BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

By News Desk BenkiyabaleUpdated:July 22, 2026 5:07 pm

ಗುಬ್ಬಿ: ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿರುವ ಹೆಚ್.ಎ.ಎಲ್‌ಗೆ ಹೆಚ್ಚುವರಿ ಭೂಮಿಗಾಗಿ ರೈತರ ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಸಾಮಾಜಿಕ ಅರಣ್ಯ, ಹುಲ್ಲುಬಂದಿ, ಗೋಮಾಳ ಜಮೀನು ಬಳಕೆ ಮಾಡುವಂತೆ ಇಂದು ಹಾಲಪ್ಪ ಪ್ರತಿಷ್ಠಾನದ ನೇತೃತ್ವದಲ್ಲಿ ಮುರುಳೀಧರ ಹಾಲಪ್ಪ ಹಾಗೂ ತುಮುಲ್ ನಿರ್ದೇಶಕರಾದ ಶ್ರೀಮತಿ ಭಾರತೀ ಶ್ರೀನಿವಾಸ್ ರವರುಗಳು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ಅಧಿಕಾರಿಗಳಿಗೆ ನೂರಾರು ರೈತರೊಂದಿಗೆ ನಿಯೋಗ ತೆರಳಿ ಮನವಿ ಸಲ್ಲಿಸಿದರು.
ಕಳೆದ ಹತ್ತು ವರ್ಷಗಳ ಹಿಂದೆ ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ಬಳಿ ರೈತರ ಸಾಗುವಳಿ ಭೂಮಿಯೂ ಸೇರಿದಂತೆ ಸುಮಾರು ೬೬೦ ಎಕರೆ ಪ್ರದೇಶದಲ್ಲಿ ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ಹೆಚ್.ಎ.ಎಲ್‌ನ ಬಹು ಉಪಯೋಗಿ ಹೆಲಿಕ್ಯಾಪ್ಟರ್ ನಿರ್ಮಾಣ ಘಟಕ ಆರಂಭಗೊAಡಿದ್ದು, ಇದರ ವಿಸ್ತರಣಾ ಘಟಕಕ್ಕೆ ಸುಮಾರು ೪೦೦ ಎಕರೆಗೂ ಹೆಚ್ಚು ಜಾಗಬೇಕು ಎಂದು ಸರಕಾರಕ್ಕೆ ಹೆಚ್.ಎ.ಎಲ್ ವತಿಯಿಂದ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸರಕಾರ ಕೆ.ಐ.ಎ.ಡಿ.ಬಿ. ಅವರಿಗೆ ಹೆಚ್.ಎ.ಎಲ್. ವಿಸ್ತರಣಾ ಘಟಕಕ್ಕೆ ಅಗತ್ಯವಿರುವ ಭೂಮಿ ಗುರುತಿಸಿ,ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.
ಸರಕಾರದ ಆದೇಶದ ಮೇರೆಗೆ ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಹಾಲಿ ಕಾರ್ಯನಿರ್ವಹಿಸುತ್ತಿರುವ ಹೆಚ್.ಎ.ಎಲ್. ಘಟಕದ ಸುತ್ತಮುತ್ತಲ ಸುಮಾರು ೪೫೭ ಎಕರೆ ಜಾಗ ಗುರುತಿಸಿ ಸರಕಾರಕ್ಕೆ ವರದಿ ಸಲ್ಲಿಸಿದ್ದು, ಇದರಲ್ಲಿ ರೈತರ ಸುಮಾರು ೧೪೬ ಎಕರೆ ಫಲವತ್ತಾದ ಭೂಮಿಯೂ ಸೇರಿದ ಹಿನ್ನೆಲೆಯಲ್ಲಿ ಭೂಮಿ ನೀಡಲು ನಿರಾಕರಿಸಿದ ರೈತರು,ಸ್ಥಳೀಯ ಶಾಸಕರಾದ ಎಸ್.ಆರ್,ಶ್ರೀನಿವಾಸ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳಿಗೆ ತಮ್ಮ ಫಲವತ್ತಾ ಭೂಮಿಯನ್ನು ಉಳಿಸಿಕೊಡುವಂತೆ ಮನವಿ ಮಾಡಿದ್ದರು. ರೈತರ ಮನವಿಗೆ ಸ್ಪಂದಿಸಿದ ಶಾಸಕರು, ರೈತರ ಜಮೀನನ್ನು ಕೈಬಿಡುವಂತೆ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ತಂದು,ಅಧಿಕಾರಿಗಳಿಗೆ ಲಿಖಿತ ಆದೇಶ ಮಾಡಿಸುವ ಕೆಲಸ ಮಾಡಿದ್ದರು.
ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಇಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳು ರೈತರು ಹಾಗೂ ರೈತ ಮುಖಂಡರೊAದಿಗೆ ಚರ್ಚೆ ನಡೆಸಲು ಆಹ್ವಾನ ನೀಡಿದ್ದರು.ಈ ವೇಳೆ ರೈತರ ಪರವಾಗಿ ಮನವಿ ಸಲ್ಲಿಸಿ ಮಾತನಾಡಿದ ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ,ಈಗಾಗಲೇ ಈ ಭಾಗದ ರೈತರು ಮೊದಲ ಹಂತದ ಹೆಚ್.ಎ.ಎಲ್‌ಗೆ ತಮ್ಮ ಅಲ್ಪಸ್ವಲ್ಪ ಭೂಮಿಯನ್ನು ಕಳೆದುಕೊಂಡಿದ್ದಾರೆ.ಹೆಚ್.ಎ.ಎಲ್ ನೀಡಿದ ಭರವಸೆಯಂತೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗವನ್ನು ನೀಡಿಲ್ಲ.ಗುತ್ತಿಗೆ ಆಧಾರದಲ್ಲಿ ಡಿ ದರ್ಜೆ ನೌಕರಿ ನೀಡಿ ಕೈತೊಳೆದುಕೊಂಡಿದೆ.ಅದಲ್ಲದೆ ಹೆಚ್.ಎ.ಎಲ್.ವಿಸ್ತರಣಾ ಘಟಕಕ್ಕೆ ರೈತರ ಫಲವತ್ತಾದ ಭೂಮಿಯ ಬದಲಾಗಿದೆ.ಹೆಚ್.ಎ.ಎಲ್ ಘಟಕಕ್ಕೆ ಹೊಂದಿಕೊAಡAತೆಯೇ ೨೦೦೦ ಎಕರೆ ಸಾಮಾಜಿಕ ಅರಣ್ಯ ಭೂಮಿ ಇದೆ.ಅದನ್ನು ಬಳಕೆ ಮಾಡಿಕೊಳ್ಳಬಹುದು. ೆ. ಶಾಸಕರು ಸಹ ಇದೇ ಆಶಯದೊಂದಿಗೆ ರೈತರ ಪರವಾಗಿ ಮುಖ್ಯಮಂತ್ರಿಗಳೊAದಿಗೆ ಮಾತನಾಡಿ, ಆದೇಶ ಮಾಡಿಸಿದ್ದಾರೆ. ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಇದನ್ನು ಪರಿಗಣಿಸಿ, ರೈತರ ಭೂಮಿಯನ್ನು ಭೂಸ್ವಾಧೀನದಿಂದ ಹೊರಗಿಡಬೇಕೆಂದರು.
ತುಮುಲ್ ನಿರ್ದೇಶಕ ಶ್ರೀಮತಿ ಭಾರತೀ ಶ್ರೀನಿವಾಸ್ ಮಾತನಾಡಿ, ರೈತರ ಆಶಯದಂತೆ ಈಗಾಗಲೇ ಶಾಸಕರು ಮುಖ್ಯಮಂತ್ರಿಗಳ ಬಳಿ ಮಾತನಾಡಿ, ರೈತರ ಫಲವತ್ತಾದ ಜಮೀನು ಉಳಿಸುವ ಕೆಲಸ ಮಾಡಿದ್ದಾರೆ. ಹೆಚ್.ಎ.ಎಲ್ ಘಟಕಕ್ಕೆ ಹೊಂದಿಕೊAಡAತೆಯೇ ಇರುವ ಸಾಮಾಜಿಕ ಅರಣ್ಯ ಭೂಮಿಯನ್ನು ಸರಕಾರ ಬಳಕೆ ಮಾಡಿಕೊಳ್ಳಲಿ, ಇದಕ್ಕೆ ನಮ್ಮ ಅಭ್ಯಂತರವಿಲ್ಲ. ನಾವು ಸದಾ ಕಾಲ ರೈತರ ಪರವಾಗಿ ಇರುತ್ತೇವೆ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಮುಖಂಡರಾದ ಗೋವಿಂದೇಗೌಡ, ರೈತ ಸಂಘದ ರಾಚಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news tumakur tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ
Next Article ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
News Desk Benkiyabale

Related Posts

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm ಕರ್ನಾಟಕ ಸುದ್ಧಿಗಳು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm ತುಮಕೂರು

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.