
ತುಮಕೂರು: ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಗಸ್ಟ್ ೧೫ರಂದು ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ನಾವೆಲ್ಲರೂ ಸಂತಸದಿAದ ಭಾಗವಹಿಸಿ ಅರ್ಥಪೂರ್ಣವಾಗಿ ಹಬ್ಬದ ರೀತಿಯಲ್ಲಿ ಆಚರಿಸಬೇಕು. ಅದಕ್ಕೆ ಪೂರಕ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.
ವಿವಿಧ ಶಾಲಾ-ಕಾಲೇಜು, ವಸತಿ ನಿಲಯಗಳ ಮಕ್ಕಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮವು ಸ್ವಚ್ಛತೆ, ಪರಿಸರ ಸಂರಕ್ಷಣೆ, ರಸ್ತೆ ಸುರಕ್ಷತೆ, ಜೀವಜಲ ಸಂರಕ್ಷಣೆಯAತಹ ವಿಷಯಾಧಾರಿತವಾಗಿರಬೇಕು ಸೂಚಿಸಿದರು.
ಬೆಳಿಗ್ಗೆ ೯ ಗಂಟೆಗೆ ಉಪ ಮುಖ್ಯಮಂತ್ರಿಗಳಿAದ ಧ್ವಜಾರೋಹಣ: ಜಿಲ್ಲಾಡಳಿತ ವಿವಿಧ ಇಲಾಖೆ ಹಾಗೂ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ ೧೫ರಂದು ಬೆಳಿಗ್ಗೆ ೯ ಗಂಟೆಗೆ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ, ಗೌರವ ರಕ್ಷೆ ಸ್ವೀಕಾರ, ಸ್ವಾತಂತ್ರೊö್ಯÃತ್ಸವದ ಸಂದೇಶ ನೀಡುವ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮ ನಡೆಯಲಿರುವ ಜಿಲ್ಲಾ ಕ್ರೀಡಾಂಗಣದ ಸುತ್ತ-ಮುತ್ತ ಸ್ವಚ್ಛತಾ ಕಾರ್ಯ, ಕಾರ್ಯಕ್ರಮ ದಿನದಂದು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ನಗರದ ಚರ್ಚ್ ಸರ್ಕಲ್, ಲಕ್ಕಪ್ಪ ಸರ್ಕಲ್, ಕೋಟೆ ಶ್ರೀ ಆಂಜನೇಯ ಸ್ವಾಮಿ ಸರ್ಕಲ್, ಟೌನ್ ಹಾಲ್ ಸರ್ಕಲ್ ಸೇರಿದಂತೆ ಪ್ರಮುಖ ವೃತ್ತಗಳನ್ನು ತಳಿರು-ತೋರಣಗಳೊಂದಿಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕು. ಲೋಕೋಪಯೋಗಿ ಇಲಾಖೆ ವತಿಯಿಂದ ವೇದಿಕೆ ನಿರ್ಮಾಣ, ಧ್ವಜ ಸ್ಥಂಭ ನಿರ್ಮಾಣ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ವೇದಿಕೆ ಸುತ್ತ-ಮುತ್ತ ಹೂಕುಂಡಗಳಿAದ ಅಲಂಕರಿಸಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸಭೆಯಲ್ಲಿ ಸ್ವಾಗತ ಸಮಿತಿ, ಪೆರೇಡ್ ಸಮಿತಿ, ಸನ್ಮಾನ ಸಮಿತಿ, ಸಿಹಿ ವಿತರಣೆ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿಗಳನ್ನು ರಚಿಸಿ ವಿವಿಧ ಕೆಲಸ-ಕಾರ್ಯಗಳನ್ನು ಹಂಚಿಕೆ ಮಾಡಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತೆ ಬಿ.ಶುಭ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುಚಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಬಿ.ಎಂ. ಚಂದ್ರಶೇಖರ್, ಉಪವಿಭಾಗಾಧಿಕಾರಿ ನಾಹಿದಾ ಜûಂ ಜûಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ತಹಶೀಲ್ದಾರ್ ರಾಜೇಶ್ವರಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಸೋನಿಯಾ ವರ್ಣೇಕರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


