BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ
news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

By News Desk BenkiyabaleUpdated:July 27, 2026 5:12 pm

ತುಮಕೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನಗರದ ಟೌನ್‌ಹಾಲ್‌ನ ಅಂಬೇಡ್ಕರ್ ಪ್ರತಿಮೆ ಬಳಿ ಮೇಣದ ಬತ್ತಿ ಹಿಡಿದು ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಕೆ.ದೊರೈರಾಜ್, ಕೇಂದ್ರ ಸರ್ಕಾರಕ್ಕೆ ಜನಪರವಾದ ಕಾಳಜಿ ಇಲ್ಲವಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಹಲವು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರೂ, ಪ್ರತಿಭಟನೆ ನಡೆಸಿದ್ದರೂ ಸಹ ಕೇಂದ್ರ ಸರ್ಕಾರ ಮೌನವಾಗಿತ್ತು. ದೆಹಲಿ ಸೇರಿದಂತೆ ದೇಶಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ನಂತರ ಎಚ್ಚೆತ್ತುಕೊಂಡು ಕೇಂದ್ರ ಸರ್ಕಾರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ತೆಗೆದುಕೊಂಡಿತು. ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಮೊದಲನೇ ಜಯವಾಗಿದೆ. ದೇಶಾದ್ಯಂತ ವಿದ್ಯಾರ್ಥಿ-ಯುವ ಜನರು ಜಾಗೃತರಾಗಿದ್ದಾರೆ. ಕೋಮುವಾದಿ ಅಟ್ಟಹಾಸ ನಡೆಯುವುದಿಲ್ಲ ಎಂದ ಸಂದೇಶವನ್ನು ವಿದ್ಯಾರ್ಥಿಗಳು ನೀಡಿದ್ದಾರೆ. ದೇಶದಲ್ಲಿ ಉಂಟಾಗಿರುವ ಶಿಕ್ಷಣದಲ್ಲಿನ ಭ್ರಷ್ಟಾಚಾರ, ನಿರುದ್ಯೋಗ ವಿದ್ಯಾರ್ಥಿ ಯುವಜನರನ್ನು ಹತಾಶರನ್ನಾಗಿ ಮಾಡಿದೆ. ಆದ್ದರಿಂದ ಈ ಉಂಟಾಗಿರುವ ಹೋರಾಟ ನಿಲ್ಲಬಾರದು. ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕಾಗಿದೆ ಎಂದರು.
ಎಸ್‌ಎಫ್‌ಐ ಮಾಜಿ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ,, ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿರುವುದು ಕೇಂದ್ರ ಸರ್ಕಾರದ ವೈಫಲ್ಯವನ್ನು ಸೂಚಿಸುತ್ತದೆ. ಶಿಕ್ಷಣದಲ್ಲಿನ ಭ್ರಷ್ಟಾಚಾರವು ಮತ್ತು ಶಿಕ್ಷಣದ ಖಾಸಗೀಕರಣವು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ದೇಶದಲ್ಲಿ ವಿದ್ಯಾರ್ಥಿಗಳು ಮತ್ತು ಯುವ ಜನರು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಪ್ರತಿಭಟನೆಗಳು ತೀವ್ರಗೊಂಡಿವೆ. ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರವು ಶಿಕ್ಷಣದ ಭ್ರಷ್ಟಾಚಾರ ಮತ್ತು ನಿರುದ್ಯೋಗಕ್ಕೆ ಸಂಬAಧಿಸಿದAತೆ ವಿಶೇಷವಾದ ಸಂಸತ್ ಅಧಿವೇಶನ ಕರೆದು ಚರ್ಚಿಸಬೇಕು. ಬದಲಾಗಿ ವಿದ್ಯಾರ್ಥಿಗಳಿಗೆ ತಮ್ಮ ಹಕ್ಕುಗಳನ್ನು ಕೇಳಿದರೆ ದೇಶದ್ರೋಹಿ ಪಟ್ಟ ಕಟ್ಟುವುದು ಅತ್ಯಂತ ಹೀನಾಯವಾದ ಕೃತ್ಯವಾಗಿದೆ. ಬಿಜೆಪಿಯ ಕೋಮುವಾದ ಮತ್ತು ಧಾರ್ಮಿಕ ವಿಚಾರಗಳು ದೇಶದ ವಿದ್ಯಾರ್ಥಿ ಮತ್ತು ಯುವಜನರಿಗೆ ಉದ್ಯೋಗ ಸೃಷ್ಟಿಸಲಾರವು. ಇದನ್ನು ಅವರು ಮನಗಾಣಬೇಕು. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು. ವಿದ್ಯಾರ್ಥಿಗಳ ಮೇಲೆ ಹಾಕಿರುವ ಎಫ್‌ಐಆರ್‌ಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಮೆಡಿಕಲ್ ವಿದ್ಯಾರ್ಥಿನಿ ಪೃಥ್ವಿ ಮಾತನಾಡಿ, ನಾನು ನೀಟ್ ಪರೀಕ್ಷೆಯಲ್ಲಿ ಪಾಸಾಗಿ ಡಾಕ್ಟರ್ ಆಗಬೇಕೆಂಬ ಕನಸು ಕಂಡಿದ್ದೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜೀವನದ ಮೇಲೆ ಜಿಗುಪ್ಸೆ ಉಂಟಾಗಿದೆ. ಮುಂದಾದರೂ ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ಕ್ರಮ ವಹಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಗಮವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದರು.
ವಿದ್ಯಾರ್ಥಿನಿ ಸೈಮಾ ಸೈಯಾದಿ ಮಾತನಾಡಿ ಪ್ರಧಾನಿಗಳಿಗೆ ವಿದೇಶಕ್ಕೆ ಹೋಗಲು ಸಮಯವಿರುತ್ತದೆ. ನಮ್ಮ ದೇಶದ ವಿದ್ಯಾರ್ಥಿಗಳ ಜೊತೆ ಐದು ನಿಮಿಷ ಮಾತನಾಡಲು ಸಮಯವಿಲ್ಲವಾಗಿದೆ ಎಂದು ಟೀಕಿಸಿದರು.
ಶ್ರದ್ಧಾಂಜಲಿ ಸಭೆಯಲ್ಲಿ ಗಾನಶ್ರೀ, ನವ್ಯ, ಜಯ, ಪವನ್, ಮಲ್ಲೇಶ್, ಅನ್ನಪೂರ್ಣ ಎನ್, ಜೋಯಾ ಕಮರ್, ಡಿವೈಎಫ್‌ಐ ಮಂಜುನಾಥ್, ಎಸ್.ರಾಘವೇಂದ್ರ, ಕಲ್ಪನ, ಕಮಲ, ಸಿಂಚನ, ಸೈಯದ್ ಮುಜೀಬ್, ಎನ್.ಕೆ.ಸುಬ್ರಮಣ್ಯ, ರಂಗಧಾಮಯ್ಯ, ಲಕ್ಷಿಕಾಂತ ಮುಂತಾದವರು ಭಾಗವಹಿಸಿದ್ದರು.

(Visited 1 times, 1 visits today)
kannada news karnataka Protest tumakur tumkur Tumkur mahanagara palike tumkur news
Previous Articleಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ
Next Article ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ
News Desk Benkiyabale

Related Posts

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm ಕರ್ನಾಟಕ ಸುದ್ಧಿಗಳು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm ತುಮಕೂರು

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.