ತುಮಕೂರು: ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಪ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ ಮಳೆಯಿಂದ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಸಂದರ್ಭದಲ್ಲಿ ಬೆಳೆ ವಿಮೆ ನಷ್ಟ ಪರಿಹಾರವನ್ನು ಪಾವತಿಸುವ ಅವಕಾಶವಿದೆ. ಪ್ರಸಕ್ತ ಸಾಲಿನಲ್ಲಿ ಎಲ್ ನಿನೋದಿಂದ ಮಳೆ ಕೊರತೆಯಿದ್ದು, ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಹಾಗೂ ಬೆಳೆ ಸಾಲ ಪಡೆಯದ ಎಲ್ಲಾ ರೈತರು ವಿಮಾ ಕಂತು ಪಾವತಿಸಿ ಭಾಗವಹಿಸಬಹುದು.
ಈ ಯೋಜನೆಯಡಿ ಮಳೆಯಿಂದ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಸಂದರ್ಭದಲ್ಲಿ ಬೆಳೆ ವಿಮೆ ನಷ್ಟ ಪರಿಹಾರವನ್ನು ಪಾವತಿಸಲಾಗುವುದು. ಇದುವರೆಗೆ ೪೪,೧೫೪ ರೈತರು ನೊಂದಣಿಯಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿಯಾಗಬೇಕಿರುತ್ತದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮಾರ್ಗಸೂಚಿಗಳನ್ವಯ ಆರ್ಥಿಕ ಸಂಸ್ಥೆಗಳು/ಬ್ಯಾAಕ್/ಗ್ರಾಮ-ಒನ್ ಕೇಂದ್ರಗಳು/ಸಾಮಾನ್ಯ ಸೇವಾ ಕೇಂದ್ರಗಗಳಲ್ಲಿ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು.
ಈ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರನ್ನು ಕಡ್ಡಾಯವಾಗಿ ನೊಂದಾಯಿಸಬೇಕೆAದು ಮಾನ್ಯ ಜಿಲ್ಲಾಧಿಕಾರಿಗಳು ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಾಜರಿದ್ದ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಎಲ್ಲಾ ಬ್ಯಾಂಕ್‌ಗಳಿಗೆ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿ ಪ್ರಗತಿ ಸಾಧಿಸಲು ಸೂಚಿಸಿರುತ್ತಾರೆ.
ಅಲ್ಲದೆ, ಜಿಲ್ಲೆಯಾದ್ಯಂತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ನೊಂದಣಿ ಮಾಡಿಸಿಕೊಳ್ಳಬೇಕೆಂದು ಕೋರಿದ್ದು, ೧೪-೦೮-೨೦೨೬ ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಿರುತ್ತಾರೆ.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

(Visited 1 times, 1 visits today)