ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.
ತಿಪಟೂರು ತಾಲ್ಲೂಕು ಸ್ವೀಪ್ ಸಮಿತಿ, ತಿಪಟೂರು ತಾಲ್ಲೂಕು ಪಂಚಾಯಿತಿ ವತಿಯಿಂದ ವಿಶೇಷ ಚೇತನರು ಹಮ್ಮಿಕೊಂಡಿದ್ದ ಬೈಕ್ ಜಾಥಾಕ್ಕೆ ಚಾಲನೆ ನೀಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್ ಎಂ ಸುದರ್ಶನ್ ಅವರು ಮಾತನಾಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಯಾವೋಬ್ಬ ಅರ್ಹ ಮತದಾರರೂ ಹೊರಗುಳಿಯಬಾರು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಭದ್ರವಾಗಿಸುವ ನಿಟ್ಟಿನಲ್ಲಿ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಆ ನಿಟ್ಟಿನಲ್ಲಿ ಭಾರತದ ಕಟ್ಟಕಡೆಯ ಅರ್ಹ ಮತದಾರರೂ ಎಲ್ಲಾ ವರ್ಗದವರೂ ಭಾಗವಹಿಸುವಂತೆ ಇಂದು ವಿಶೇಷ ಚೇತನರು ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಎಸ್ ಐ ಆರ್ ಕುರಿತು ತಿಪಟೂರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ವೇಳೆ ತಾಲ್ಲೂಕು ಪಂಚಾಯಿತಿ ನೋಡಲ್ ಅಧಿಕಾರಿಗಳಾದ ಹುಲಿರಾಜು, ವಿಶೇಷ ಚೇತನ ಸಂಘದ ಮುಖಂಡ ಇನಾಯತ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

(Visited 1 times, 1 visits today)