿಯಲ್ಲಿ ಇಲ್ಲದಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ ಎಂದು ಎಬಿವಿಪಿ ಆರೋಪಿಸಿದೆ. ಹಾಸ್ಟೆಲ್ ಸುತ್ತಮುತ್ತ ಹಸಿರು ತ್ಯಾಜ್ಯ ಮತ್ತು ಕಸದ ರಾಶಿ ಹೆಚ್ಚಾಗಿದ್ದು, ಹಲವು ಬಾರಿ ಹಾವುಗಳು ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.


ಶೌಚಾಲಯಗಳಲ್ಲಿನ ಅಸ್ವಚ್ಛತೆ, ನೀರಿನ ಪೋಲು, ಬಿಸಿ ನೀರಿನ ವ್ಯವಸ್ಥೆಯ ಕೊರತೆ ಹಾಗೂ ನೀರು ಸಂಗ್ರಹಕಗಳನ್ನು ಸ್ವಚ್ಛಗೊಳಿಸದಿರುವ ಕಾರಣ ವಿದ್ಯಾರ್ಥಿಗಳಲ್ಲಿ ಚರ್ಮರೋಗ ಮತ್ತು ಅಲರ್ಜಿ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ತಕ್ಷಣವೇ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಿ ಆರೋಗ್ಯಕರ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.
ಇದೇ ವೇಳೆ, ವಿದ್ಯಾರ್ಥಿಗಳು ಬಳಸುವ ಹಾಸಿಗೆಗಳು ಧೂಳು ಹಿಡಿದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದ್ದು, ಶ್ವಾಸಕೋಶ ಸಂಬAಧಿತ ಕಾಯಿಲೆಗಳು ಮತ್ತು ಅಸ್ತಮಾದಂತಹ ತೊಂದರೆಗಳಿಗೆ ದಾರಿ ಮಾಡಿಕೊಡುತ್ತಿವೆ ಎಂದು ಎಬಿವಿಪಿ ತಿಳಿಸಿದೆ.
ನಿಲಯಪಾಲಕರು ಹಾಗೂ ಅಡುಗೆಯವರ ನಿರ್ಲಕ್ಷ÷್ಯದಿಂದ ಹಾಸ್ಟೆಲ್‌ನಲ್ಲಿ ಅನೇಕ ಸಮಸ್ಯೆಗಳು ಉಂಟಾಗಿವೆ ಎಂದು ಆರೋಪಿಸಿರುವ ವಿದ್ಯಾರ್ಥಿ ಪರಿಷತ್, ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದೆ.
ಈ ಎಲ್ಲಾ ಸಮಸ್ಯೆಗಳನ್ನು ೧೫ ದಿನಗಳ ಒಳಗಾಗಿ ಬಗೆಹರಿಸಬೇಕು, ಇಲ್ಲವಾದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಬಿವಿಪಿ ಮುಖಂಡರು ಸಮಾಜ ಕಲ್ಯಾಣ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ವಿದ್ಯಾರ್ಥಿ ನಿಲಯಗಳು ಅಭಿವೃದ್ಧಿಯ ಕೇಂದ್ರಗಳಾಗಬೇಕೇ ಹೊರತು, ಅವ್ಯವಸ್ಥೆಯ ಸಂಕೇತಗಳಾಗಬಾರದು. ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

(Visited 1 times, 1 visits today)
chikkanayakanahhali huliyar news karnataka local news sc st hostel problem tumkur
Previous Articleಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
Next Article ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
News Desk Benkiyabale

Related Posts

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm news

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm news

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news
ತಾಜಾ ಸುದ್ಧಿಗಳು

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm
Our Youtube Channel
Our Picks

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

By News Desk BenkiyabaleJune 18, 2026 1:49 pm

ಕೊರಟಗೆರೆ: ಪ್ರತಿನಿತ್ಯದಂತೆ ತನ್ನ ತೋಟ ನೋಡಿಕೊಂಡು ಬರಲು ಹೋದ ವೃದ್ದೆಗೆ ಅಪರಿಚಿತ ವ್ಯಕ್ತಿಗಳು ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ…

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.