BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
  • ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ
By News Desk BenkiyabaleUpdated:August 01, 2026 2:41 pm

ತುಮಕೂರು: ತಮಿಳುನಾಡಿಗೆ ಪ್ರತಿದಿನ ೩,೫೦೦ ಕ್ಯೂಸೆಕ್ಸ್ ನೀರು ಬಿಡಬೇಕೆಂದುಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸ್ಸಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ವೀವ್ರ ವಿರೋಧ ವ್ಯಕ್ತಪಡಿಸಿದೆ. ನಮ್ಮನೀರನ್ನು ಉಳಿಸಿಕೊಳ್ಳಲು, ಕಾವೇರಿ ಸಮಿತಿ ಶಿಫಾರಸು ವಿರೋಧಿಸಿ ರಾಜ್ಯ ಸಂಘಟನೆಗಳು ರೂಪಿಸುವ ಹೋರಾಟವನ್ನು ಬೆಂಬಲಿಸಿ ಹೋರಾಟ ನಡೆಸಲು ಒಕ್ಕೂಟದ ಮುಖಂಡರು ತೀರ್ಮಾನ ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಪ್ರಮುಖರು ಸಭೆ ಸೇರಿ ಕಾವೇರಿ ನೀರು ಹೋರಾಟ ಕುರಿತು ಚರ್ಚಿಸಿದರು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಡಾ.ಧನಿಯಾ ಕುಮಾರ್ ಮಾತನಾಡಿ ಮಳೆ ಬೀಳದೆ ನಮ್ಮಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ಜಲಾಶಯಗಳು ಬತ್ತಿಹೋಗಿರುವಾಗ ತಮಿಳುನಾಡಿಗೆ ಪ್ರತಿದಿನ ೩೫೦೦ ಕ್ಯೂಸೆಕ್ಸ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸು ಅಮಾನವೀಯ. ಸರ್ಕಾರ ಈ ಶಿಫಾರಸ್ಸನ್ನು ತಿರಸ್ಕರಿಸಿ ನಾಡಿನ ಜನರ ರಕ್ಷಣೆಗೆ ಬದ್ಧತೆ ತೋರಬೇಕು.ಕಾವೇರಿ ನೀರಿನ ವಿಚಾರದಲ್ಲಿ ಪ್ರತಿಬಾರಿಯೂ ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ಸಮರ್ಥವಾಗಿ ಮಂಡನೆ ಮಾಡುವಲ್ಲಿ ಪದೇ ಪದೆ ವಿಫಲವಾಗುತ್ತಿರುವುದು ದುರಾದೃಷ್ಟಕರ ಎಂದರು.
ರಾಜಕಾರಣಿಗಳು ತಮ್ಮ ಯಾವುದಾದರೂ ಕೆಲಸಗಳನ್ನು ಸರ್ಕಾರದ ಮೇಲೆ ಒತ್ತಡ ಹಾಕಿ ಮಾಡಿಸಿಕೊಳ್ಳುತ್ತಾರೆ. ಆದರೆ ಕರ್ನಾಟಕದ ನೆಲ, ಜಲ, ಭಾಷೆ ವಿಚಾರದಲ್ಲಿ ಅಂತಹ ಆಸಕ್ತಿ ತೋರದಿರುವುದು ವಿಷಾದಕರ. ಬೆಳೆಗೆ ನೀರು ಬಳಸಬೇಡಿ ಎಂದು ಸರ್ಕಾರ ಹೇಳಿದೆ.ಕೊರೊನಾ ಸಂದರ್ಭದಿAದ ನಮ್ಮ ರೈತರು ನಾನಾ ಕಾರಣಗಳಿಂದ ಸಂಕಷ್ಟದಲ್ಲಿದ್ದಾರೆ, ಸಾಲದಲ್ಲಿ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಳೆ ಬೆಳೆಯಲು ನೀರು ಬಳಸಬೇಡಿ ಎಂದರೆ ರೈತರು ಏನಾಗಬೇಕು? ಎಂದರು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅಭಿನಯದ ಸಿನಿಮಾ ಪ್ರದರ್ಶನವನ್ನು ರಾಜ್ಯದಲ್ಲಿ ನಿಷೇಧಿಸಬೇಕು. ತುಮಕೂರಿನ ಐನಾಕ್ಸ್ನಲ್ಲಿ ಪ್ರದರ್ಶನ ರದ್ದು ಮಾಡಬೇಕು. ಇಲ್ಲವಾದರೆ ಕನ್ನಡಪರ ಸಂಘಟನೆಯವರು ಥಿಯೇಟರ್‌ಗೆ ನುಗ್ಗಿ ಬಲವಂತವಾಗಿ ಬಂದ್ ಮಾಡಿಸಬೇಕಾಗುತ್ತದೆ ಎಂದು ಡಾ.ಧನಿಯಾ ಕುಮಾರ್‌ಎಚ್ಚರಿಕೆ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಮಂಡಳಿಯ ಆದೇಶ ರಾಜ್ಯದ ಜನರಿಗೆ ಬರೆ ಎಳೆದಂತಾಗಿದೆ. ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯೂ ತಿರಸ್ಕೃತಗೊಂಡಿದೆ. ಈಗ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೊರೆಹೋಗಲು ತೀರ್ಮಾನಿಸಿದೆ, ಸರ್ವ ಪಕ್ಷಗಳ ಸಭೆ ನಡೆಸಿ ಮುಂದಿನ ತೀರ್ಮಾನ ಮಾಡಲಿದೆ. ರಾಜ್ಯದ ಜನರ ಹಿತ ಪರಿಗಣಿಸಿ ತೀರ್ಮಾನ ಮಾಡಬೇಕು ಎಂದು ಹೇಳಿದರು.
ತೀರ್ಪಿನಿಂದ ಕಾವೇರಿ ಕೊಳ್ಳದ ಭಾಗದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದುರಾಗುತ್ತದೆ. ಹೇಮಾವತಿ ನೀರು ಅವಲಂಬಿಸಿರುವ ತುಮಕೂರು ಜಿಲ್ಲೆ ಜನರೂ ನೀರಿನ ಬವಣೆ ಅನುಭವಿಸಬೇಕಾಗುತ್ತದೆ. ಮಳೆ ಬಾರದಿದ್ದರೆ ಹಾಹಾಕಾರ ಪರಿಸ್ಥಿತಿ ಉಂಟಾಗುತ್ತದೆ ಎಂದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್. ರಾಮಯ್ಯ ಮಾತನಾಡಿ, ನಮ್ಮ ಪಾಲಿನ ನೀರನ್ನು ಉಳಿಸಿಕೊಳ್ಳಲು ರಾಜಕೀಯ ನಾಯಕರು ಪ್ರಯತ್ನ ಮಾಡಬೇಕು. ರಾಜ್ಯದ ಎಲ್ಲಾ ಲೋಕಸಭಾ ಸದಸ್ಯರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು. ರಾಜ್ಯದ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡಲು ನ್ಯಾಯಾಧೀಶರನ್ನು ನೇಮಕ ಮಾಡಬೇಕು. ಪ್ರತಿ ಬಾರಿ ನಮ್ಮಲ್ಲಿ ಭಾಷೆ, ನೆಲ, ಜಲದ ವಿಚಾರವಾಗಿ ಅನ್ಯಾಯವಾಗುತ್ತಲೇ ಇರುವುದು ದುರಾದೃಷ್ಟಕರ ಎಂದರು.
ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರಾದ ಸೋಮಶೇಖರ್, ಅರುಣ್ ಕೃಷ್ಣಯ್ಯ, ಬೇವಿನ ಮರದ ಸಿದ್ದಪ್ಪ, ರೈತ ಸಂಘದ ಬಸವರಾಜು, ಅರುಣ್ ಕುಮಾರ್, ಶಬ್ಬೀರ್ ಅಹ್ಮದ್, ಇಂದ್ರ ಕುಮಾರ್, ಯಲ್ಲೇಶ್ ಗೌಡ, ಪ್ರಸನ್ನ ಕುಮಾರ್, ಮೀಸೆ ಸತೀಶ್, ಗಿರೀಶ್, ಲೋಕೇಶ್, ಭೀಮಾನಾಯ್ಕ್, ಉಮೇಶ್ ಕುಮಾರ್, ನಟರಾಜ್, ಬಸವರಾಜು, ಸಂತೋಷ್, ವಿಠಲ್ ಜೈನ್, ಗುರು ರಾಘವೇಂದ್ರ, ಜಿಮ್ ನಟರಾಜ್, ವರದರಾಜು, ಸಂತೋಷ್, ಸತೀಶ್, ಇಮ್ರಾನ್ ಅಹ್ಮದ್, ಯತೀಶ್ ದಿಬ್ಬೂರು, ಶ್ರೀನಿವಾಸ್, ಕಿರಣ್, ರಾಮಲಿಂಗರೆಡ್ಡಿ, ಸುಧೀರ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

(Visited 1 times, 1 visits today)
kannada news karnataka kaveri protest local news Police Protest tumakur tumkur tumkur news tumkur protest ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
Next Article ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
News Desk Benkiyabale

Related Posts

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm news
ತಾಜಾ ಸುದ್ಧಿಗಳು
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm
news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm
news

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
news

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
Our Youtube Channel
Our Picks

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

By News Desk BenkiyabaleAugust 12, 2026 5:37 pm

ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ…

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.