BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
  • ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
  • ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
  • ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ
  • ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ
news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

By News Desk BenkiyabaleUpdated:July 22, 2026 5:05 pm

ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ತುರುವೇಕೆರೆ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ, ಹೊಸದಾಗಿ ಕೊರೆದಿರುವ ಕೊಳವೆಬಾವಿಗಳು ಹಾಗೂ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆ ಹೋಬಳಿಯ ಮುದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಡಿ ಕಲ್ಲೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಖಾಸಗಿ ಕೊಳವೆಬಾವಿಯಿಂದ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸುತ್ತಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು. ಗ್ರಾಮದಲ್ಲಿ ಹೊಸ ಕೊಳವೆಬಾವಿ ಕೊರೆಸಲು ಕಂಟಿAಜೆನ್ಸಿ ಆಕ್ಷನ್ ಪ್ಲಾನ್ ಅಡಿಯಲ್ಲಿ ಅನುಮೋದನೆ ದೊರೆತಿದ್ದು, ತಕ್ಷಣ ಕಾಮಗಾರಿ ಆರಂಭಿಸಿ ಶೀಘ್ರದಲ್ಲಿ ಗ್ರಾಮಸ್ಥರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೋಡಿ ಕಲ್ಲೇನಹಳ್ಳಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸ್ವಚ್ಛತೆ, ಸಮವಸ್ತç ಮತ್ತು ಪಠ್ಯಪುಸ್ತಕ ವಿತರಣೆ, ಹೆಚ್ಚುವರಿ ಪೌಷ್ಟಿಕ ಆಹಾರ ವಿತರಣೆ ಕುರಿತು ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ನಿಗದಿತ ಪ್ರಮಾಣದಲ್ಲಿ ಹೆಚ್ಚುವರಿ ಪೌಷ್ಠಿಕ ಆಹಾರ ಹಾಗೂ ಹಣ್ಣು ವಿತರಣೆ ಸಮರ್ಪಕವಾಗಿ ನಡೆಯುವಂತೆ ಹಾಗೂ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು.
ನಂತರ ಲಕ್ಕೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಹೊಸದಾಗಿ ಕಂಟಿAಜೆನ್ಸಿ ಆಕ್ಷನ್ ಪ್ಲಾನ್ ಅಡಿಯಲ್ಲಿ ಕೊರೆದಿರುವ ಕೊಳವೆಬಾವಿಯ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ನೀರಿನ ಲಭ್ಯತೆ ಮತ್ತು ಗ್ರಾಮಸ್ಥರಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಬಳಿಕ ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಕೇನಹಳ್ಳಿ ಹಾಗೂ ಶೆಟ್ಟಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ನಾಕೇನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಕೊರೆದಿರುವ ಕೊಳವೆಬಾವಿಗೆ ಮೋಟಾರ್ ಹಾಗೂ ಪೈಪ್‌ಲೈನ್ ಅಳವಡಿಕೆ ಬಾಕಿಯಿರುವುದು ಗಮನಕ್ಕೆ ಬಂದಿದ್ದು, ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿ ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಹಿಂದೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಗ್ರಾಮಸ್ಥರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.
ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿಯ ತಾಳಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ಕಲ್ಕೆರೆ ಮತ್ತು ಡೋಂಕಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಗ್ರಾಮಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಡಿ.ಕಲ್ಕೆರೆ ಗ್ರಾಮದ ಹೊಸ ಬಡಾವಣೆಯಲ್ಲಿ ಪ್ರಸ್ತುತ ಖಾಸಗಿ ಕೊಳವೆಬಾವಿಯಿಂದ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಹೊಸ ಕೊಳವೆಬಾವಿ ಕೊರೆಸಲು ಕಂಟಿAಜೆನ್ಸಿ ಆಕ್ಷನ್ ಪ್ಲಾನ್ ಅಡಿಯಲ್ಲಿ ಅನುಮೋದನೆ ದೊರೆತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ಹೊಸ ಕೊಳವೆಬಾವಿ ಕೊರೆದು ನೀರಿನ ಗುಣಮಟ್ಟ ಪರಿಶೀಲಿಸಿ, ತಕ್ಷಣ ವಿದ್ಯುತ್ ಸಂಪರ್ಕ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಶುದ್ಧ ಕುಡಿಯುವ ನೀರು ಪೂರೈಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಡೋಂಕಿಹಳ್ಳಿ ಗ್ರಾಮದಲ್ಲಿ ಈಗಾಗಲೇ ಕೊಳವೆಬಾವಿ ಕೊರೆಸಲಾಗಿದ್ದು ಪೈಪ್‌ಲೈನ್ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ, ಕಾಮಗಾರಿಯನ್ನು ಶೀಘ್ರು ಪೂರ್ಣಗೊಳಿಸಿ ನೀರು ಪೂರೈಕೆಗೆ ಕ್ರಮವಹಿಸುವಂತೆ ಸೂಚಿಸಿದರು.
ಪ್ರವಾಸದ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ತಿಪಟೂರು ಉಪವಿಭಾಗ, ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news tumakur tumkur tumkur news turuvekere ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುರುವೇಕೆರೆ
Previous Articleಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
Next Article ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
News Desk Benkiyabale

Related Posts

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm news
ತಾಜಾ ಸುದ್ಧಿಗಳು
news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm
news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm
news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
news

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
Our Youtube Channel
Our Picks

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

By News Desk BenkiyabaleJuly 22, 2026 5:11 pm

ತುಮಕೂರು: ನಗರದ ವಿವಿಧ ಪ್ರದೇಶಗಳಲ್ಲಿ ನಗರಪಾಲಿಕೆ ಅಧಿಕಾರಿಗಳು ಫುಟ್‌ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಫುಟ್‌ಪಾತ್ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳದ…

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.