ತುಮಕೂರು: ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಕನಿಷ್ಠ ೧೦ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ತ್ರೆಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳ ಮೇಲೆ ನಿಯಮಿತವಾಗಿ ದಾಳಿ ನಡೆಸಿ ದಂಡ ವಿಧಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಕಚೇರಿಗಳ ಮುಂದೆ ತಂಬಾಕು ಮುಕ್ತ ಪ್ರದೇಶಗಳನ್ನು ಘೋಷಿಸಿ, “ನಶೆ ಮುಕ್ತ ಗ್ರಾಮ” ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾರ್ವಜನಿಕ ಸ್ಥಳ ಹಾಗೂ ಸಿನಿಮಾ ಮಂದಿರಗಳಲ್ಲಿ ಧೂಮಪಾನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣ ಮಾಲೀಕರಿಗೆ ನೋಟೀಸ್ ನೀಡುವಂತೆ ಸೂಚಿಸಿದರು.
ತಂಬಾಕು ನಿಯಂತ್ರಣ ಕುರಿತು ಶಾಲಾ ಮಕ್ಕಳ ಮೂಲಕ ಜನ-ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಗತ್ಯವಿದ್ದಲ್ಲಿ ಪೊಲೀಸ್, ತಹಶೀಲ್ದಾರ್ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದು ಅಭಿಯಾನಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮಗಳ ಪ್ರಗತಿ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ವಿವಿಧ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರವಾಗಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್, ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಡಾ|| ಮೋಹನ್, ಶಿಕ್ಷಣ ಇಲಾಖೆ, ಅಬಕಾರಿ, ಪೊಲೀಸ್ ಇಲಾಖೆ, ಅಚರ್ಡ್ ಮದ್ಯವರ್ಜನ ಸಂಸ್ಥೆಯ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)



