ತುಮಕೂರು: ದೇಶದಲ್ಲಿ ಅರಾಜಕತೆ ಸೃಸ್ಟಿಸುತ್ತಿರುವ ಹಾಗೂ ರಾಜ್ಯದಲ್ಲಿ ಬಿಜೆಪಿ ಶಾಸಕರ ಮೇಲೆ ಗೂಂಡಾಗಿರಿ ನಡೆಸುತ್ತಿರುವ ಕಾಂಗ್ರೆಸ್ ಧೋರಣೆ ಖಂಡಿಸಿ ಗುರುವಾರ ಜಿಲ್ಲಾ ಬಿಜೆಪಿ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ವರ್ತನೆ ಖಂಡಿಸಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜನರಿಂದ ತಿರಸ್ಕೃತರಾಗಿರುವ ಕಾಂಗ್ರೆಸ್, ಜನರ ವಿಶ್ವಾಸ ಗಳಿಸಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಅಭದ್ರಗೊಳಿಸಲು ಹೊರಟಿರುವುದು ನಾಚಿಕೆಗೇಡು. ನೀಟ್ ಪರೀಕ್ಷೆ ನೆಪ ಮಾಡಿಕೊಂಡು ದೇಶ ದ್ರೋಹಿಗಳ ಜೊತೆ ಸೇರಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಮಾಡುವ ಮೂಲಕ ರಾಜಕೀಯ ಲಾಭ ಪಡೆಯಲು ಹೊರಟ ಕಾಂಗ್ರೆಸ್ ಉದ್ದೇಶ ಈಡೇರುವುದಿಲ್ಲ ಎಂದು ಕಿಡಿಕಾರಿದರು.
ಕಾಕ್ರೋಚ್ ಜನತಾ ಪಾರ್ಟಿಗೆ ಭಾರತದ ಬಗ್ಗೆ ಗೌರವವಿಲ್ಲ, ಅಂತಹವರ, ನೇಪಾಳದಂತೆ, ಶ್ರೀಲಂಕಾದAತೆ, ಬಾಂಗ್ಲಾದAತೆ ಭಾರತದಲ್ಲಿ ಅರಾಜಕತೆ ಸೃಷ್ಟಿ ಮಾಡುತ್ತೇವೆ ಎನ್ನುವ ದೇಶ ದ್ರೋಹಿಗಳ ಜೊತೆ ಸೇರಿರುವ ಕಾಂಗ್ರೆಸ್‌ನ ಉದ್ದೇಶ ದೇಶದ ಜನರಿಗೆ ತಿಳಿದಿದೆ. ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ. ವಿಶ್ವದ ಅನೇಕ ರಾಷ್ಟçಗಳ ಅಭದ್ರತೆಯಲ್ಲಿರುವಾಗ ಪ್ರಧಾನಿ ಮೋದಿಯವರ ಆಡಳಿತದಿಂದಾಗಿ ಭಾರತ ಸುಭದ್ರವಾಗಿದೆ. ಸರ್ಕಾರದ ಉತ್ತಮ ಆಡಳಿತ ಸಹಿಸದ ಕಾಂಗ್ರೆಸ್ ದೇಶದ್ರೋಹಿಗಳ ಜೊತೆ ಸೇರಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳು ಮಾಡುತ್ತಿದೆ ಎಂದು ಟೀಕಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷಎಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿದರು.
ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟ ರಂಗೇಗೌಡ ಮಾತನಾಡಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಹೆಚ್. ಹನುಮಂತರಾಜು, ನಗರ ಅಧ್ಯಕ್ಷ ಧನುಷ್, ಮಹಿಳಾ ಮೋರ್ಚಾ ಅಧ್ಯಕ್ಷೆ ಚೈತ್ರ ಮಂಜುನಾಥ್, ನಗರ ಅಧ್ಯಕ್ಷೆ ವಸಂತ ಸುದರ್ಶನ್, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ವಿನಯ್ ಜೈನ್, ಮುಖಂಡರಾದ ಸತ್ಯ ಮಂಗಲ ಜಗದೀಶ್, ಕೆ.ವೇದಮೂರ್ತಿ, ನವಚೇತನ್, ಬಂಬೂ ಮೋಹನ್, ಪ್ರೀತಂಜೈನ್, ವಿರೂಪಾಕ್ಷಪ್ಪ, ಸಿ.ಎನ್. ರಮೇಶ್, ಮಲ್ಲಿಕಾರ್ಜುನ್, ಪುಟ್ಟರಾಜು, ಹನುಮಂತರಾಜು, ರೇಖಾರಾಜ್, ಸಿದ್ಧಗಂಗಯ್ಯ, ಅಂಜನಮೂರ್ತಿ, ಗಂಗೇಶ್ ಹದ್ದಿನಕಲ್ಲು, ವೆಂಕಟೇಶಾಚಾರ್, ಎನ್. ರಾಜಣ್ಣ, ಬ್ರಹ್ಮಪ್ರಕಾಶ್, ಜಗದೀಶ್ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
(Visited 1 times, 1 visits today)



