ಕೊರಟಗೆರೆ: ಯುವಜನರನ್ನು ಮಾದಕ ವ್ಯಸನದಿಂದ ದೂರವಿರಿಸಿ, “ಡ್ರಗ್ಸ್ ಮುಕ್ತ ಕರ್ನಾಟಕ” ನಿರ್ಮಾಣದ ಸಂಕಲ್ಪದೊAದಿಗೆ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ, ಕೊರಟಗೆರೆ ಪೊಲೀಸ್ ಇಲಾಖೆ ಹಾಗೂ ರಾಘವೇಂದ್ರ ಇಂಟರ್‌ನ್ಯಾಷನಲ್ ಶಾಲೆಯ ಸಹಯೋಗದಲ್ಲಿ ಪಟ್ಟಣದ ಎಂ.ಜಿ. ಪ್ಯಾಲೇಸ್‌ನಲ್ಲಿ ಸೋಮವಾರ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಪಿಯು ಕಾಲೇಜಿನ ನೂರಾರು ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಪಡೆದು, ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿದರು.
ಪ್ರಿಯದರ್ಶಿನಿ ಪಿಯು ಕಾಲೇಜಿನ ಪ್ರಾಂಶುಪಾಲ ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಆಮಿಷಗಳಿಗೆ ಒಳಗಾಗದೆ ಶಿಕ್ಷಣದತ್ತ ಗಮನಹರಿಸಬೇಕು. ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಕರೆ ನೀಡಿದರು.
ಮಧುಗಿರಿ ಡಿವೈಎಸ್‌ಪಿ ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲವನ್ನು ನಿರ್ಮೂಲನೆ ಮಾಡಲು ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.
ಅನುಮಾನಾಸ್ಪದ ಚಟುವಟಿಕೆಗಳು ಕಂಡುಬAದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಡ್ರಗ್ಸ್ ಸೇವನೆ ಹಾಗೂ ಮಾರಾಟ ಕಾನೂನುಬಾಹಿರವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ತಾಲೂಕು ಆರೋಗ್ಯಾಧಿಕಾರಿಯವರು ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ದೇಹ ಮತ್ತು ಮನಸ್ಸಿನ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನದಿಂದ ದೂರವಿರಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸುವ ಪ್ರತಿಜ್ಞೆ ಸ್ವೀಕರಿಸಿದರು. ಸಮಾಜದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಯುವಜನರಲ್ಲಿ ಉತ್ತಮ ಅರಿವು ಮೂಡಿಸುತ್ತಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
(Visited 1 times, 1 visits today)



