ತುಮಕೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸೆ÷್ಟÃಬಲ್ (ಸಿವಿಲ್) ವೃಂದದ ಹುದ್ದೆಗಳ ನೇರ ನೇಮಕಾತಿ ಹಿನ್ನೆಲೆ ನಗರದ ೨೭ ಪರೀಕ್ಷಾ ಕೇಂದ್ರಗಳಲ್ಲಿ ಆ.೨ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಅಹಿತಕರ ಘಟನೆ ಸಂಭವಿಸದAತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯು ಆದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ೨೦೦ ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆಯು ಆ.೨ರಂದು ಬೆಳಗ್ಗೆ ೯ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತವಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್/ಸೈಬರ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆ ಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆ್ಯಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಬೇಸಿಕ್ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ತರುವುದು ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡು ಬಂದಲ್ಲಿ ಅವರ ವಿರುದ್ಧ ಬಿಎನ್‌ಎಸ್ ೨೦೨೩ರಡಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು.
ವಸ್ತç ಸಂಹಿತೆ: ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳನ್ನು ಶರ್ಟ್ಗಳನ್ನು ಧರಿಸತಕ್ಕದ್ದಲ್ಲ.
ಮಹಿಳಾ ಅಭ್ಯರ್ಥಿಗಳು ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ. ಷೂ ಧರಿಸು ವುದನ್ನು ನಿಷೇದಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಬಹುದು
ಜನಿವಾರ, ಶಿವದಾರ ಧರಿಸಬಹುದು: ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇದಿಸಲಾಗಿದೆ.ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಕಿವಿ, ತಲೆ ಮತ್ತು ಮುಖ ಮುಚ್ಚುವಂತಹ ಯಾವುದೇ ಉಡುಪುಗಳನ್ನು ಧರಿಸತಕ್ಕದ್ದಲ್ಲ. ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ)
ಮೊಬೈಲ್, ಪೇಜರ್‌ಗಿಲ್ಲ ಅವಕಾಶ: ಮೊಬೈಲ್ ಪೋನ್, ಇಯರ್ ಪೋನ್‌ಗಳು, ಮೈಕ್ರೋಫೋನ್, ಪೇಜರ್, ಇತ್ಯಾದಿ ಯಾವುದೇ ಆಧುನಿಕ ಸಂವಹನ ಸಾಧನಗಳು. ಯಾವುದೇ ಗಡಿಯಾರ, ಕೈಗಡಿಯಾರ, ಬಳೆ, ಕ್ಯಾಮೆರಾ ಇತ್ಯಾದಿ. ಶ್ರವಣ ಸಾಧನಗಳು ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ ೨ ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕಿಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು.
(Visited 1 times, 1 visits today)



