ಹುಳಿಯಾರು: ಹುಳಿಯಾರು ಹೋಬಳಿಯ ನಂದಿಹಳ್ಳಿ ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮೀಣ ಭಾಗದ ಜನರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ನಂದಿಹಳ್ಳಿಯಲ್ಲಿ ಸೇತುವೆ ನಿರ್ಮಾಣದಿಂದ ಈ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ಜನರಿಗೆ ಹಾಗೂ ರೈತರಿಗೆ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಸೌಕರ್ಯ ಒದಗಿಸುವ ಸಂಕಲ್ಪ ನಮ್ಮದಾಗಿದೆ. ಜನರ ಬಹುದಿನಗಳ ಬೇಡಿಕೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ಕಾಮಗಾರಿಯು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಿಗದಿತ ಸಮಯದೊಳಗೆ ಪೂರ್ಣಗೊಳ್ಳಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಮ್ಮಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ್, ಗುತ್ತಿಗೆದಾರ ರೇಣುಕಯ್ಯ, ಜಿಪಂ ಮಾಜಿ ಸದಸ್ಯೆ ಮಂಜಮ್ಮ, ಗ್ರಾಪಂ ಮಾಜಿ ಅಧ್ಯಕ್ಷ ದೇವರಾಜು ಸೇರಿದಂತೆ ಗ್ರಾಮದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
(Visited 1 times, 1 visits today)





