
ತುಮಕೂರು: ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ೭೫ ವರ್ಷಾಚರಣೆ ಅಂಗವಾಗಿ ಈ ತಿಂಗಳ ೨೭ರಿಂದ ಆರು ದಿನಗಳ ಕಾಲ ನಗರದಲ್ಲಿ ಯೋನೆಕ್ಸ್-ಸನ್‌ರೈಸ್ ರಾಜ್ಯ ರ‍್ಯಾಂಕಿAಗ್ ಬ್ಯಾಡ್ಮಿಂಟನ್ ಅಂಡರ್-೧೧ ಮತ್ತು ಅಂಡರ್-೧೩ ವಿಭಾಗಗಳ ಪಂದ್ಯಾವಳಿ ಏರ್ಪಾಟಾಗಿದೆ. ರಾಜ್ಯಾದ್ಯಂತ ಸುಮಾರು ೬೦೦ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಡ್ಮಿಂಟನ್‌ನಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದ ಪ್ರತಿಭಾವಂತ ಬ್ಯಾಡ್ಮಿಂಟನ್ ಆಟಗಾರರು ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಮುಂಬರುವ ಒಲಂಪಿಕ್ ಗುರಿ ಇಟ್ಟುಕೊಂಡು ಪ್ರತಿಭಾನ್ವಿತ ಬ್ಯಾಡ್ಮಿಂಟನ್ ಆಟಗಾರರನ್ನು ಗುರುತಿಸಲು, ಸಿದ್ಧಪಡಿಸಲು ಈ ಟೂರ್ನಮೆಂಟ್ ಉತ್ತಮ ವೇದಿಕೆ ಆಗಲಿದೆ. ಆರು ಅಂಕಣಗಳಲ್ಲಿ ಆರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ. ಆಗಸ್ಟ್ ೧ರಂದು ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ೫೦೦ಕ್ಕೂ ಹೆಚ್ಚು ಪ್ರತಿಭಾವಂತ ಕಿರಿಯ ಬ್ಯಾಡ್ಮಿಂಟನ್ ಆಟಗಾರರು ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಇದು ಅಂಡರ್-೧೧ ಹಾಗೂ ಅಂಡರ್-೧೩ ವಿಭಾಗಗಳ ರಾಜ್ಯದ ಪ್ರಮುಖ ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲೊAದಾಗಿದೆ ಎಂದ ಅವರು, ಕ್ರಿಕೆಟ್ ನಂತರ ಬ್ಯಾಡ್ಮಿಂಟ್ ಹೆಚ್ಚು ಜನಪ್ರಿಯ ಆಟವಾಗಿದೆ. ರಾಜ್ಯದಲ್ಲಿ ಪ್ರತಿನಿತ್ಯ ಸುಮಾರು ನಾಲ್ಕೂವರೆ ಸಾವಿರ ಜನ ಬ್ಯಾಡ್ಮಿಂಟನ್ ಅಭ್ಯಾಸ ಮಾಡುತ್ತಿದ್ದಾರೆ. ಹೊಸ ಪ್ರತಿಭೆಗಳು ಹೊರ ಹೊಮ್ಮಬೇಕು, ರಾಷ್ಟಿçÃಯ, ಅಂತಾರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಬೇಕು. ಇಂತಹ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಎಲ್ಲಾ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಜಮೀನು ನೀಡಬೇಕು ಎಂದು ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ರಾಜ್ಯ ಬ್ಯಾಂಡ್ಮಿAಟನ್ ಅಸೋಸಿಯೇಷನ್ ೧೯೫೧ರಲ್ಲಿ ಮೈಸೂರು ಮಹಾರಾಜರ ನೇತೃತ್ವದಲ್ಲಿ ಆರಂಭವಾಯಿತು. ಇದರ ೭೫ನೇ ವರ್ಷದ ಅಂಗವಾಗಿ ಎಲ್ಲಾ ಜಿಲ್ಲೆಗಳಲ್ಲೂ ಬ್ಯಾಡ್ಮಿಂಟನ್ ಚಟುವಟಿಕೆ ಹಮ್ಮಿಕೊಂಡು ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕುಮಾರ್ ಬಂಗಾರಪ್ಪ ಹೇಳಿದರು.
ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ರಾಜ್ಯಮಟ್ಟದ ಪ್ರತಿಷ್ಠಿತ ಬ್ಯಾಡ್ಮಿಂಟನ್ ಟೂರ್ನಿ ತುಮಕೂರು ನಗರದಲ್ಲಿ ನಡೆಯುತ್ತಿರುವುದು ಅಭಿಮಾನದ ವಿಚಾರ. ನಗರದ ಎಲ್ಲಾ ಕ್ರೀಡಾಪಟುಗಳು ಬೆಂಬಲ ನೀಡಿ ಸಹಕರಿಸಬೇಕು, ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿ ವೀಕ್ಷಿಸಿ ಸಂಭ್ರಮಿಸಬೇಕು ಎಂದು ಮನವಿ ಮಾಡಿದರು.
ತುಮಕೂರು ಬ್ಯಾಡ್ಮಿಂಟನ್ ಅಕಾಡೆಮಿ ಅಧ್ಯಕ್ಷ ಪಿ.ಪ್ರವೀಣ್, ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ವಿ.ಮುರಳಿಧರ್, ಸದಸ್ಯರಾದ ಸುಧೀರ್, ಹರೀಶ್‌ಕುಮಾರ್, ಜಿಲ್ಲಾ ಆರ್ಯ ಈಡಿಗರ ಸಂಘದ ಗೌರವಾಧ್ಯಕ್ಷ ಅಜಯ್ ಕುಮಾರ್, ಅಧ್ಯಕ್ಷ ಎಂ.ನಾಗರಾಜು, ಜಂಟಿ ಕಾರ್ಯದರ್ಶಿ ಊರುಕೆರೆ ಪುರುಷೋತ್ತಮ್, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಎ.ಎನ್. ಪ್ರಭಾಕರ್ ಮೊದಲಾದವರು ಭಾಗವಹಿಸಿದ್ದರು.


