BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

ಮುಜರಾಯಿ ಜಾಗದ ವಾಣಿಜ್ಯ ಮಳಿಗೆ ಹಸ್ತಾಂತರಕ್ಕೆ ತಹಶೀಲ್ದಾರ್ ನೋಟಿಸ್
By News Desk BenkiyabaleUpdated:August 08, 2026 4:30 pm

ಹುಳಿಯಾರು: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಜಾಗದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು ತಾಲೂಕು ಕಚೇರಿಗೆ (ಮುಜರಾಯಿ ಇಲಾಖೆಗೆ) ಹಸ್ತಾಂತರಿಸುವAತೆ ತಹಶೀಲ್ದಾರ್ ಅವರು ಪಟ್ಟಣ ಪಂಚಾಯಿತಿಗೆ ಪತ್ರ ಬರೆದಿದ್ದು, ಈ ವಿಚಾರವಾಗಿ ಪಟ್ಟಣ ಪಂಚಾಯಿತಿ ತುರ್ತು ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ.
ತಹಶೀಲ್ದಾರ್ ಪತ್ರದಲ್ಲೇನಿದೆ?: “ಹುಳಿಯಾರಿನ ’ಸಿ’ ಗ್ರೂಪ್ ಮುಜರಾಯಿ ದೇವಾಲಯವಾದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಹಿಂಭಾಗದ ಜಾಗದಲ್ಲಿ ಪಟ್ಟಣ ಪಂಚಾಯಿತಿಯಿAದ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡಲಾಗಿದೆ. ಈ ಜಾಗವು ದೇವಾಲಯಕ್ಕೆ ಸೇರಿದ್ದಾಗಿದ್ದು, ಅನಧಿಕೃತವಾಗಿ ಬಳಸಿಕೊಳ್ಳಲಾಗಿದೆ. ಆದ್ದರಿಂದ ತಕ್ಷಣವೇ ಈ ಮಳಿಗೆಗಳನ್ನು ಮುಜರಾಯಿ ಇಲಾಖೆಯ ವಶಕ್ಕೆ ಹಸ್ತಾಂತರಿಸಬೇಕು. ತಪ್ಪಿದ್ದಲ್ಲಿ ಕಾನೂನು ಹಾಗೂ ಶಿಸ್ತುಕ್ರಮ ಜರುಗಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಹಶೀಲ್ದಾರ್ ಅವರು ಪಟ್ಟಣ ಪಂಚಾಯ್ತಿಗೆ ಬರೆದ ಪತ್ರದಲ್ಲಿ ಎಚ್ಚರಿಸಿದ್ದಾರೆ.
ತಹಶೀಲ್ದಾರ್‌ಗೆ ಪಟ್ಟಣ ಪಂಚಾಯಿತಿ ಪ್ರತ್ಯುತ್ತರ: ತಹಶೀಲ್ದಾರ್ ಅವರ ನೋಟಿಸ್‌ಗೆ ಈಗಾಗಲೇ ಮುಖ್ಯಾಧಿಕಾರಿ ಮಂಜುನಾಥ್ ಉತ್ತರ ನೀಡಲಾಗಿದ್ದು ಈ ಪತ್ರದಲ್ಲಿ ಸದರಿ ವಾಣಿಜ್ಯ ಮಳಿಗೆಗಳನ್ನು ಇತ್ತೀಚೆಗೆ ಕಟ್ಟಿದ್ದಲ್ಲ. ಇದು ಹಿಂದಿನ ಮಂಡಲ ಪಂಚಾಯಿತಿ ಅವಧಿಯಲ್ಲೇ ನಿರ್ಮಾಣಗೊಂಡಿದೆ. ದಿಶಾಂಕ್ ಆಪ್ ಪ್ರಕಾರ ಈ ಪ್ರದೇಶವು ವಸಾಹತು ಪ್ರದೇಶವಾಗಿದೆ. ಹಾಗಾಗಿ ಮುಜರಾಯಿ ಇಲಾಖೆಯು ಈ ಜಾಗ ತಮಗೆ ಸೇರಿದ್ದು ಎಂದು ಪ್ರತಿಪಾದಿಸುತ್ತಿರುವುದರಿಂದ, ಸಂಬAಧಪಟ್ಟ ದಾಖಲೆಗಳನ್ನು ನೀಡಿದರೆ ಸಕ್ಷಮ ಪ್ರಾಧಿಕಾರಕ್ಕೆ ಕಳುಹಿಸಿ ಮೇಲಧಿಕಾರಿಗಳು ನೀಡುವ ನಿರ್ದೇಶನ ಹಾಗೂ ಆದೇಶದಂತೆ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬರೆಯಲಾಗಿದೆ.
ಪಟ್ಟಣ ಪಂಚಾಯಿತಿ ಸದಸ್ಯ ಎಸ್‌ಆರ್‌ಎಸ್ ದಯಾನಂದ್ ರಂಗನಾಥಸ್ವಾಮಿ ಹಿಂದಿನ ಮಂಡಲ ಪಂಚಾಯಿತಿ ಕಾಲದಿಂದಲೂ ಈ ಜಾಗವನ್ನು ಪಂಚಾಯಿತಿಯೇ ನಿರ್ಮಿಸಿ, ನಿರ್ವಹಿಸಿಕೊಂಡು ಬಂದಿದೆ. ಇದು ಪಟ್ಟಣ ಪಂಚಾಯಿತಿಗೆ ಸೇರಿದ ಆಸ್ತಿಯಾಗಿದ್ದು, ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಯ ಜಾಗದಲ್ಲಿ ಇದನ್ನು ನಿರ್ಮಿಸಿಲ್ಲ. ಹಾಗಾಗಿ ಯಾವುದೇ ಕಾರಣಕ್ಕೂ ಪಟ್ಟಣ ಪಂಚಾಯಿತಿ ಆಸ್ತಿಯನ್ನು ಮುಜರಾಯಿ ಇಲಾಖೆಗೆ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರಲ್ಲದೆ ದೇವಾಲಯದ ಮುಂಭಾಗದಲ್ಲಿದ್ದ ‘ತೇರು ಬೀದಿ’ಯನ್ನು ಕೆಲವರು ಅಕ್ರಮವಾಗಿ ಆಕ್ರಮಿಸಿಕೊಂಡು ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಆ ಜಾಗವನ್ನು ತೆರವು ಮಾಡಿ ದೇವಸ್ಥಾನದ ಧಾರ್ಮಿಕ ಕಾರ್ಯಗಳ ಬಳಕೆಗೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯ ಕೆ.ಎಂ.ಎಲ್. ಕಿರಣ್ ಮಾತನಾಡಿ ಮಳಿಗೆ ಇರುವ ಜಾಗದ ಬಗ್ಗೆ ಪಟ್ಟಣ ಪಂಚಾಯಿತಿಯಲ್ಲಿ ಯಾವುದೇ ಸ್ಪಷ್ಟ ದಾಖಲೆಗಳನ್ನು ಹೊಂದಿಲ್ಲ. ಒಂದು ವೇಳೆ ತಹಶೀಲ್ದಾರ್ ಬಳಿ ದಾಖಲೆಗಳಿದ್ದರೆ ನಿಯಮಾನುಸಾರ ಅಳತೆ ಮಾಡಿಸಿ ದೇವಾಲಯದ ಹೆಸರಿಗೆ ಖಾತೆ ಮಾಡಿಕೊಳ್ಳಲಿ. ನಮಗೇನೂ ಅಭ್ಯಂತರವಿಲ್ಲ, ಜೊತೆಗೆ ಸುತ್ತಮುತ್ತಲ ಜಾಗದಲ್ಲಿ ಅಕ್ರಮವಾಗಿ ಕೆಲವರಿದ್ದು ತೆರವುಗೊಳಿ ಹೊಸ ಬಸ್ ನಿಲ್ದಾಣ, ಅಗ್ನಿಶಾಮಕ ವಾಹನ, ಸೇರಿದಂತೆ ಇತರ ಸಾರ್ವಜನಿಕ ಕಟ್ಟಡಗಳ ಅಭಿವೃದ್ಧಿಗೆ ಜಾಗ ಕೊಡಸಲಿ ಎಂದು ಮನವಿ ಮಾಡಿದರು.
ಸಭೆಯ ಅಧ್ಯಕ್ಷತೆಯನ್ನು ಪಂಚಾಯ್ತಿ ಅಧ್ಯಕ್ಷರಾದ ಪ್ರೀತಿ ರಾಘವೇಂದ್ರ, ಮುಖ್ಯಾಧಿಕಾರಿ ಮಂಜುನಾಥ್, ಕಂದಾಯ ಅಧಿಕಾರಿ ಶೃತಿ, ಸಿಬ್ಬಂದಿ ರೇಖಾ, ಪಪಂ ಸದಸ್ಯರುಗಳಾದ ಶೃತಿ, ರತ್ನಮ್ಮ, ರಾಜುಬಡಗಿ, ಜುಬೇರ್, ಸಿದ್ದಿಕ್, ಹೇಮಂತ್, ಮಂಜನಾಯ್ಕ ಮತ್ತಿತರರು ಇದ್ದರು.

(Visited 1 times, 1 visits today)
Chikkanayakanahalli kannada news karnataka local news tumakur tumkur tumkur news ಚಿಕ್ಕನಾಯಕನಹಳ್ಳಿ ತುಮಕೂರು: ಹುಳಿಯಾರು
Previous Articleಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
Next Article ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
News Desk Benkiyabale

Related Posts

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm news
ತಾಜಾ ಸುದ್ಧಿಗಳು
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
Our Youtube Channel
Our Picks

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

By News Desk BenkiyabaleAugust 08, 2026 5:11 pm

ತುಮಕೂರು: ಬಹುಜನ ಸಮಾಜ ಪಕ್ಷದ ರಾಯಚೂರು ಜಿಲ್ಲಾ ಉಸ್ತುವಾರಿ ಭೂಮಾನಂದ್ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು.…

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.