BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ
  •  ಜು.೨೯ರವರೆಗೆ ಮನೆ-ಮನೆ ಭೇಟಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ
  • ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
  • ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ
news

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
By News Desk BenkiyabaleUpdated:July 01, 2026 5:01 pm

ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-೨೦೨೬ ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸುವ ಪ್ರಕ್ರಿಯೆ ನಡೆಯಿತು.
ತುಮಕೂರು ನಗರದ ನಜûರಾಬಾದ್ ಪ್ರದೇಶದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಖುದ್ದು ಮನೆ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತದಾರರಿಗೆ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ಮಹತ್ವ ಮತ್ತು ಮತದಾರರು ಮಾಡಬೇಕಿರುವ ಜವಾಬ್ದಾರಿಯ ಬಗ್ಗೆ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ತುಮಕೂರು ಜಿಲ್ಲೆಯಾದ್ಯಂತ ಜೂನ್ ೩೦ ರಿಂದ ಜುಲೈ ೨೯ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸಲಿದ್ದಾರೆ ಎಂದರು.
ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ-ಮನೆಗೆ ತೆರಳಿ ನಮೂನೆ ಭರ್ತಿ ಮಾಡಿಸಿಕೊಳ್ಳುವ ಪ್ರಕ್ರಿಯೆ ನಡೆಯುವುದರಿಂದ ಪ್ರತಿಯೊಬ್ಬ ಮತದಾರರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಮತಗಟ್ಟೆ ಅಧಿಕಾರಿಗಳು ೨-೩ ಬಾರಿ ಮನೆಗಳಿಗೆ ಭೇಟಿ ಸಂದರ್ಭದಲ್ಲೂ ಮನೆ ಬಾಗಿಲು ಮುಚ್ಚಿರುವುದು ಕಂಡು ಬಂದಲ್ಲಿ ಅದನ್ನು ಬೀಗ ಹಾಕಲಾಗಿದೆ ಎಂದು ನಮೂದಿಸುವರು. ಮತದಾರರ ಪಟ್ಟಿಯ ನಮೂನೆ ಭರ್ತಿ ಮಾಡಿ ಹಿಂದಿರುಗಿಸಿದ ಮನೆಗಳಿಗೆ ಪರಿಶೀಲನೆಯಾಗಿದೆ ಎಂದು ಸ್ಟಿಕರ್ ಅಂಟಿಸಲಾಗುವುದು ಎಂದು ಅವರು ತಿಳಿಸಿದರು.
ತುಮಕೂರು ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೨೬೨೭ ಮತಗಟ್ಟೆ ಅಧಿಕಾರಿಗಳ ಮೂಲಕ ಪ್ರತಿ ಮತದಾರರ ಮನೆಗಳನ್ನು ಭೇಟಿ ಮಾಡಿ ಪರಿಷ್ಕರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮನೆ ಭೇಟಿ ಕಾರ್ಯಕ್ರಮ ಜೂನ್ ೩೦ ರಿಂದ ಜುಲೈ ೨೯ರವರೆಗೆ ನಡೆಯಲಿದ್ದು, ಆಗಸ್ಟ್ ೫ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಾಗಿ ಸೆಪ್ಟೆಂಬರ್ ೪ರವರೆಗೂ ಅವಕಾಶವಿದ್ದು, ಆಗಸ್ಟ್ ೫ ರಿಂದ ಅಕ್ಟೋಬರ್ ೩ರವರೆಗೆ ಮತದಾರರಿಂದ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಶೀಲಿಸಿ ಸರಿಪಡಿಸಲು ಅವಕಾಶವಿರುತ್ತದೆ. ಈ ಹಂತದಲ್ಲಿ ಮತದಾರರು ಕರಡು ಮತದಾರರ ಪಟ್ಟಿಯಲ್ಲಿ ಗೊಂದಲಗಳಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಿ ಸರಿಪಡಿಸಿಕೊಳ್ಳಬಹುದಾಗಿದೆ. ಇದಕ್ಕಾಗಿ ಸಾಕಷ್ಟು ಸಮಯವನ್ನು ಮೀಸಲಿರಿಸಲಾಗಿದೆ. ಅಂತಿಮವಾಗಿ ಅಕ್ಟೋಬರ್ ೭ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
೨೦೦೨ರ ಮತದಾರರ ಪಟ್ಟಿಯಂತೆ ಈಗಾಗಲೇ ಮತದಾರರ ವಿವರಗಳನ್ನು ಮ್ಯಾಪಿಂಗ್ ಮಾಡಲಾಗಿದ್ದು, ಶೇ.೯೮ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ ಸುಮಾರು ೨೨ಲಕ್ಷ ಮತದಾರರಿದ್ದಾರೆ. ಈಗಾಗಲೇ ಎಲ್ಲಾ ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪರಿಷ್ಕರಣೆ ಪರಿಶೀಲನೆ ಸಂದರ್ಭದಲ್ಲಿ ನೀಡಬೇಕಿರುವ ೧೨ ದಾಖಲೆಗಳನ್ನು ಈ ಸಂದರ್ಭದಲ್ಲಿ ನೀಡುವ ಅವಶ್ಯಕತೆ ಇರುವುದಿಲ್ಲವೆಂದು ಅವರು ತಿಳಿಸಿದರು.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಇದೊಂದು ಪವಿತ್ರವಾದ ಮತ್ತು ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಪೂರ್ಣ ಕೆಲಸವಾಗಿದ್ದು, ಸಾರ್ವಜನಿಕರು ಯಾವುದೇ ಗೊಂದಲಗಳಿಲ್ಲದೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ದೇಶದ ಸಮಗ್ರತೆಯನ್ನು ಎತ್ತಿಹಿಡಿಯಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತೆ ಬಿ. ಶುಭ, ಚುನಾವಣಾ ತಹಶೀಲ್ದಾರ್ ನಾಗಭೂಷಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
kannada news local news SIR tumkur tumkur news ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
Next Article ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
News Desk Benkiyabale

Related Posts

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm news

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm news

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm news
ತಾಜಾ ಸುದ್ಧಿಗಳು

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

July 01, 2026 5:01 pm

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm
Our Youtube Channel
Our Picks

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

July 01, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

By News Desk BenkiyabaleJuly 01, 2026 5:13 pm

ತುಮಕೂರು : ಇಂದು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋಲನ ಕರ್ನಾಟಕದಿಂದ ನಗರದ ಕನ್ನಡ…

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.