ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬAಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.
ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ ೧೨೦೦ ವಿಶ್ವವಿದ್ಯಾಲಯಗಳು ಇದ್ದು, ೪೩,೦೦೦ ಕಾಲೇಜುಗಳು ಹಾಗೂ ೪೩ ದಶಲಕ್ಷ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದು ದೇಶದ ಬಹುದೊಡ್ಡ ಪರಿವರ್ತನೆ. ಆದರೆ ಜಾಗತಿಕವಾಗಿ ಉದ್ಯಮ ಮತ್ತು ಶಿಕ್ಷಣದ ನಡುವೆ ಅಂತರವಿದ್ದು, ತಾವು ಕೊಡುವ ಶಿಕ್ಷಣ ಉದ್ಯಮಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು. ಇದಕ್ಕಾಗಿ ಬೋಧಕರ ಕೊರತೆ ನೀಗಿಸಬೇಕು ಹಾಗೂ ಪ್ರಾದೇಶಿಕವಾಗಿ ಸಮಾನಾಂತರ ಬೋಧನೆಗೆ ವ್ಯವಸ್ಥೆ ಕಲ್ಪಿಸಬೇಕು. ಈ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಅವಶ್ಯಕತೆಯಿದೆ ಎಂದು ಅವರು ತಿಳಿಸಿದರು.
ಜಗತ್ತಿನ ಯಾವುದೇ ಮೂಲೆಗೆ ಹೋದರೂ ಇಂಜಿನಿಯರ್, ಡಾಕ್ಟರ್‌ಗಳು, ಪ್ರೊಪೆಸರ್‌ಗಳು ಭಾರತೀಯರಾಗಿರುತ್ತಾರೆ. ಅಲ್ಲದೆ, ವಿಶ್ವದ ೫೦೦ಕ್ಕೂ ಹೆಚ್ಚು ಅತಿ ದೊಡ್ಡ ಕಂಪನಿಗಳಲ್ಲಿ ಭಾರತೀಯರದೇ ಪಾರಮ್ಯ. ಇದು ಭಾರತದ ಶೈಕ್ಷಣಿಕ ವ್ಯವಸ್ಥೆಯನ್ನು ಸೂಚಿಸುತ್ತದೆ ಎಂದು ಅವರು ತಿಳಿಸಿದರು.
ಪ್ರಸಕ್ತ ದಿನಗಳಲ್ಲಿ ಬೆಂಗಳೂರು, ಮೈಸೂರು ನಂತರ ತುಮಕೂರಿನಲ್ಲಿ ಅತಿ ಹೆಚ್ಚು ವಿದ್ಯಾ ಸಂಸ್ಥೆಗಳಿದ್ದು, ಅತಿ ಹೆಚ್ಚು ವಿದ್ಯಾರ್ಥಿಗಳು ಓದುತ್ತಿರುವ ಸಾಲಿಗೆ ತುಮಕೂರು ಜಿಲ್ಲೆ ನಿಲ್ಲಲಿದೆ ಎಂದು ಅವರು ಹೇಳಿದರು.
ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, ಭಾರತ ಸರ್ಕಾರ ಹೊಸ ಶೈಕ್ಷಣಿಕ ನೀತಿಯ ಮೂಲಕ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದು ಹೇಳಿದರು.
ಪಿ.ಎಂ. ಉಷಾ ಯೋಜನೆಯಡಿ ವಿಶೇಷ ಅನುದಾನ ಪಡೆಯುತ್ತಿರುವ ೪ ವಿಶ್ವವಿದ್ಯಾನಿಲಯಗಳಲ್ಲಿ ತುಮಕೂರು ವಿಶ್ವವಿದ್ಯಾಲಯವೂ ಒಂದು ಎಂದು ಹೇಳಿದ ಅವರು, ತುಮಕೂರು ವಿಶ್ವವಿದ್ಯಾಲಯದ ಮೂಲ ಸೌಲಭ್ಯಾಭಿವೃದ್ಧಿಗಾಗಿ ಈ ಯೋಜನೆಯಡಿ ೨೦ ಕೋಟಿ ರೂ.ಗಳ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು, ಮುಂದಿನ ದಿನದಲ್ಲಿ ಇನ್ನೂ ೪೦ ಕೋಟಿ ರೂ.ಗಳ ಅನುದಾನ ವಿಶ್ವವಿದ್ಯಾಲಯಕ್ಕೆ ಬರಲಿದೆ ಎಂದು ತಿಳಿಸಿದರು.
ದೇಶದ ಅಭಿವೃದ್ಧಿ ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಅರಿತಿರುವ ಭಾರತ ಸರ್ಕಾರ ಶಿಕ್ಷಣಕ್ಕೆ ಉತ್ತೇಜನ ನೀಡಲು ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.
ಶಾಸಕ ಬಿ.ಸುರೇಶ್ ಗೌಡ ಅಧ್ಯಕ್ಷತೆವಹಿಸಿದ್ದರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಡಿ.ಟಿ. ಶ್ರೀನಿವಾಸ್, ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜûಂ ಜûಂ, ಸಿಂಡಿಕೇಟ್ ಮತ್ತು ಶೈಕ್ಷಣಿಕ ಮಂಡಳಿಯ ಸದಸ್ಯರು ಇದ್ದರು.

(Visited 1 times, 1 visits today)