ಹುಳಿಯಾರು: ಅಕ್ಷಯ ಸಂಜೀವಿನಿ ಒಕ್ಕೂಟ ಹಾಗೂ ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರದ ಜಂಟಿ ಆಶ್ರಯದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಗ್ರಾಮದಲ್ಲಿ ಕುಪ್ಪೂರು ಗ್ರಾಮ ಪಂಚಾಯಿತಿ ಮಟ್ಟದ ಆರ್ಥಿಕ ಸಾಕ್ಷರತಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಂಜೀವಿನಿ ಒಕ್ಕೂಟದ ವ್ಯವಸ್ಥಾಪಕ ಎಚ್.ಕೆ. ರವಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ವಿಶೇಷವಾಗಿ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳು ಅತ್ಯಂತ ಪ್ರಮುಖವಾದವು. ಬ್ಯಾಂಕುಗಳು ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರಗಳ ಮುಖಾಂತರ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ಈ ಯೋಜನೆಗಳಲ್ಲಿ ನೋಂದಾಯಿಸಿಕೊAಡು ಸೌಲಭ್ಯ ಪಡೆಯಬೇಕು,” ಎಂದು ಕರೆ ನೀಡಿದರು.
ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್.ಎಂ.ಕುಮಾರಸ್ವಾಮಿ ಮಾತನಾಡಿ, ಕೆನರಾ ಬ್ಯಾಂಕ್‌ನಲ್ಲಿ ಮಹಿಳೆಯರಿಗಾಗಿ ಕೆನರಾ ಏಂಜಲ್ ಉಳಿತಾಯ ಖಾತೆ ಲಭ್ಯವಿದ್ದು, ಕೇವಲ ೫,೦೦೦ ರೂ. ಕನಿಷ್ಠ ಠೇವಣಿಯೊಂದಿಗೆ ಖಾತೆ ತೆರೆಯಬಹುದು. ಈ ಖಾತೆದಾರರು ಕ್ಯಾನ್ಸರ್ ಚಿಕಿತ್ಸೆಗೆ ಒಳಪಟ್ಟರೆ ಬ್ಯಾಂಕಿನಿAದ ೩ ಲಕ್ಷ ರೂ.ವರೆಗೆ ಉಚಿತ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದು ಮಾಹಿತಿ ನೀಡಿದರು.
ರೂಪಾಂತರ ಮಹಿಳಾ ಸಶಕ್ತಿಕರಣ ಸಮುದಾಯ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕಿ ಹಾಗೂ ಮುದ್ದೇನಹಳ್ಳಿ ಗ್ರಾ.ಪಂ. ಸಂಜೀವಿನಿ ಒಕ್ಕೂಟದ ಮಾಜಿ ಅಧ್ಯಕ್ಷೆ ರೂಪಾ ಮಾತನಾಡಿ, ತಮ್ಮ ಸಂಸ್ಥೆಯು ಬಾಣಂತಿಯರು ಹಾಗೂ ಮಕ್ಕಳಿಗೆ ಉಚಿತ ಆಂಬುಲೆನ್ಸ್ ಮತ್ತು ಆಸ್ಪತ್ರೆ ಸೌಲಭ್ಯ ಸೇರಿದಂತೆ ಹಲವು ಸಮಾಜಮುಖಿ ಯೋಜನೆಗಳನ್ನು ರೂಪಿಸಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದರು.
ತುಮಕೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯಕ್ರಮ ವ್ಯವಸ್ಥಾಪಕಿ ರಂಜಿತಾ ಅವರು ಇಲಾಖೆಯ ಉದ್ಯೋಗಿನಿ, ಭಾಗ್ಯಲಕ್ಷಿ÷್ಮ, ಸುಕನ್ಯಾ ಸಮೃದ್ಧಿ ಯೋಜನೆ ಹಾಗೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ಕಾನೂನು ಅರಿವು ಕುರಿತು ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ಅಕ್ಷಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಭಾರತಿ, ಕಾರ್ಯದರ್ಶಿ ಕೋಮಲ, ಖಜಾಂಚಿ ಜಯಮ್ಮ, ಎಂಬಿಕೆ ತೋಯಜಾಕ್ಷಮ್ಮ, ಎಲ್.ಸಿ.ಆರ್.ಪಿ.ಗಳಾದ ಕಲ್ಪನಾ, ಜಯಶೀಲ, ಕೃಷಿ ಸಖಿ ಚೈತ್ರಾ ಎಚ್.ಎಚ್., ಪಶು ಸಖಿ ಆಶಾ ಜಿ., ಸಿಆರ್‌ಪಿ ಆಶಾ ಕೆ., ಅಂಗನವಾಡಿ ಕಾರ್ಯಕರ್ತೆ ನಾಗಸುಂದರ, ಆಶಾ ಕಾರ್ಯಕರ್ತೆಯರಾದ ವಿಶಾಲಾಕ್ಷಿ, ಹೇಮಾವತಿ ಹಾಗೂ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
(Visited 1 times, 1 visits today)



