ತುಮಕೂರು: ಯುವಕರ ಕಣ್ಣಿನಲ್ಲಿ ಭಾರತದ ಭವಿಷ್ಯ ಅಡಗಿದೆ. ದೇಶದ ಸಾಮಾನ್ಯ ಜನರಿಗೂ ಅಗತ್ಯ ವಸ್ತುಗಳನ್ನು ಕೊಳ್ಳುವ ಹಾಗೂ ಹಸಿವನ್ನು ನೀಗಿಸಿಕೊಳ್ಳುವ ಶಕ್ತಿ ಬಂದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ. ಇವೆಲ್ಲವೂ ಸಾಕಾರಗೊಳ್ಳಲು ಕೇಂದ್ರ ಸರ್ಕಾರದ ಪಿಎಂ ಉಷಾ ಯೋಜನೆ ಅತ್ಯಂತ ಸಹಕಾರಿಯಾಗಲಿದೆ ಎಂದು ತುಮಕೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಹೆಚ್. ಎಸ್. ಮೋಹನ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ವ್ಯಾವಹಾರ ಆಡಳಿತ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ, ಪಿಎಂ ಉಷಾ ಯೋಜನೆಯಡಿ ವಿಶ್ವವಿದ್ಯಾನಿಲಯದ ಜ್ಞಾನಸಿರಿ ಆವರಣದಲ್ಲಿ ಜೂ. ೨೪ ಬುಧವಾರ ದಂದು ಹಮ್ಮಿಕೊಳ್ಳಲಾಗಿದ್ದ “ಸುಸ್ಥಿರ ಅಭಿವೃದ್ಧಿ ಗುರಿಗಳು” ಎಂಬ ವಿಷಯದ ಕುರಿತ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕೌಶಲ್ಯಗಳನ್ನು ರೂಢಿಸಿಕೊಂಡಾಗ ಮಾತ್ರ ಸಾಧನೆಯ ಹಾದಿಯಲ್ಲಿ ಸಾಗಲು ಸಾಧ್ಯ. ನಿರಂತರ ಪ್ರಯತ್ನ, ಕಠಿಣ ಶ್ರಮ ಹಾಗೂ ಕಲಿಕೆಯ ಜೊತೆಗೆ ಜೀವನದ ನೋವು-ನಲಿವುಗಳ ಅನುಭವಗಳ ಬಗ್ಗೆ ಅರಿವು ಮೂಡಿಸಿಕೊಂಡಾಗ ಮಾತ್ರ ಯಶಸ್ಸು ಲಭಿಸುತ್ತದೆ. ಸರಿಯಾದ ಬುನಾದಿ ಮತ್ತು ಗುರಿ ಇಲ್ಲದಿದ್ದರೆ ವಿಫಲವಾಗುವುದು ಖಂಡಿತ. ಆದ್ದರಿಂದ ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ವಿದ್ಯಾರ್ಥಿ ಜೀವನದಲ್ಲೇ ಸದುಪಯೋಗಪಡಿಸಿಕೊಳ್ಳಬೇಕು, ಅವಕಾಶ ವಂಚಿತರಾಗಿ ನಂತರ ಮರುಗಬಾರದು ಎಂದರು.
ತುಮಕೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರು ಹಾಗೂ ಸಂಶೋಧನಾ ನಿರ್ದೇಶಕರಾದ ಪ್ರೊ. ವಿಲಾಸ್ ಕದ್ರೋಲ್ಕರ್ ಅವರು ಮಾತನಾಡಿ ಇತ್ತೀಚಿನ ಜಾಗತಿಕ ಯುದ್ಧದ ಪರಿಸ್ಥಿತಿಯ ನಡುವೆ ನಾವೆಲ್ಲರೂ ಸುಸ್ಥಿರ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದೇವೆ. ಜ್ಞಾನ, ನಾವೀನ್ಯತೆ ಮತ್ತು ಜವಾಬ್ದಾರಿಯುತ ನಿರ್ವಹಣೆಯ ಮೂಲಕ ಭಾರತದ ಭವಿಷ್ಯದ ನಾಯಕರನ್ನು ಸಬಲೀಕರಣಗೊಳಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಭವಿಷ್ಯದಲ್ಲಿ ನಾವು ಹೇಗೆ ಬಾಳಬೇಕು ಎಂಬುದನ್ನು ಅರಿತುಕೊಳ್ಳುವ ಮಹತ್ವದ ಸ್ಥಿತಿಯಲ್ಲಿ ನಾವಿಂದು ನಿಂತಿದ್ದೇವೆ. ಪ್ರಕೃತಿ ಮತ್ತು ಪರಿಸರದ ಬಗ್ಗೆ ಕಾಳಜಿ ವಹಿಸುವುದು ಹಾಗೂ ಮಹಿಳೆಯರಿಗೆ ಗೌರವ ನೀಡುವ ಕೆಲಸ ನಮ್ಮಿಂದ ಮೊದಲಾಗಬೇಕು ಎಂದರು.
ಭಾರತವು ಸುಸ್ಥಿರ ಅಭಿವೃದ್ಧಿಗಾಗಿ ಈಗಾಗಲೇ ಹಲವು ಪ್ರಮುಖ ಅಂಶಗಳನ್ನು ಅಳವಡಿಸಿಕೊಂಡಿದೆ. ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಅಂತರರಾಷ್ಟಿçÃಯ ಸೌರ ಒಕ್ಕೂಟದ ಮೂಲಕ ಭಾರತ ಜಾಗತಿಕ ಮಟ್ಟದಲ್ಲಿ ನಾಯಕತ್ವ ಸಾಧಿಸಿದೆ. ದೇಶದ ಪ್ರತಿ ಪ್ರಜೆಗೂ ನೈರ್ಮಲ್ಯ ಮತ್ತು ಸುರಕ್ಷಿತ ಕುಡಿಯುವ ನೀರನ್ನು ತಲುಪಿಸುವ ನಿಟ್ಟಿನಲ್ಲಿ ಉತ್ತಮ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿ ಹಾಗೂ ಸಾವಯವ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದ್ದು, ನಗರ ಪ್ರದೇಶಗಳಲ್ಲಿ ಮಾಲಿನ್ಯ ನಿಯಂತ್ರಿಸಲು ಎಲೆಕ್ಟಿçಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ. ಆ ಮೂಲಕ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸುವ ಪ್ರಮುಖ ಗುರಿಗಳನ್ನು ದೇಶ ಹೊಂದಿದೆ ಎಂದರು.
ನಮ್ಮ ಕೃಷಿ ವಲಯವು ಇಂದಿಗೂ ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿರುವುದರಿAದ, ಹವಾಮಾನ ಬದಲಾವಣೆಗಳು ಆಹಾರ ಭದ್ರತೆ ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರುತ್ತಿವೆ ಎಂದರು.
ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ಪ್ರಾಧ್ಯಾಪಕರಾದ ಪ್ರೊ. ನೂರ್ ಅಫ್ಜಾ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಮೈಸೂರು ವಿಶ್ವವಿದ್ಯಾನಿಲಯದ ಬಿ.ಎನ್. ಬಹದ್ದೂರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಸಂಸ್ಥೆಯ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಮಹೇಶ್ .ಆರ್. ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗದ ಪ್ರಾಧ್ಯಾಪಕರಾದ ಡಾ. ಶಶಿಧರ್ .ಆರ್. ಉಪಸ್ಥಿತರಿದ್ದರು.

(Visited 1 times, 1 visits today)