BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
news

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

ಕನ್ನಡ ಭಾಷೆಯನ್ನು ಕೀಳಾಗಿ ಕಾಣುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ
By News Desk BenkiyabaleUpdated:August 05, 2026 4:54 pm
filter: 0; fileterIntensity: 0.0; filterMask: 0; captureOrientation: 0; multi-frame: 1; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 32;

ತುಮಕೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಹಾಗಾಗಿ ಕನ್ನಡ ಭಾಷೆಯನ್ನು ಕೀಳಾಗಿ ಕಾಣುವ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು. ಕನ್ನಡ ಶಾಲೆಗಳನ್ನು ಮುಚ್ಚದೆ, ಅವುಗಳಿಗೆ ಮೂಲಭೂತ ಸೌಕರ್ಯ ಒದಗಿಸಿ,ಪ್ರತಿ ತರಗತಿಗೆ ಒಬ್ಬರಂತೆ ಶಿಕ್ಷಕರ ನೇಮಕ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ರಸಾಯನಶಾಸ್ತç ಶಿಕ್ಷಕರೊಬ್ಬರು ಬೀದರ್‌ನಿಂದ ಬೆಂಗಳೂರುವರೆಗೆ ಏಕಾಂಗಿಯಾಗಿ ಪಾದಯಾತ್ರೆ ಕೈಗೊಂಡಿದ್ದು, ಇಂದು ತುಮಕೂರಿಗೆ ಆಗಮಿಸಿದ್ದರು.
ರೂಪೇಶ್ ಪುತ್ತೂರು ಎಂಬ ಹೆಸರಿನ ರಸಾಯನಶಾಸ್ತç ಉಪನ್ಯಾಸಕರು ಜುಲೈ ೧೧ ರಿಂದ ಪಾದೆಯಾತ್ರೆ ಕೈಗೊಂಡಿದ್ದು, ಬುಧವಾರ ಬೆಳಗ್ಗೆ ೧೧ ಗಂಟೆಗೆ ತುಮಕೂರು ನಗರಕ್ಕೆ ಆಗಮಿಸಿದರು. ಈ ವೇಳೆ ಅವರನ್ನು ನಗರಕ್ಕೆ ಬರಮಾಡಿಕೊಂಡ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಧನಿಯಕುಮಾರ್ ಮತ್ತು ತಂಡ, ಅವರನ್ನು ಸಿದ್ದಗಂಗಾ ಮಠಕ್ಕೆ ಕರೆದುಕೊಂಡು ಹೋಗಿ, ಹಿರಿಯ ಶ್ರೀಗಳಾದ ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಗದ್ದುಗೆ ಪೂಜೆ ಸಲ್ಲಿಸಿದ ನಂತರ,ಅವರನ್ನು ಅಭಿನಂದಿಸಿ ಬೀಳ್ಕೋಟ್ಟರು.
ಈ ವೇಳೆ ಮಾತನಾಡಿದ ಭಾಷಾ ಸೌಹಾರ್ಧ ಪಾದಯಾತ್ರಿ ರೂಪೇಶ ಪುತ್ತೂರು, ಭಾರತ ಕರ್ನಾಟಕದಂತಹ ಹಲವಾರು ರಾಜ್ಯಗಳು ಸೇರಿದ ಒಕ್ಕೂಟ ವ್ಯವಸ್ಥೆ.ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ.ಈ ದೇಶಕ್ಕೆ ರಾಷ್ಟç ಭಾಷೆ ಎಂಬುದಿಲ್ಲ.ಭಾಷೆತ ಆಧಾರದಲ್ಲಿ ರಾಜ್ಯಗಳು ವಿಂಗಡನೆಯಾದ ಮೇಲೆ ಒಂದು ಭಾಷೆಯನ್ನು ವೈಭವೀಕರಿಸಿ, ಉಳಿದ ಭಾಷೆಯನ್ನು ಕೀಳಾಗಿ ಕಾಣುವುದು ದೇಶದ್ರೋಹಕ್ಕೆ ಸಮಾನ.ಭಾರತ ದೇಶಕ್ಕೆ ರಾಷ್ಟçದ್ವಜ, ರಾಷ್ಟçಗೀತೆ ಎಷ್ಟು ಮುಖ್ಯವೋ, ಅದೇ ರೀತಿ ಕರ್ನಾಟಕಕ್ಕೆ ಕನ್ನಡ ಭಾಷೆಯೂ ಆಷ್ಟೇ ಮುಖ್ಯ.ಹಾಗಾಗಿ ಕನ್ನಡ ಭಾಷೆ, ನೆಲ,ಜಲವನ್ನು ಕೀಳಾಗಿ ಕಾಣುವವರ ವಿರುದ್ದ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಆಶಯವಾಗಿದೆ ಎಂದರು.
ಕುವೆAಪು ಅವರು ಹೇಳಿರುವಂತೆ “ಸತ್ತಂತೆ ಇಹರನು ಬಡಿದೆಬ್ಬಿಸು,” ಕೆಲಸವನ್ನು ನನ್ನ ಕೈಲಾದ ಮಟ್ಟಿಗೆ ಮಾಡುತ್ತಿದ್ದೇನೆ. ಕೇವಲ ಉದ್ಯೋಗ ಒಂದನ್ನೇ ಗಮನದಲ್ಲಿಟ್ಟುಕೊಂಡು ಕನ್ನಡ ಭಾಷೆಯನ್ನು ಇಂದಿನ ಯುವಪೀಳಿಗೆ ಕಾಣುತ್ತಿದ್ದಾರೆ.ಓರ್ವ ವ್ಯಕ್ತಿಗೆ ಮಾತೃಭಾಷೆಯ ಸಂಪೂರ್ಣ ಅರಿವಿದ್ದರೆ ಮಾತ್ರ.ಆತ ಇತರೆ ಭಾಷೆಗಳನ್ನು ಸುಲಭವಾಗಿ ಅರ್ಥೈಸಬಲ್ಲ. ಮಾತನಾಡಬಲ್ಲ. ಹಾಗಾಗಿಯೇ ಮಕ್ಕಳಿಗೆ ಮಾತೃ ಭಾಷೆಯಲ್ಲಿ ಶಿಕ್ಷಣ ದೊರೆಯಬೇಕೆಂಬುದು ಹಿರಿಯರ ಮಾತಾಗಿತ್ತು.ಆದರೆ ಖಾಸಗಿ ಶಾಲೆಗಳ ಹಾವಳಿಗೆ ಸಿಲುಕಿ ಕನ್ನಡ ಶಾಲೆಗಳು ಮುಚ್ಚುವುದರ ಜೊತೆಗೆ, ಕನ್ನಡ ಭಾಷೆಯೂ ಕ್ಷೀಣಿಸುತ್ತಿದೆ. ಇದರ ಬಗ್ಗೆ ಸರಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಪಾದಯಾತ್ರೆಯನ್ನು ಹಮ್ಮಿಕೊಂಡಿರುವುದಾಗಿ ರೂಪೇಶ್ ಪುತ್ತೂರು ನುಡಿದರು.
ಕರ್ನಾಟಕದ ಗಡಿಭಾಗಗಳಲ್ಲಿ ಕನ್ನಡ ಶಾಲೆಗಳ ಸ್ಥಿತಿ ಚಿಂತಾಜನಕವಾಗಿದೆ.ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಜೊತೆಗೆ, ಶಿಕ್ಷಕರು ಇಲ್ಲದೆ ಮಕ್ಕಳಿಗೆ ಸರಿಯಾದ ಪಾಠ, ಪ್ರವಚನಗಳಿಲ್ಲ.ಹೀಗಾಗಿ ಅನಿವಾರ್ಯವಾಗಿ ಮಕ್ಕಳು ಬೇರೆ ಮಾಧ್ಯಮದ ಶಾಲೆಗೆ ಹೋಗಬೇಕಾಗಿದೆ.ಸರಕಾರ ೧೦ ಕಿ.ಮಿ. ಒಂದು ಶಾಲೆ ನಿಗದಿ ಪಡಿಸಲು ಹೊರಟಿದೆ.ಇದು ಜಾರಿಗೆ ಬಂದರೆ ಹೆಣ್ಣು ಮಕ್ಕಳು ಶಾಲೆಯಿಂದ ಹೊರಗೆ ಉಳಿಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ.ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಯಾವ ತಂದೆ ಸಹ ತನ್ನ ಮಗಳನ್ನು ೧೦ ಕಿ.ಮಿ.ದೂರದ ಶಾಲೆಗೆ ಏಕಾಂಗಿಯಾಗಿ ಕಳುಹಿಸಲು ಸಾಧ್ಯ ಎಂದು ಪ್ರಶ್ನಿಸಿದರು.
ಜುಲೈ ೧೧ಕ್ಕೆ ಬೀದರ್‌ನಿಂದ ಹೊರಟು, ಆಗಸ್ಟ್ ೦೯ ರಂದು ಬೆಂಗಳೂರು ತಲುಪುವ ಗುರಿ ಹೊಂದಿದ್ದೇನೆ.ಒAದು ದಿನಕ್ಕೆ ಕನಿಷ್ಠ ಎಂದರೆ ೧೪ ಕಿ.ಮಿ., ಗರಿಷ್ಠ ಎಂದರೆ ೫೪ ಕಿ.ಮಿ. ನಡೆದ ಉದಾಹರಣೆ ಇದೆ.ಪಾದಯಾತ್ರೆಯಲ್ಲಿ ಸಾಗುವ ಮಾರ್ಗಮಧ್ಯೆ, ರೈತರು,ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಕನ್ನಡ ಭಾಷೆಯ ಪ್ರಾಮುಖ್ಯತೆ ಕುರಿತು ಮಾತನಾಡುತ್ತಾ, ಅವರ ಅಭಿಪ್ರಾಯಗಳನ್ನು ಆಲಿಸುತ್ತಾ ಬಂದಿದ್ದು, ಆಗಸ್ಟ್ ೧೦ ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ,ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಾಧೀಶರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಂತ್ರಿಗಳು, ಮಾನವ ಹಕ್ಕುಗಳ ಆಯೋಗಗಳಿಗೆ ಕನ್ನಡ ಭಾಷೆಯನ್ನು ಕೀಳಾಗಿ ಕಾಣುವವರನ್ನು ಶಿಕ್ಷೆಗೆ ಗುರಿ ಪಡಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ರೂಪೇಶ ಪುತ್ತೂರು ತಿಳಿಸಿದರು.
ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಡಾ.ಧನಿಯಕುಮಾರ್ ಮಾತನಾಡಿ,ಖಾಸಗಿ ಶಾಲೆಗಳ ಆರ್ಭಟದಿಂದ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪಿವೆ.ಏಕೋಪಾಧ್ಯಾಯ ಶಾಲೆಗಳ ಸ್ಥಿತಿ ಹೇಳ ತೀರದಾಗಿದೆ.ಶಾಲೆಯ ಕಸ ಹೊಡೆಯುವುದು,ಮಕ್ಕಳಿಗೆ ಹಾಲು, ಬಿಸಿಯೂಟ,ಬಾಳೆ ಹಣ್ಣು, ಮೊಟ್ಟೆ ಕೊಡುವುದು ಇದರಲ್ಲಿ ಸಮಯ ಮುಗಿದು ಪಾಠ ಮಾಡಲು ಸಮಯವೇ ಇಲ್ಲದಾಗಿದೆ. ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ರೂಪೇಶ್ ಪುತ್ತೂರು ಅವರಂತಹ ಶಿಕ್ಷಕರ ನಿಜವಾದ ಕಾಳಜಿಯನ್ನು ಅರ್ಥ ಮಾಡಿಕೊಂಡು ಕನ್ನಡ ಭಾಷೆಗೆ ಹೆಚ್ಚಿನ ಪ್ರಾಶಸ್ತö್ಯ ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.
ಈ ವೇಳೆ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ವಿಠಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news Protest tumakur tumkur tumkur news ತುಮಕೂರು:
Previous Articleಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ
Next Article ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ
News Desk Benkiyabale

Related Posts

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm news
ತಾಜಾ ಸುದ್ಧಿಗಳು
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
Our Youtube Channel
Our Picks

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

By News Desk BenkiyabaleSeptember 19, 2026 6:07 pm

ತುಮಕೂರು: ರಾಜ್ಯ ಹೈಕೋರ್ಟ್ ನೈಸ್ ಭೂಮಿಯನ್ನುರೈತರಿಗೆ ವಾಪಸು ನೀಡಬೇಕೆಂದು ಮತ್ತುಅಕ್ರಮವಾಗಿ ಸಂಗ್ರಹಿಸುತ್ತಿರುವಟೋಲ್ ಸಂಗ್ರಹ ನಿಲ್ಲಿಸಬೇಕೆಂದು ತೀರ್ಪು ನೀಡಿದ್ದರೂ ಅದನ್ನು ಜಾರಿಗೆ…

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.