
ತುಮಕೂರು: ರಾಷ್ಟಿಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಬಾಕಿ ಉಳಿದಿರುವ ಎಲ್ಲಾ ಅಡೆ-ತಡೆಗಳನ್ನು ತ್ವರಿತವಾಗಿ ನಿವಾರಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬA0ಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಎನ್‌ಎಚ್-೨೦೬ರ ಮಲ್ಲಸಂದ್ರ-ಕರಡಿ ಹಾಗೂ ಕರಡಿ-ಬಾಣಾವರ ವಿಭಾಗಗಳ ನಾಲ್ಕು ಪಥಗಳ ರಸ್ತೆ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರ ವಿರೋಧದಿಂದ ಉಂಟಾಗಿರುವ ಸಮಸ್ಯೆಗಳು, ಬಾಕಿ ಇರುವ ವಿದ್ಯುತ್ ಹಾಗೂ ಇತರೆ ಉಪಯುಕ್ತತಾ ಸೇವೆಗಳ ಸ್ಥಳಾಂತರ, ಕಾಲುವೆ ದಾಟುವ ಕಾಮಗಾರಿಗಳು ಮತ್ತು ಸಂಚಾರ ಸುರಕ್ಷತೆಗೆ ಸಂಬ0ಧಿಸಿದ ವಿಷಯಗಳನ್ನು ಸಭೆಯಲ್ಲಿ ಸವಿಸ್ತಾರವಾಗಿ ಅವರು ಪರಿಶೀಲಿಸಿದರು. ಕಾಮಗಾರಿಗಳ ಪ್ರಗತಿಗೆ ಯಾವುದೇ ರೀತಿಯ ವಿಳಂಬವಾಗದ0ತೆ ಸಂಬAಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಬಾಕಿ ಇರುವ ಎಲ್ಲ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸಭೆಯಲ್ಲಿ ರಾಷ್ಟಿಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ, ಬೆಸ್ಕಾಂ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಸಂಬAಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


