
ತುಮಕೂರು: ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಭವನ ನಿರ್ಮಿಸಲು ೧೦ ಗುಂಟೆ ಜಾಗ ಮಂಜೂರು ಮಾಡಬೇಕೆಂದು ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಅನುಸೂಚಿತ ಜಾತಿ ಮತ್ತು ಬುಡಕಟ್ಟಿಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಮನವಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆವಹಿಸಿದ್ದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡುತ್ತಾ, ಆಷಾಡ ಮಾಸ ಪ್ರಯುಕ್ತ ಜಿಲ್ಲೆಯಲ್ಲಿ ಜರುಗುವ ವಿಶೇಷ ಜಾತ್ರೆ ಸಂದರ್ಭಗಳಲ್ಲಿ ಕೋಣಗಳ ಬಲಿ ಕೊಡುವುದನ್ನು ನಿರ್ಬಂಧಿಸಲು ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಠ ಜಾತಿ ಮತ್ತು ಪಂಗಡದ ಜನಾಂಗದವರು ದೇವಾಲಯ ಪ್ರವೇಶಕ್ಕೆ ಸಂಬAಧಿಸಿದAತೆ ಯಾವುದೇ ದೂರು ಬರದಂತೆ ಕ್ರಮವಹಿಸಬೇಕೆಂದು ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತೆ ಬಿ.ಶುಭ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುಚಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ. ಚಂದ್ರಶೇಖರ್, ಉಪವಿಭಾಗಾಧಿಕಾರಿ ನಾಹಿದಾ ಜûಂ ಜûಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ತಹಶೀಲ್ದಾರ್ ರಾಜೇಶ್ವರಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಸೋನಿಯಾ ವರ್ಣೇಕರ್, ವಿವಿಧ ತಾಲ್ಲೂಕಿನ ತಹಶೀಲ್ದಾರರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

