
ಪಾವಗಡ: ಪಟ್ಟಣದ ಶನಿಮಹಾತ್ಮ ವೃತ್ತದ ಬಳಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಪ್ರಕರಣವನ್ನು ಪಾವಗಡ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಜುಲೈ ೨ರಂದು ಸಂಜೆ ಸುಮಾರು ೫.೩೦ರ ವೇಳೆ ಆಂಧ್ರ ಪ್ರದೇಶದ ಮಡಕಶಿರ ಪಟ್ಟಣದ ಖಾಸಗಿ ಗಾರ್ಮೆಂಟ್ ಕಂಪನಿಯಲ್ಲಿ ಕೆಲಸ ಮುಗಿಸಿ ಸ್ವಗ್ರಾಮ ಪಳವಳ್ಳಿಗೆ ತೆರಳುತ್ತಿದ್ದ ನಾಗಲಕ್ಷಿ÷್ಮ ಯವರ ಮೇಲೆ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದ ಬಳಿಕ ಅವರ ಕಿವಿಯಲ್ಲಿದ್ದ ಜುಮುಕಿ ಹಾಗೂ ಕೊರಳಿನಲ್ಲಿದ್ದ ಮಾಂಗಲ್ಯ ಸರ ಸೇರಿದಂತೆ ಬೆಲೆಬಾಳುವ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾಗಿದ್ದ.
ಹಲ್ಲೆಯಿಂದ ಗಾಯಗೊಂಡ ನಾಗಲಕ್ಷಿ÷್ಮ ಯವರನ್ನು ಸ್ಥಳೀಯರು ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು,
ನಂತರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ತನಿಖೆ ಕೈಗೊಂಡು ಆಂಧ್ರ ಪ್ರದೇಶದ ಮಡಕಶಿರ ತಾಲ್ಲೂಕಿನ ಗೊಲ್ಲಪಲ್ಲಿ ಗ್ರಾಮದ ನಾಗಪ್ಪರವರ ಮಗನಾದ ಮಂಜುನಾಥ್ ರವರು ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಘಟನೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದರಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಬುಧವಾರ ಪಟ್ಟಣದ ಬಸ್ ನಿಲ್ದಾಣದ ಸಮೀಪ ಮಹಜರು ನಡೆಸಲಾಯಿತು.
ಪ್ರಕರಣದ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ವೃತ್ತ ನಿರೀಕ್ಷಕರಾದ ಸುರೇಶ್ ರವರ ಮಾರ್ಗದರ್ಶನದಲ್ಲಿ
ಸಬ್ ಇನ್ಸ್ಪೆಕ್ಟರ್‌ಗಳಾದ ಸುಧೀರ್ ಸುನೀಲ್, ಎ.ಎಸ್.ಐ ತಿಮ್ಮರಾಜು, ಪೊಲೀಸ್ ಸಿಬ್ಬಂದಿಗಳಾದ ಗೋಪಿ, ಶಿವಶಂಕರ್, ಸಂಪತ್, ದೀಪಕ್, ಮಾರುತಿ ಮತ್ತು ಮಾಂತೇಶ್ ಅವರ ತಂಡ ಪ್ರಮುಖ ಪಾತ್ರವಹಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


