
ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ಕೆ ಇಂದಿನಿAದ ಚಾಲನೆ ನೀಡಲಾಗಿದೆ. ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನ ಜುಲೈ ೨೯ಕ್ಕೆ ಮುಕ್ತಾಯವಾಗಲಿದೆ.
ಕೊರಟಗೆರೆ ಕ್ಷೇತ್ರದಲ್ಲಿ ಒಟ್ಟು ೬ ಹೋಬಳಿ, ೩೮೬ ಗ್ರಾಮ, ೨,೦೯,೯೪೫ ಮತದಾರರು ಹಾಗೂ ೨೪೦ ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ ಒಟ್ಟು ೨೪೦ ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ.
ಇಂದಿನಿ0ದ ತಾಲೂಕು ಮತ್ತು ಹೋಬಳಿ ನೋಡೆಲ್ ಅಧಿಕಾರಿಗಳು ಹಾಗೂ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಹೆಸರು, ವಿಳಾಸ, ಫೋಟೋ ಸೇರಿದಂತೆ ಎಲ್ಲಾ ವಿವರಗಳನ್ನು ಪರಿಶೀಲಿಸಲಿದ್ದಾರೆ. ಹೊಸ ಮತದಾರರ ಸೇರ್ಪಡೆ, ಮೃತರಾದವರ ಹೆಸರು ತೆಗೆಯುವಿಕೆ, ತಿದ್ದುಪಡಿ ಕಾರ್ಯ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ನೋಂದಣಾಧಿಕಾರಿ ವಿಜಯಲಕ್ಷಿ ಡಿ.ಆರ್, ಕೃಷಿ ಇಲಾಖೆ ಉಪನಿರ್ದೇಶಕ ಡಾ. ಚಂದ್ರಕುಮಾರ್ ಹಾಗೂ ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯ ಅಧಿಕಾರಿ ಉಮೇಶ್, ಕಸಬಾ ಹೋಬಳಿ ಆರ್ ಐ ಬಸವರಾಜು, ವಿ.ಎ.ಪವನ್ ಅವರು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳ ಕಾರ್ಯ ವೈಖರಿ ಪರಿಶೀಲಿಸಿದರು.

