ತುಮಕೂರು: ದಿನ ನಿತ್ಯ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳುವ ಸಾವಿರಾರು ಉದ್ಯೋಗಿ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿರುವ ರೈಲುಗಳು ನಮ್ಮ ಜೀವನಾಡಿಗಳಾಗಿವೆ, ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ ಎಂದು ವೇದಿಕೆ ಅಧ್ಯಕ್ಷ ಕರಣಂ ರಮೇಶ್ ತಿಳಿಸಿದರು.
ತುಮಕೂರು-ಬೆಂಗಳೂರು ಮೆಮು ರೈಲು ಆರಂಭದ ೧೩ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಕೇವಲ ಉದ್ಯೋಗಿ ಪ್ರಯಾಣಿಕರಿಗೆ ಸರಿಯಾದ ಸಮಯಕ್ಕೆ ಕಚೇರಿ ತಲುಪಲು ರೈಲುಗಳು ಸುಲಭದ ಸಂಚಾರ ವ್ಯವಸ್ಥೆಯಾಗಿವೆ. ಅಲ್ಲದೆ, ಬಡ ಮತ್ತು ಮಧ್ಯಮವರ್ಗದ ಜನಸಾಮಾನ್ಯರ ಸಂಚಾರಕ್ಕೆ ರೈಲುಗಳು ತುಂಬಾ ಸಹಕಾರಿಯಾಗಿವೆ ಎಂದರು.
ವೇದಿಕೆ ಕಾರ್ಯದರ್ಶಿ ಸಿ. ನಾಗರಾಜ್ ಮಾತನಾಡಿ, ನಮ್ಮ ಸಂಸದರಾದ ವಿ. ಸೋಮಣ್ಣನವರು ರೈಲ್ವೇ ರಾಜ್ಯ ಸಚಿವರಾದ ಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ದೊರೆತಿದೆ. ಅದರಲ್ಲೂ ವಿಶೇಷವಾಗಿ ತುಮಕೂರು ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಳಸೇತುವೆ, ಮೇಲ್ಸೇತುವೆಗಳು ನಿರ್ಮಾಣವಾಗುತ್ತಿವೆ. ಇದರಿಂದ ಜನಸಾಮಾನ್ಯರ ಸುಗಮ ಓಡಾಟಕ್ಕೆ ಅನುಕೂಲವಾಗಿವೆ. ತುಮಕೂರು ರೈಲು ನಿಲ್ದಾಣ, ಅತ್ಯಾಧುನಿಕವಾಗಿ ಮರು ನಿರ್ಮಾಣಗೊಳ್ಳಲಿದೆ ಎಂದರಲ್ಲದೆ, ತುಮಕೂರಿನಿಂದ ಅರಸೀಕೆರೆ ಕಡೆಗೆ ಮತ್ತು ಬೆಂಗಳೂರು ಕಡೆಗೆ ಇನ್ನೂ ಹೆಚ್ಚಿನ ಮೆಮು ರೈಲುಗಳ ಸಂಚಾರದ ಅಗತ್ಯವಿದೆ. ಇದನ್ನು ಸಚಿವರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದರು.
ಖಜಾAಚಿ ಆರ್. ಬಾಲಾಜಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆರ್‌ಪಿಎಫ್ ಅಧಿಕಾರಿಗಳಾದ ಅಂಬರೀಶ್, ವಿಕ್ರಂ ಮತ್ತು ಸಿಬ್ಬಂದಿ ರೈಲ್ವೇ ಪೋಲೀಸ್ ಸಬ್‌ಇನ್ಸ್ಪೆಕ್ಟರ್ ಆನಂದ್ ಮತ್ತು ಸಿಬ್ಬಂದಿ, ಸ್ಟೇಷನ್ ಅಧಿಕಾರಿಗಳು ಮತ್ತು ಸಿಬ್ಬಂದಿ, ರೋಟರಿ ಅಧ್ಯಕ್ಷೆ ಕೆ.ಆರ್. ಭಾಗ್ಯಲಕ್ಷಿö್ಮ ನಾಗರಾಜ್, ವೇದಿಕೆ ಉಪಾಧ್ಯಕ್ಷರಾದ ಮಾಧವಮೂರ್ತಿ ಗುಡಿಬಂಡೆ, ಜಂಟಿ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕರಾದ ಮೋಹನ್ ಕುಮಾರ್, ಚಕ್ರವರ್ತಿ, ರಾಜಶೇಖರ್, ಗುರುಪ್ರಸಾದ್, ದೀಪಕ್, ವೀರಪ್ಪ, ಭರತ್ ಕುಮಾರ್, ಗುರುಪ್ರಸಾದ್ ಭಾಗವಹಿಸಿದ್ದರು.

(Visited 1 times, 1 visits today)