ತುಮಕೂರು: ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಹಲವು ತಿಂಗಳುಗಳಿAದ ಬಾಕಿ ಇರುವ ವೇತನ ಬಿಡುಗಡೆ ಮಾಡಬೇಕು ಹಾಗೂ ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು ತಕ್ಷಣವೇ ಜಮೆ ಮಾಡಬೇಕೆಂದು ಆಗ್ರಹಿಸಿ, ಹೊರಗುತ್ತಿಗೆದಾರರು ಹಾಗೂ ಸಿಬ್ಬಂದಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಮುಂಭಾಗ ಶಾಂತಿಯುತ ಪ್ರತಿಭಟನೆ ನಡೆಸಿದರು.
ಕಚೇರಿ ಆವರಣದಲ್ಲಿ ಶಿಸ್ತುಬದ್ಧವಾಗಿ ಜಮಾಯಿಸಿದ ಗುತ್ತಿಗೆದಾರರು ನೌಕರರು ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದರು. ಇದೆ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘ (ರಿ) ಬೆಂಗಳೂರು ರಾಜ್ಯ ಘಟಕದ ಅಧ್ಯಕ್ಷರು ಅಕ್ಷಯ್ ರವರು ಈ ನಾಲ್ಕು ತಿಂಗಳಿAದ ವೇತನ ನೀಡಿಲ್ಲ ಹಾಗೂ ೧೦ ತಿಂಗಳಿನ ಪಿ ಎಫ್ ಐ ಕಟ್ಟಿಲ್ಲ ಎಂದು ಆರೋಪಿಸಿ ಇಂದು ಡಿಎಚ್‌ಒ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಬಾಕಿ ವೇತನ ತಕ್ಷಣವೇ ಪಾವತಿಯಾಗಲಿ ಆರೋಗ್ಯ ಕೇಂದ್ರಗಳಲ್ಲಿ ಹಗಲಿರುಳು ಶ್ರಮಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ಸಿಗದೆ ಅವರ ಕುಟುಂಬಗಳು ತೀವ್ರ ಹಣಕಾಸಿನ ಸಂಕಷ್ಟಕ್ಕೆ ಸಿಲುಕಿವೆ. ಇಲಾಖೆಯಿಂದ ಬರಬೇಕಾದ ಅನುದಾನ ಬಾಕಿ ಇರುವುದರಿಂದ ನೌಕರರಿಗೆ ವೇತನ ನೀಡಲು ಸಮಸ್ಯೆಯಾಗುತ್ತಿದೆ, ಆದ್ದರಿಂದ ಬಾಕಿ ಬಿಲ್‌ಗಳನ್ನು ತಕ್ಷಣವೇ ಮಂಜೂರು ಮಾಡಬೇಕು ಎಂದು ಗುತ್ತಿಗೆದಾರರು ಮನವಿ ಮಾಡಿದರು.
ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ, ಸಂಪೂರ್ಣ ಶಾಂತಿಯುತವಾಗಿ ಹೋರಾಟ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಮ್ಮ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಿದರು. ನಾವು ಸಾರ್ವಜನಿಕರ ಆರೋಗ್ಯ ಸೇವೆಗೆ ಯಾವುದೇ ಧಕ್ಕೆಯಾಗದಂತೆ ಶಾಂತಿಯುತವಾಗಿ ನಮ್ಮ ಹಕ್ಕೊತ್ತಾಯ ಮಂಡಿಸುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಸರ್ಕಾರ ಮತ್ತು ಹಿರಿಯ ಅಧಿಕಾರಿಗಳು ಮಾನವೀಯತೆಯ ಆಧಾರದ ಮೇಲೆ ಶೀಘ್ರದಲ್ಲೇ ಪರಿಹರಿಸಬೇಕು ಎಂದು ತಿಳಿಸಿದರು.
(Visited 1 times, 1 visits today)



