BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
  • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ
  • ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
news

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

By News Desk BenkiyabaleUpdated:June 29, 2026 5:35 pm

ಶಿರಾ: ರೈತರು ಭೂಮಿಯನ್ನು ಹೊಂದಿರುವುದಷ್ಟೇ ಅಲ್ಲ, ತಮ್ಮ ಜಮೀನುಗಳ ಬಗ್ಗೆ ಕಾನೂನು ಅರಿವು ಅವಶ್ಯಕವಾಗಿದೆ. ಹಕ್ಕುಗಳು ಮತ್ತು ದಾಖಲಾತಿಗಳ ಬಗ್ಗೆ ಸರ್ಕಾರ ಕೈಗೊಂಡಿರುವ ಯೋಜನೆಗಳ ಭೂ ಸುಧಾರಣೆ ಬಗ್ಗೆ ರೈತರು ತಿಳಿದುಕೊಳ್ಳುವುದಲ್ಲದೆ, ತಮ್ಮ ಹಕ್ಕನ್ನು ತಾವೇ ಪಡೆಯುವ ಜ್ಞಾನವನ್ನು ಪಡೆದಾಗ ಮಾತ್ರ ಭೂ ಒಡೆತನ ಹೊಂದಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್.ಲಿಂಗಪ್ಪ ತಿಳಿಸಿದರು.
ಶಿರಾ ತಾಲ್ಲೂಕಿನ ಗುಮ್ಮನಹಳ್ಳಿಯ ಲೋಹಿಯಾ ಸಮಾತಾ ವಿದ್ಯಾಲಯದಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ನಾಯಕತ್ವದ ಶಿಬಿರದಲ್ಲಿ ಭೂಮಿ ಮತ್ತು ಭೂ ಕಂದಾಯ ಕಾನೂನುಗಳು, ರೈತರ ಹಕ್ಕಗಳು ಮತ್ತು ಪರಿಹಾರ ವಿಷಯ ಕುರಿತು ಮಾತನಾಡಿದ ಅವರು, ಭೂಕಂದಾಯ ಇತಿಹಾಸವು ಕೇವಲ ತೆರಿಗೆಗಳ ಸಂಗ್ರಹಣೆಯ ಕಥಾನಕವಲ್ಲ ಅದು ಸಮಾಜದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ವಿಕಾಸಗೊಂಡಿದ್ದರ ಪ್ರತಿಬಿಂಬವಾಗಿದೆ. ಭೂಮಿ ಎಂಬ ಸಂಪತ್ತು ಮಾನವ ಸಂಸ್ಕೃತಿಯಲ್ಲಿ ಮಹತ್ವ ಹೊಂದಿದೆ. ಪ್ರಾಚೀನ ಕೃಷಿ ಆರ್ಥಿಕತೆಯಿಂದ ಪ್ರಸ್ತುತ ಆಡಳಿತ ವ್ಯವಸ್ಥೆಗಳವರೆಗೆ ಭೂಮಿ ಮತ್ತು ಭೂಕಂದಾಯ ವ್ಯವಸ್ಥೆಗಳ ನಿರ್ವಹಣೆ, ಆಳ್ವಿಕೆ, ನೀತಿಗಳು ಮತ್ತು ವ್ಯಕ್ತಿಗಳ ಜೀವನವನ್ನು ಶಾಶ್ವತವಾಗಿ ರೂಪಿಸುತ್ತವೆ ಎಂದರು.
ಇ-ಜಮಾಬಂದಿ ಜಾರಿ: ಮಾ.೧೨, ೨೫ ರಂದು ವಿಧಾನ ಪರಿಷತ್‌ನಲ್ಲಿ ಪ್ರಶೋತ್ತರ ಸಮಯದಲ್ಲಿ ಕಂದಾಯ ಸಚಿವರು, ಇ-ಜಮಾ ಬಂಧಿ ಜಾರಿಯ ಬಗ್ಗೆ, ಗ್ರಾಮ, ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ದಗೊಳಿಸುವ ವಿಧಾನದ ಪ್ರತಿಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾAಶವನ್ನೂ ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇದು ಜನರಿಂದ ನಡೆಯುವ ಗ್ರಾ.ಪಂನ ವಾರ್ಷಿಕ ಆದಾಯ ಮತ್ತು ವೆಚ್ಚಗಳ ಭೌತಿಕ ಮತ್ತು ಆರ್ಥಿಕ ಲೆಕ್ಕ ಪರಿಶೀಲನೆಯಾಗಿದೆ. ಇ ಜಮಾಬಂದಿ ಎಂದರೆ ಜಮಾಬಂದಿಯ ಆನ್‌ಲೈನ್ ಆವೃತ್ತಿ ಆಗಿದ್ದು, ಇದು ಹಕ್ಕುಗಳ ದಾಖಲೆ ಅಥವಾ ಭೂ ಮಾಲೀಕತ್ವದ ದಾಖಲೆಗಳಿಗೆ ಅಧಿಕೃತ ದೃಢೀಕರಣವನು ನೀಡುತ್ತದೆ ಎಂದು ಹೇಳಿದರು.
ಶಿರಾ ತಹಶೀಲ್ದಾರ್ ಆನಂದ್ ಕುಮಾರ್ ಮಾತನಾಡಿ, ೮ ಸಾವಿರಕ್ಕೂ ಹೆಚ್ಚು ಜನರಿಗೆ ಕಂದಾಯ ಇಲಾಖೆಯ ಭೂ ಒಡತನಕ್ಕೆ ಸಂಬAಧಿಸಿದೆ, ಖಾತೆ, ಸಾಗುವಳಿ ಚೀಟಿ, ಪೌತಿ ಖಾತೆಗಳನ್ನು ಸಮಸ್ಯೆಗಳನ್ನು ಪರಿಹಾರ ಮಾಡಿ ರೈತರಿಗೆ ನೆರವು ನೀಡಿರುವುದಾಗಿ ತಿಳಿಸಿದರು.
ಶಿಬಿರದಲ್ಲಿ ರೈತ ಹೋರಾಟಗಾರರಾದ ಅನುಸೂಯಮ್ಮ, ದೊ.ರಂಗನಾಥಗೌಡ, ಪೂಜಾರಪ್ಪ, ಕೆ.ಟಿ.ಗಂಗಾಧರ್, ರಾಮಕೃಷ್ಣ ನೀರಕಲ್ಲು, ಚುಕ್ಕಿ ನಂಜುAಡಸ್ವಾಮಿ, ಹೊನ್ನೂರು ಪ್ರಕಾಶ್, ಸಮತಾ ವಿದ್ಯಾಲಯದ ವ್ಯವಸಾಪಕ ಗೋವಿಂದರಾಜು ಎನ್., ಸಂದೀಪ್ ಕೆ.ಆರ್., ಭಾಗವಹಿಸಿದ್ದರು.

(Visited 1 times, 1 visits today)
kannada today news sira news TUMKUR LOCAL NEWS tumkur taluk news
Previous Articleದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ
News Desk Benkiyabale

Related Posts

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm news

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm news

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm news
ತಾಜಾ ಸುದ್ಧಿಗಳು

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm
Our Youtube Channel
Our Picks

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

By News Desk BenkiyabaleJune 29, 2026 5:35 pm

ಶಿರಾ: ರೈತರು ಭೂಮಿಯನ್ನು ಹೊಂದಿರುವುದಷ್ಟೇ ಅಲ್ಲ, ತಮ್ಮ ಜಮೀನುಗಳ ಬಗ್ಗೆ ಕಾನೂನು ಅರಿವು ಅವಶ್ಯಕವಾಗಿದೆ. ಹಕ್ಕುಗಳು ಮತ್ತು ದಾಖಲಾತಿಗಳ ಬಗ್ಗೆ…

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.