
ತುಮಕೂರು: ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬAಧಿಸಿದAತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಯಾವುದೇ ಇಂತಹ ಪ್ರಕರಣಗಳು ನಡೆದಿಲ್ಲ ಹಾಗೂ ಸಫಾಯಿ ಕರ್ಮಚಾರಿಗಳು ಇರುವುದಿಲ್ಲವೆಂದು ವರದಿ ನೀಡಿದ್ದಾರೆ. ಆದರೂ ಇಂತಹ ಘಟನೆ ನಡೆದಿರುವುದು ದುರಾದೃಷ್ಟಕರ, ಘಟನೆಗೆ ಸಂಬAಧಿಸಿದAತೆ ತಪ್ಪಿತಸ್ಥರ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಘಟನೆಯಲ್ಲಿ ನೊಂದಿರುವ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.
ಘಟನೆ ನಡೆದು ೩ ದಿನಗಳು ಆಗಿದ್ದರೂ, ತಪ್ಪಿತಸ್ಥರನ್ನು ಈವರೆಗೆ ಬಂಧಿಸಲಾಗಿಲ್ಲ ಹಾಗೂ ಅಧಿಕಾರಿಗಳು ಘಟನೆಗೆ ಸಂಬAಧಿಸಿದAತೆ ಸರಿಯಾದ ಕ್ರಮ ಜರುಗಿಸದ ಕಾರಣ ಆಯೋಗ ಮಧ್ಯ ಪ್ರವೇಶ ಮಾಡಿದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಅಧಿಕಾರಿಗಳ ಹಂತದಲ್ಲಿ ಮಹಜರು ಇತ್ಯಾದಿ ಪ್ರಕ್ರಿಯೆಗಳು ನಡೆದಿವೆ. ಮುಂದಿನ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬAಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಮಲ ಹೊರುವ ಪದ್ಧತಿಗೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ನ ಆದೇಶ ಪ್ರಕಾರ ಸಂಬAಧಿಸಿದ ಉಪವಿಭಾಗಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಹಜರು ಮಾಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದ್ದರೂ ಉಪವಿಭಾಗಾಧಿಕಾರಿ ಅವರು ನೀಡುವ ದೂರಿನ ಆಧಾರದ ಮೇಲೆ ಪ್ರಕರಣ ನಿಲ್ಲಲಿದ್ದು, ತಕ್ಷಣ ಕಾರ್ಯೋನ್ಮುಖರಾಗಿ ದೂರು ದಾಖಲಿಸುವಂತೆ ಉಪವಿಭಾಗಾಧಿಕಾರಿಗೆ ಅವರು ಸೂಚನೆ ನೀಡಿದರು.
ಅಲ್ಲದೆ, ಪ್ರಕರಣ ಗಂಭೀರ ಸ್ವರೂಪದ್ದಾಗಿರುವುದರಿಂದ ಘಟನೆಯ ಸಂಬAಧಿಸಿದAತೆ ಕೈಗೊಂಡ ಕ್ರಮದ ಬಗ್ಗೆ ತಕ್ಷಣ ಆಯೋಗಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಅವರು ಸೂಚಿಸಿದರು.
ಕೆಇಬಿ ಸಮುದಾಯ ಭವನ ನಗರದ ಹೃದಯ ಭಾಗದಲ್ಲಿದ್ದು, ಯುಜಿಡಿ ವ್ಯವಸ್ಥೆಯ ಪಕ್ಕದಲ್ಲೇ ಪಿಟ್ ಗುಂಡಿಗಳನ್ನು ಯಾವ ಕಾರಣಕ್ಕೆ ಮಾಡಲಾಗಿದೆ? ಹಾಗೂ ಇಂತಹ ಸಮುದಾಯ ಭವನಗಳು, ಮಧುವೆ ಮಂಟಪಗಳು, ಹೋಟೆಲ್‌ಗಳು ಇತ್ಯಾದಿ ಕಟ್ಟಡಗಳ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಅನುಮತಿ ಕೊಡುವ ಮಹಾನಗರಪಾಲಿಕೆ ಇಂತಹ ವಿಷಯಗಳಲ್ಲಿ ಗಮನ ಹರಿಸುವುದಿಲ್ಲವೇ ಎಂಬ ಇತ್ಯಾದಿ ವಿಷಯಗಳ ಬಗ್ಗೆ ಅವರು ಗಂಭೀರವಾಗಿ ಪ್ರಶ್ನಿಸಿದರು.
ಪ್ರಕರಣದಲ್ಲಿ ಪರಿಶಿಷ್ಟ ಜಾತಿಯ ಕಾರ್ಮಿಕರನ್ನು ಬಳಸಿಕೊಂಡಿರುವುದು ಕಂಡು ಬಂದಿದ್ದು, ಉಪವಿಭಾಗಾಧಿಕಾರಿಗಳು ಈ ಕೂಡಲೇ ಯಾವ ಯಾವ ನಿಯಮಗಳಲ್ಲಿ ಪ್ರಾಥಮಿಕ ವರದಿಯಲ್ಲಿ ಕೇಸು ದಾಖಲಿಸಬಹುದೆಂಬ ಬಗ್ಗೆ ಗಮನಹರಿಸಿ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ, ಈ ಕೂಡಲೇ ಕೈಗೊಂಡ ಕ್ರಮದ ಬಗ್ಗೆ ಆಯೋಗ ಹಾಗೂ ಮಾಧ್ಯಮದವರಿಗೆ ಮಾಹಿತಿ ನೀಡುವಂತೆ ಅಧ್ಯಕ್ಷರು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಮಹಾನಗರಪಾಲಿಕೆ ಆಯುಕ್ತ ಬಿ.ಶುಭ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜûಂ ಜûಂ, ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಓಬಳೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


