
ತುಮಕೂರು: ಕೈಗಾರಿಕೆ ಮತ್ತು ವಾಣಿಜ್ಯ ಗ್ರಾಹಕರು ಡೀಸೆಲ್, ಪೆಟ್ರೋಲ್ ಮತ್ತು ನೈಸರ್ಗಿಕ ಅನಿಲವನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.
ಅನಧಿಕೃತ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟ, ಮಾರ್ಗಾಂತರ, ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಡೀಸೆಲ್, ಪೆಟ್ರೋಲ್ ಹಾಗೂ ನೈಸರ್ಗಿಕ ಅನಿಲವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದಲ್ಲಿ ಅಥವಾ ಇಂಧನದ ಅಸಾಧಾರಣ ದಾಸ್ತಾನು ಮತ್ತು ಚಲನವಲನಗಳು ಹಾಗೂ ತಾತ್ಕಾಲಿಕ ಕೊರತೆ ಸೃಷ್ಠಿಸುವಂತಹ ಪ್ರಕರಣಗಳು ಕಂಡು ಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ಮತ್ತು ಸಂಬAಧಪಟ್ಟ ನಿಯಮಗಳಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಕೈಗಾರಿಕೆ ಮತ್ತು ವಾಣಿಜ್ಯ ಗ್ರಾಹಕರು ಸಾರ್ವಜನಿಕ ವಲಯಗಳ ತೈಲ ಕಂಪನಿಗಳ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸಬಾರದು. ಬೃಹತ್ ಗ್ರಾಹಕರು ತಮ್ಮ ಬೇಡಿಕೆಯನ್ನು ಚಿಲ್ಲರೆ ಮಾರಾಟ ಮಳಿಗೆಗಳ ಮುಖಾಂತರ ಖರೀದಿ ಮಾಡದೇ ಕಡ್ಡಾಯವಾಗಿ ನೇರವಾಗಿ ಮುಖಾಂತರವೇ ಖರೀದಿಸಬೇಕು. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಗ್ರಾಹಕರು ಪ್ಲಾಸ್ಟಿಕ್ ಕ್ಯಾನ್ಗಳಲ್ಲಿ ಡೀಸೆಲ್ ಖರೀದಿಸುವುದನ್ನು ಉತ್ತೇಜಿಸಬಾರದು ಎಂದು ಅವರು ತಿಳಿಸಿದ್ದಾರೆ.

