ತುಮಕೂರು: ಅಂತಾರಾಷ್ಟಿಯ ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗಾತಾರ್ಹ. ಆದರೆ ರಾಜಧಾನಿ ಬೆಂಗಳೂರಿಗೆ ಪರ್ಯಾಯ ನಗರವಾಗಿ ಬೆಳೆಯುತ್ತಿರುವ ತುಮಕೂರಲ್ಲಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಿದರೆ ಕೈಗಾರಿಕೋದ್ಯಮಿಗಳು ಸೇರಿದಂತೆ ಉತ್ತರ ಕರ್ನಾಟದ ಭಾಗಕ್ಕೂ ಅನುಕೂಲವಾಗಲಿದೆ. ಹಾಗಾಗಿ ತುಮಕೂರು ಜಿಲ್ಲೆಯಲ್ಲೇ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಕನಕಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ವಿಶೇಷ ಆಸಕ್ತಿ ವಹಿಸಿದ್ದಾರೆ. ಆದರೆ ಉದ್ದೇಶಿತ ಎಲ್ಲಾ ಪ್ರಸ್ತಾವನೆಗಳ ವೈಮಾನಿಕ ದೂರಕ್ಕಿಂತ, ತುಮಕೂರು ಪ್ರಸ್ತಾವನೆ ದೂರ ಇದ್ದರೂ, ರಾಜ್ಯ ಸರ್ಕಾರ ಗುರುತಿಸಿರುವ ಎಲ್ಲಾ ಸ್ಥಳಗಳಿಗಿಂತ ಉತ್ತಮವಾಗಿದೆ. ಅಭಿವೃದ್ದಿಯಲ್ಲಿ ಸಾಮಾಜಿಕ ನ್ಯಾಯ ದೊರಕಲಿದೆ. ಕರ್ನಾಟಕ ರಾಜ್ಯದ ಬಹುತೇಕ ಪ್ರದೇಶಗಳಿಗೆ ಅನೂಕೂಲವಾಗಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಜಾಸ್ತಿ ಇದೆ, ಉದ್ದೇಶಿತ ಬೇರೆ ಪ್ರಸ್ತಾವನೆಗಳ ಜಮೀನಿಗೆ ಹೋಲಿಸಿದರೆ, ಇಲ್ಲಿ ಜಮೀನು ಬೆಲೆ ಕಡಿಮೆ ಇದೆ. ಕೈಗಾರಿಕಾ ಕ್ರಾಂತಿಗೆ ಪೂರಕವಾಗಲಿದೆ.
ಯಾವ ಸ್ಥಳ ಸೂಕ್ತ ಎಂಬುದನ್ನು ಕೇಂದ್ರ ಸರ್ಕಾರ ನಿರ್ಧರಿಸಲಿ. ೧೯ ಜಿಲ್ಲೆಗಳ ಹೆಬ್ಬಾಗಿಲು, ಬೆಂಗಳೂರು-ಪುಣೆ ಎಕನಾಮಿಕ್ ಕಾರಿಡಾರ್, ಚನ್ನೆöÊ- ಚಿತ್ರದುರ್ಗ ಇಂಡಸ್ಟಿçಯಲ್ ಕಾರಿಡಾರ್, ಉದ್ದೇಶಿತ ಬೀದರ್-ಬೆಂಗಳೂರು ಎಕ್ಸ್ಪ್ರೆಸ್ ಹೈವೇ, ಸುಮಾರು ೧೨೫೦೦ ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಇಂಡಸ್ಟಿçಯಲ್ ನೋಡ್ ಅಭಿವೃದ್ದಿಗೂ ಪೂರಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಾನು ತುಮಕೂರಿನಲ್ಲಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ೨೦೨೦ ರಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ವಿಜಯೇಂದ್ರರವರು ತುಮಕೂರಿನಲ್ಲಿ ನಿರ್ಮಾಣ ಮಾಡಲು ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಬಿಜೆಪಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲೂ ಸೇರ್ಪಡೆ ಮಾಡಲು ನಾನೇ ಮನವಿ ಮಾಡಿದ್ದೆ. ಜತೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸಚಿವ ವಿ. ಸೋಮಣ್ಣನವರು ಈ ಪ್ರಸ್ತಾಪಕ್ಕೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಮತ್ತು ಉತ್ತರ ಕರ್ನಾಟಕದ ಅನೇಕ ಸಂಘ ಸಂಸ್ಥೆಗಳು ಸಹಮತ ವ್ಯಕ್ತಪಡಿಸಿದ್ದಾರೆ. ಇದೊಂದು ಜಿಲ್ಲೆಯ ಮತ್ತು ಮಧ್ಯ ಕರ್ನಾಟಕದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಎಂದರು.
ಅAತಾರಾಷ್ಟಿçÃಯ ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ನನ್ನ ಕನಸಾಗಿತ್ತು. ಎಲ್ಲರಿಗಿಂತ ಮೊದಲೇ, ತುಮಕೂರು ಜಿಲ್ಲಾ ದಿಶಾ ಸಮಿತಿಯಲ್ಲಿ ಚರ್ಚಿಸಿ, ತುಮಕೂರು ಸ್ಥಳ ಗುರುತಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ಆರಂಭದಿAದ ಕಡತದ ಅನುಸರಣೆಯನ್ನು ರಾಜ್ಯಮಟ್ಟದ ದಿಶಾ ಸಮಿತಿ ಮಾಜಿ ಸದಸ್ಯರಾದ ಕುಂದರನಹಳ್ಳಿ ರಮೇಶ್ ಅನುಸರಣೆ ಮಾಡುತ್ತಾ ಬಂದಿದ್ದಾರೆ ಎಂದು ಹೇಳಿದರು.
ಅರವಿಂದ್ ಬೆಲ್ಲದ್ ಸೇರಿದಂತೆ ಉತ್ತರ ಕರ್ನಾಟಕದ ೧೯ ಜಿಲ್ಲೆಗಳ ೩೭ ಜನ ಚುನಾಯಿತ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಕೇಂದ್ರ ಸರ್ಕಾರಕ್ಕೆ ತುಮಕೂರಿನಲ್ಲಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಮಾಡಲು ಮನವಿ ಮಾಡಿದ್ದಾರೆ. ಯಾವುದೇ ಬೃಹತ್ ವಿಶೇಷ ಯೋಜನೆಗೆ ವೈಜ್ಞಾನಿಕ ಅಭಿವೃದ್ಧಿ ಲಾಬಿ ಅಗತ್ಯ ಎಂದರು.
ಕೇAದ್ರ ಐಟಿ ಸಚಿವರಾದ ಅಶ್ವಿನಿ ವೈಷ್ಣವ್ ರವರು ತುಮಕೂರಿನಲ್ಲಿ ಸಿಲಿಕಾನ್ ಮಾದರಿ ಸಿಟಿ ಸ್ಥಾಪಿಸಿ ಎಂದು ರಾಜ್ಯದ ಎಂ.ಬಿ. ಪಾಟೀಲ್ ರವರಿಗೆ ಸಭೆಯಲ್ಲಿಯೇ ಹೇಳಿದ್ದರೂ ಇದುವರೆಗೂ ಪ್ರಸ್ತಾವನೆ ಸಲ್ಲಿಸದೇ ಇರುವುದು ವಿಷಾದಕರ ಸಂಗತಿ ಎಂದಿದ್ದಾರೆ. ಜಮೀನು ಗುರುತಿಸಿ ಎರಡು ಯೋಜನೆಗಳಿಗೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದು ಸೂಕ್ತವಾಗಿದೆ ಎಂದರು.
ಹೇಮಾವತಿ, ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಉದ್ದೇಶಿತ ಶರಾವತಿ ನೀರಿನ ಯೋಜನೆಯ ವಾಟರ್ ಬ್ಯಾಂಕ್ ಜಾಲಗುಣಿಯ ಬಳಿ ನಿರ್ಮಾಣವಾಗಲಿದೆ. ಈ ಎಲ್ಲಾ ನದಿಗಳ ನೀರನ್ನು ಬಳಸಲು ಅನೂಕೂಲವಾಗಲಿದೆ. ಈ ಪ್ರಸ್ತಾವನೆ ಪ್ರದೇಶ ಹಿಂದುಳಿದ ಪ್ರದೇಶವಾಗಿದ್ದು, ಅಭಿವೃದ್ದಿಗೆ ಮುನ್ನುಡಿ ಬರೆಯಲಿದೆ ಎಂದರು.
ತುಮಕೂರು ಏರ್‌ಪೋರ್ಟ್ ಪ್ರಸ್ತಾವನೆ, ಉದ್ದೇಶಿತ ಬೀದರ್-ಬೆಂಗಳೂರು ಎಕ್ಸ್ಪ್ರೆಸ್ ಹೈವೆಯಿಂದ ನೇರವಾಗಿ ಬೆಂಗಳೂರು ಬಿಸಿನೆಸ್ ಕಾರಿಡಾರ್‌ಗೆ ಸಂಪರ್ಕವಾಗುವುದರಿAದ, ಬೆಂಗಳೂರು-ತುಮಕೂರು ರಸ್ತೆ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ ಮೈಸೂರಿನಲ್ಲಿ ಏರ್ ಪೋರ್ಟ್ ಇರುವುದರಿಂದ, ಬೆಂಗಳೂರು-ಮೈಸೂರು ರಸ್ತೆಯ ಪ್ರಸ್ತಾವನೆ ಅಭಿವೃದ್ಧಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮತವಲ್ಲ, ಇಲ್ಲಿನ ಜಮೀನು ಬೆಲೆಯೂ ಇಲ್ಲಿ ಅತ್ಯಂತ ದುಬಾರಿಯಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕುಂದರಹಳ್ಳಿ ರಮೇಶ್, ಶಿವರುದ್ರಪ್ಪ, ಮಲ್ಲಿಕಾರ್ಜುನಯ್ಯ ಬಿ.ಬಿ., ಮಹದೇವಯ್ಯ, ವೀರಭದ್ರಯ್ಯ, ರಕ್ಷಿತ್ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಕನಕಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ವಿಶೇಷ ಆಸಕ್ತಿ ವಹಿಸಿದ್ದಾರೆ. ಆದರೆ ಉದ್ದೇಶಿತ ಎಲ್ಲಾ ಪ್ರಸ್ತಾವನೆಗಳ ವೈಮಾನಿಕ ದೂರಕ್ಕಿಂತ, ತುಮಕೂರು ಪ್ರಸ್ತಾವನೆ ದೂರ ಇದ್ದರೂ, ರಾಜ್ಯ ಸರ್ಕಾರ ಗುರುತಿಸಿರುವ ಎಲ್ಲಾ ಸ್ಥಳಗಳಿಗಿಂತ ಉತ್ತಮವಾಗಿದೆ. ಅಭಿವೃದ್ದಿಯಲ್ಲಿ ಸಾಮಾಜಿಕ ನ್ಯಾಯ ದೊರಕಲಿದೆ. ಕರ್ನಾಟಕ ರಾಜ್ಯದ ಬಹುತೇಕ ಪ್ರದೇಶಗಳಿಗೆ ಅನೂಕೂಲವಾಗಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಜಾಸ್ತಿ ಇದೆ, ಉದ್ದೇಶಿತ ಬೇರೆ ಪ್ರಸ್ತಾವನೆಗಳ ಜಮೀನಿಗೆ ಹೋಲಿಸಿದರೆ, ಇಲ್ಲಿ ಜಮೀನು ಬೆಲೆ ಕಡಿಮೆ ಇದೆ. ಕೈಗಾರಿಕಾ ಕ್ರಾಂತಿಗೆ ಪೂರಕವಾಗಲಿದೆ.
ಯಾವ ಸ್ಥಳ ಸೂಕ್ತ ಎಂಬುದನ್ನು ಕೇಂದ್ರ ಸರ್ಕಾರ ನಿರ್ಧರಿಸಲಿ. ೧೯ ಜಿಲ್ಲೆಗಳ ಹೆಬ್ಬಾಗಿಲು, ಬೆಂಗಳೂರು-ಪುಣೆ ಎಕನಾಮಿಕ್ ಕಾರಿಡಾರ್, ಚನ್ನೆöÊ- ಚಿತ್ರದುರ್ಗ ಇಂಡಸ್ಟಿçಯಲ್ ಕಾರಿಡಾರ್, ಉದ್ದೇಶಿತ ಬೀದರ್-ಬೆಂಗಳೂರು ಎಕ್ಸ್ಪ್ರೆಸ್ ಹೈವೇ, ಸುಮಾರು ೧೨೫೦೦ ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಇಂಡಸ್ಟಿçಯಲ್ ನೋಡ್ ಅಭಿವೃದ್ದಿಗೂ ಪೂರಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಅರವಿಂದ್ ಬೆಲ್ಲದ್ ಸೇರಿದಂತೆ ಉತ್ತರ ಕರ್ನಾಟಕದ ೧೯ ಜಿಲ್ಲೆಗಳ ೩೭ ಜನ ಚುನಾಯಿತ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಕೇಂದ್ರ ಸರ್ಕಾರಕ್ಕೆ ತುಮಕೂರಿನಲ್ಲಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಮಾಡಲು ಮನವಿ ಮಾಡಿದ್ದಾರೆ. ಯಾವುದೇ ಬೃಹತ್ ವಿಶೇಷ ಯೋಜನೆಗೆ ವೈಜ್ಞಾನಿಕ ಅಭಿವೃದ್ಧಿ ಲಾಬಿ ಅಗತ್ಯ ಎಂದರು.
ಕೇAದ್ರ ಐಟಿ ಸಚಿವರಾದ ಅಶ್ವಿನಿ ವೈಷ್ಣವ್ ರವರು ತುಮಕೂರಿನಲ್ಲಿ ಸಿಲಿಕಾನ್ ಮಾದರಿ ಸಿಟಿ ಸ್ಥಾಪಿಸಿ ಎಂದು ರಾಜ್ಯದ ಎಂ.ಬಿ. ಪಾಟೀಲ್ ರವರಿಗೆ ಸಭೆಯಲ್ಲಿಯೇ ಹೇಳಿದ್ದರೂ ಇದುವರೆಗೂ ಪ್ರಸ್ತಾವನೆ ಸಲ್ಲಿಸದೇ ಇರುವುದು ವಿಷಾದಕರ ಸಂಗತಿ ಎಂದಿದ್ದಾರೆ. ಜಮೀನು ಗುರುತಿಸಿ ಎರಡು ಯೋಜನೆಗಳಿಗೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದು ಸೂಕ್ತವಾಗಿದೆ ಎಂದರು.
ಹೇಮಾವತಿ, ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಉದ್ದೇಶಿತ ಶರಾವತಿ ನೀರಿನ ಯೋಜನೆಯ ವಾಟರ್ ಬ್ಯಾಂಕ್ ಜಾಲಗುಣಿಯ ಬಳಿ ನಿರ್ಮಾಣವಾಗಲಿದೆ. ಈ ಎಲ್ಲಾ ನದಿಗಳ ನೀರನ್ನು ಬಳಸಲು ಅನೂಕೂಲವಾಗಲಿದೆ. ಈ ಪ್ರಸ್ತಾವನೆ ಪ್ರದೇಶ ಹಿಂದುಳಿದ ಪ್ರದೇಶವಾಗಿದ್ದು, ಅಭಿವೃದ್ದಿಗೆ ಮುನ್ನುಡಿ ಬರೆಯಲಿದೆ ಎಂದರು.
ಕೇAದ್ರ ಸರ್ಕಾರ ಜಮೀನು ಕೇಳಲಿ ಎಂದು ಸುಮ್ಮನೆ ಕೂರುವುದು ಸರಿಯಲ್ಲ. ಕೇಂದ್ರ ಸರ್ಕಾರದ ನಿಮ್ಜ್ ಯೋಜನೆಗೆ ಅಭಿವೃದ್ಧಿ ರೆವೂಲ್ಯೂಷನ್ ಫೋರಂ ಅಧ್ಯಕ್ಷ ಕುಂದರನಹಳ್ಳಿ ರಮೇಶ್, ಆಗಿನ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್.ಸುರೇಶ್‌ಕುಮಾರ್ ರವರಿಗೆ ಪತ್ರ ಬರೆದು, ಸುಮಾರು ೧೨೫೦೦ ಎಕರೆ ಜಮೀನು ನೋಟಿಫೀಕೇಷನ್ ಮಾಡಿಸಿದ ಉದಾಹರಣೆ ನಮ್ಮ ಕಣ್ಣ ಮುಂದೆಯೇ ಇದೆ. ನಾನು ೨೦೦೯ ರಲ್ಲಿ ಲೋಕಸಭಾ ಸದಸ್ಯನಾಗಿ ಆಯ್ಕೆಯಾದ ನಂತರ ಯೋಜನೆ ಮಂಜೂರು ಮಾಡಿಸಿದೆ. ಅಭಿವೃದ್ಧಿ ಲಾಬಿ ಮಾಡಲು ಮನಸ್ಸಿರ ಬೇಕು ಅಷ್ಟೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕುಂದರಹಳ್ಳಿ ರಮೇಶ್, ಶಿವರುದ್ರಪ್ಪ, ರಕ್ಷಿತ್ ಮಲ್ಲಿಕಾರ್ಜುನಯ್ಯ ಬಿ.ಬಿ., ಮಹದೇವಯ್ಯ, ವೀರಭದ್ರಯ್ಯ, ಮತ್ತಿತರರು ಉಪಸ್ಥಿತರಿದ್ದರು.
(Visited 1 times, 1 visits today)