
ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ತುಮಕೂರು ಜಿಲ್ಲೆಯ ಮಾನ್ಯತೆ ಪಡೆದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.
ಸಭೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಅಂಗವಾಗಿ ಮತದಾರರಿಗೆ ವಿತರಿಸಬೇಕಾದ ಗಣತಿ ನಮೂನೆಗಳ ಪೈಕಿ ದಿನಾಂಕ: ೧೪.೭.೨೦೨೬ ಸಮಯ ೧೨ ಗಂಟೆಗೆ ಶೇ.೯೮.೧೧ರಷ್ಟು ನಮೂನೆಗಳನ್ನು ಈಗಾಗಲೇ ವಿತರಿಸಲಾಗಿದ್ದು, ಉಳಿದ ವಿತರಣೆ ಕಾರ್ಯವನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಮತದಾರರಿಂದ ಭರ್ತಿ ಮಾಡಿ ಹಿಂತಿರುಗಿಸಲಾದ ಗಣತಿ ನಮೂನೆಗಳ ಪೈಕಿ ಶೇ.೩೪.೧೨ರಷ್ಟು ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಜುಲೈ ೨೯ರೊಳಗೆ ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಈಗಾಗಲೇ ೮೮೪೧ ಮತದಾರರನ್ನು ಗುರುತಿಸಲಾಗಿದ್ದು ಬಿಎಲ್‌ಎಗಳು ತಮ್ಮ ಬಿಎಲ್‌ಓಗಳೊಂದಿಗೆ ಪರಿಶೀಲಿಸಿಕೊಂಡು ವಿವರಗಳನ್ನು ಖಾತ್ರಿಪಡಿಸಿಕೊಳ್ಳುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ರಾಜಕೀಯ ಪಕ್ಷಗಳು ಈಗಾಗಲೇ ತಮ್ಮ ಪಕ್ಷದ ಮತಗಟ್ಟೆ ಮಟ್ಟದ ಏಜೆಂಟ್‌ಗಳನ್ನು ನೇಮಿಸಿರುವುದರಿಂದ ಸಂಬAಧಿಸಿದ ಬಿಎಲ್‌ಎಗಳು ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಎಸ್‌ಐಆರ್ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಚುನಾವಣಾ ತಹಶಿಲ್ದಾರ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.


