
ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕನ್‌ಗುನ್ಯಾ ರೋಗಗಳನ್ನು ನಿಯಂತ್ರಿಸಲು ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ಜನರಲ್ಲಿ ಮನವಿ ಮಾಡಿದರು.
ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಮಹಾನಗರಪಾಲಿಕೆ ಆವರಣದಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಡೆಂಗ್ಯೂ ಹಾಗೂ ಚಿಕನ್‌ಗುನ್ಯಾ ರೋಗವು ವೈರಾಣುಗಳಿಂದ ಬರುವ ಖಾಯಿಲೆಗಳಾಗಿದ್ದು, ಸೊಳ್ಳೆ ಕಡಿತದಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ರೋಗವನ್ನು ನಿಯಂತ್ರಿಸಲು ಜನ ಸಮುದಾಯದ ಸಹಭಾಗಿತ್ವ ಅಗತ್ಯ. ಮಳೆ ನೀರು ಸಂಗ್ರಹದ ಸ್ಥಳದಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಜನಸಮುದಾಯ ತಮ್ಮ ಮನೆಯ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದAತೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮವನಿ ಮಾಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|| ಹಂಸ ಟಿ.ಸ್ವಾಮಿ ಮಾತನಾಡಿದರು. ಮಹಾನಗರಪಾಲಿಕೆ ಆವರಣ (ಟೌನ್‌ಹಾಲ್)ದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯವರೆಗೆ ಸಾಗಿದ ಜಾಥಾ ಕಾರ್ಯಕ್ರಮದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು/ನೀಲಗಂಗಾ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಪಾಲ್ಗೊಂಡು ಜನರಲ್ಲಿ ಜಾಗೃತಿ ಮೂಡಿಸಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ|| ಲಕ್ಷಿö್ಮಕಾಂತ್, ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಲಕ್ಷಿö್ಮಕಾಂತಯ್ಯ, ಕೀಟ ಶಾಸ್ತçಜ್ಞರಾದ ಸುನಂದಾ ಒ. ಹಾಗೂ ಸಿದ್ದಪ್ಪ ಸ್ವಾಮಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸತೀಶ್ ಬಾಬು ಜಿ.ಜಿ., ನಾಗೇಶ್, ತಿಮ್ಮಯ್ಯ, ಮಂಜೇಗೌಡ, ನರೇಂದ್ರ, ಮೋಹನ್, ಚಂದ್ರಶೇಖರ್, ಕೀಟ ಸಂಗ್ರಹಕಾರ ಅರುಣ್ ಕುಮಾರ್ ಹಾಗೂ ಮತ್ತಿತರರು ಹಾಜರಿದ್ದರು.


