ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಪ್ರಕ್ರಿಯೆ ಪೂರ್ಣಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಕೊನೆಯ ಕ್ಷಣದವರೆಗೂ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಜಿಲ್ಲಾಡಳಿತ ಕ್ರಮವಹಿಸಿದ್ದು, ಮತದಾರರು ತಮ್ಮ ಯಾವುದೇ ಸಮಸ್ಯೆ, ಗೊಂದಲಗಳನ್ನು ಸಹಾಯವಾಣಿಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನೋಂದಾಯಿತ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ ನಡೆಸಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜಿಲ್ಲೆಯಲ್ಲಿ ಸಮರ್ಪಕವಾಗಿ ನಡೆಯುತ್ತಿದ್ದು, ಮತಗಟ್ಟೆ ಅಧಿಕಾರಿಗಳು ಈಗಾಗಲೇ ಜಿಲ್ಲೆಯಲ್ಲಿ ಒಟ್ಟು ೨೨,೯೮,೮೭೯ ಗಣತಿ ನಮೂನೆಗಳನ್ನು ವಿತರಣೆ ಮಾಡಿದ್ದು, ಈ ಪೈಕಿ ಶೇ.೮೭.೬೫ರಷ್ಟು ಗಣತಿ ನಮೂನೆಗಳನ್ನು ಹಿಂಪಡೆದು ಗಣಕೀಕರಣಗೊಳಿಸಿದ್ದಾರೆ. ಬಾಕಿ ಗಣತಿ ನಮೂನೆಗಳನ್ನು ನಿಯಮಾನುಸಾರ ಕೊನೆಯ ದಿನವಾದ ಆಗಸ್ಟ್ ೮ರೊಳಗೆ ಹಿಂಪಡೆದು ಗಣಕೀಕರಣಗೊಳಿಸಬೇಕಿರುವುದರಿಂದ ಮುಂದಿನ ೨ ದಿನದೊಳಗಾಗಿ ಮತದಾರರು ತಮ್ಮ ಭರ್ತಿ ಮಾಡಿದ ಗಣತಿ ನಮೂನೆಯನ್ನು ಮತಗಟ್ಟೆ ಅಧಿಕಾರಿಗಳಿಗೆ ಹಿಂತಿರುಗಿಸುವ ಮೂಲಕ ಪ್ರಕ್ರಿಯೆ ಸರಾಗವಾಗಿ ನಡೆಯಲು ಸಹಕರಿಸಬೇಕಾಗಿ ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರು ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಗೊಂದಲವಿದ್ದಲ್ಲಿ ಅಥವಾ ಸಮಸ್ಯೆಗಳಿದ್ದಲ್ಲಿ, ಮತಗಟ್ಟೆ ಅಧಿಕಾರಿಗಳು ಮನೆಗೆ ಬಾರದೆ, ಗಣತಿ ನಮೂನೆ ಹಿಂಪಡೆಯದಿದ್ದಲ್ಲಿ, ಸರಿಯಾದ ಮಾಹಿತಿ ನೀಡದಿದ್ದಲ್ಲಿ ಇಂತಹ ಯಾವುದೇ ಸಮಸ್ಯೆಗಳಿದ್ದಲ್ಲಿ ಸಹಾಯವಾಣಿ ಮೊಬೈಲ್ ಸಂಖ್ಯೆ ೭೩೦೪೯೭೫೫೧೯ ಅಥವಾ ಸ್ಥಿರ ದೂರವಾಣಿ ಸಂಖ್ಯೆ ೦೮೧೬-೨೨೧೩೪೦೦ ಈ ನಂಬರ್‌ಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಂಡು ಪ್ರಕ್ರಿಯೆಗೆ ಸಹಕಾರ ನೀಡುವಂತೆ ಅವರು ತಿಳಿಸಿದರು.
ಪ್ರಸ್ತುತ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟರ್ ಮತಗಟ್ಟೆ ಅಧಿಕಾರಿಗಳ ಸಮನ್ವಯದೊಂದಿಗೆ ಶೇ.೮೭.೬೫ರಷ್ಟು ಪ್ರಗತಿ ಸಾಧಿಸಲಾಗಿದ್ದು, ಇನ್ನೆರಡು ದಿನದಲ್ಲಿ ಶೇ.೧೦೦ರಷ್ಟು ಪ್ರಗತಿ ಸಾಧಿಸಲು ಸಹಕರಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತುಮಕೂರು ಮಹಾ ನಗರಪಾಲಿಕೆಯ ಎಲ್ಲಾ ವಾರ್ಡುಗಳಲ್ಲಿ ಮತದಾರರ ಸಹಾಯವಾಣಿ ಕೇಂದ್ರಗಳನ್ನು ಸಾರ್ವಜನಿಕರ ಸಹಾಯಕ್ಕಾಗಿ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಆಗಸ್ಟ್ ೨ರೊಳಗೆ ಮತದಾರರು ತಮ್ಮ ಗಣತಿ ನಮೂನೆಯನ್ನು ಮತಗಟ್ಟೆ ಅಧಿಕಾರಿಗಳಿಗೆ ಹಿಂತಿರುಗಿಸಿದಲ್ಲಿ ಗಣತಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಲು ಸಹಾಯವಾಗಲಿದೆ ಎಂದರು.
ಈಗಾಗಲೇ ಎಲ್ಲಾ ೧೧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳು ರಾಜಕೀಯ ಪಕ್ಷಗಳ ಸಭೆ ನಡೆಸಿ ಮತದಾರರ ಪಟ್ಟಿಯಲ್ಲಿನ ಗೈರು, ಸ್ಥಳಾಂತರ, ಮೃತರು, ನಕಲು ಹಾಗೂ ಇತರೆ ಮತದಾರರ ಮಾಹಿತಿಯನ್ನು ಪರಿಶೀಲಿಸಲಾಗಿದ್ದು, ನಿಯಮಾನುಸಾರ ರಾಜಕೀಯ ಪಕ್ಷಗಳ ಏಜೆಂಟರುಗಳಿಗೆ ಮಾಹಿತಿ ನೀಡಲಾಗಿದೆ. ಅದರಂತೆ ಈವರೆಗೆ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ೪೫,೨೬೮ ಮೃತಪಟ್ಟ ಮತದಾರರು, ೧೮,೮೮೪ ಗೈರು ಮತದಾರರು, ೯೯,೮೧೫ ಶಾಶ್ವತ ಸ್ಥಳಾಂತರಗೊAಡ ಮತದಾರರ ಮಾಹಿತಿ ಲಭ್ಯವಾಗಿದೆ ಎಂದು ಅವರು ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಬಿಎಲ್‌ಎಗಳನ್ನು ನೇಮಿಸಲಾಗಿದ್ದು, ಮತದಾರರ ಪಟ್ಟಿಯಿಂದ ಹೊರಗುಳಿಯಬಹುದಾದ ಮತದಾರರ ಲಭ್ಯ ಮಾಹಿತಿಯನ್ನು ನೀಡಲಾಗಿದೆ. ಕರಡು ಮತದಾರರ ಪಟ್ಟಿ ಪ್ರಕಟ ನಂತರ ಈ ಸಂಬAಧಿಸಿದAತೆ ಹಕ್ಕು ಆಕ್ಷೇಪಣೆಗಳನ್ನು ಸೂಕ್ತ ದಾಖಲೆಯೊಂದಿಗೆ ಸಲ್ಲಿಸಲು ಆಗಸ್ಟ್ ೧೭ ರಿಂದ ಸೆಪ್ಟೆಂಬರ್ ೧೬ರವರೆಗೆ ಕಾಲಾವಕಾಶವಿದ್ದು, ಮತದಾರರ ನೋಂದಣಾಧಿಕಾರಿಗಳು ವಿಚಾರಣೆ ನಡೆಸಿ ಅಕ್ಟೋಬರ್ ೧೫ರೊಳಗೆ ಅಂತಿಮ ನಿರ್ಧಾರ ಕೈಗೊಳ್ಳಲು ಅವಕಾಶವಿರುತ್ತದೆ. ಅಕ್ಟೋಬರ್ ೧೯ರಂದು ಅಂತಿಮ ಪಟ್ಟಿ ಪ್ರಕಟವಾಗುವುದರಿಂದ ಅದಕ್ಕೆ ಪೂರ್ವದಲ್ಲಿಯೇ ಸರಿಪಡಿಸಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
(Visited 1 times, 1 visits today)



