ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್ ಪ್ರಸರಣ ಯೋಜನೆ ಹಾಗೂ ಬಿಎಸ್‌ಎನ್‌ಎಲ್ ೪ಜಿ ಸ್ಯಾಚುರೇಷನ್ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಸಭೆಯನ್ನುದ್ದೇಶಿಸಿ ಜಿಲ್ಲಾಧಿಕಾರಿಗಳು ಮಾತನಾಡುತ್ತಾ, ಎನ್‌ಹೆಚ್-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿಯನ್ನು ಯಾವುದೇ ವಿಳಂಬವಿಲ್ಲದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಯಂತಿ ಗ್ರಾಮದಲ್ಲಿ ಮುಖ್ಯ ರಸ್ತೆ ಕಾಮಗಾರಿಗೆ ಉಂಟಾಗಿರುವ ಅಡೆತಡೆಗಳನ್ನು ಒಂದು ವಾರದೊಳಗೆ ತೆರವುಗೊಳಿಸುವಂತೆ ತಿಪಟೂರು ಉಪವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಈ ಕುರಿತು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ತಿಪಟೂರು ಉಪವಿಭಾಗಾಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ಸಮನ್ವಯ ಸಾಧಿಸಿ ಕಾಮಗಾರಿಯನ್ನು ಮುಂದುವರೆಸುವ0ತೆ ಸೂಚಿಸಿದರು.
ಅಯ್ಯನಬಾವಿ ಗ್ರಾಮದಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಒತ್ತಾಯಿಸಿ ಸ್ಥಳೀಯರಿಂದ ಕಾಮಗಾರಿಗೆ ಉಂಟಾಗಿರುವ ಅಡಚಣೆ ಹಿನ್ನೆಲೆಯಲ್ಲಿ, ಕಾಮಗಾರಿಗೆ ಯಾವುದೇ ತೊಂದರೆಯಾಗದAತೆ ಅಗತ್ಯ ಪೊಲೀಸ್ ಭದ್ರತೆ ಒದಗಿಸುವಂತೆ ತಿಪಟೂರು ಉಪ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಕೆಪಿಟಿಸಿಎಲ್ ಯೋಜನೆಗಳ ಪ್ರಗತಿ ಪರಿಶೀಲನೆ ವೇಳೆ, ಕುಣಿಗಲ್ ತಾಲ್ಲೂಕಿನ ಶೆಟ್ಟಿಕೆರೆ ಗ್ರಾಮದಲ್ಲಿ ಪ್ರಸ್ತಾವಿತ ೨೬೬ ಕೆ.ವಿ. ವಿದ್ಯುತ್ ಕೇಂದ್ರಕ್ಕೆ ಅಗತ್ಯವಿರುವ ಪರ್ಯಾಯ ಭೂಮಿಯನ್ನು ಒಂದು ವಾರದೊಳಗೆ ಗುರುತಿಸಿ ಒದಗಿಸುವಂತೆ ಕುಣಿಗಲ್ ತಹಶೀಲ್ದಾರರಿಗೆ ಸೂಚಿಸಿದರು.
ಗುಬ್ಬಿ ತಾಲ್ಲೂಕಿನಲ್ಲಿ ೧೦೦ ಎಕರೆ ಭೂಮಿಯಲ್ಲಿ ೪೦ ಎಕರೆ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳಿದ ೬೦ ಎಕರೆ ಭೂಮಿಯನ್ನು ಶೀಘ್ರವಾಗಿ ತೆರವುಗೊಳಿಸಿ ಹಸ್ತಾಂತರಿಸುವAತೆ ಗುಬ್ಬಿ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಬಿಎಸ್‌ಎನ್‌ಎಲ್ ೪ಜಿ ಸ್ಯಾಚುರೇಷನ್ ಯೋಜನೆ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಇದುವರೆಗೆ ತಹಶೀಲ್ದಾರರಿಂದ ೪ ಪ್ರಸ್ತಾವನೆಗಳು ಸ್ವೀಕೃತವಾಗಿದ್ದು, ಉಳಿದ ೧೪ ಪ್ರಸ್ತಾವನೆಗಳನ್ನು ತುರ್ತಾಗಿ ಸಲ್ಲಿಸುವಂತೆ ಸೂಚಿಸಿದರು. ವಿಶೇಷವಾಗಿ ಕುಣಿಗಲ್, ಚಿ.ನಾ.ಹಳ್ಳಿ, ತಿಪಟೂರು, ಮಧುಗಿರಿ, ತುರುವೇಕೆರೆ, ಪಾವಗಡ ಹಾಗೂ ಸಿರಾ ತಾಲ್ಲೂಕಿನ ತಹಶೀಲ್ದಾರರು ಯಾವುದೇ ವಿಳಂಬವಿಲ್ಲದೆ ಅಗತ್ಯ ಪ್ರಸ್ತಾವನೆಗಳನ್ನು ಶೀಘ್ರ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ವಿವಿಧ ಸಂಬAಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)



