ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ವಡೇರಹಳ್ಳಿಯಲ್ಲಿ ಜುಲೈ ೧೫ರಂದು ವಿಷಪೂರಿತ ಕೀಟನಾಶಕ ಸೇವಿಸಿ ೫೯ ಕುರಿಗಳು  ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಸಂತ್ರಸ್ತ ಮಾಲೀಕರಾದ ಸರೋಜಮ್ಮ ಕೋಂ ಹನುಮಂತೇಗೌಡ ಅವರಿಗೆ ಪರಿಹಾರ ಹಣ ಮಂಜೂರಾತಿ ಆದೇಶ ಪತ್ರವನ್ನು ನೀಡಿದರು.
ಜಿಲ್ಲಾ ಪಂಚಾಯತಿಯಲ್ಲಿAದು ಮಾಲೀಕರಿಗೆ ೪,೪೨,೫೦೦ ರೂ.ಗಳ ಪರಿಹಾರ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ|| ಹೆಚ್.ಎಂ. ಶಿವಪ್ರಸಾದ್, ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಹಾಜರಿದ್ದರು.

(Visited 1 times, 1 visits today)