BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ
  • ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ
  • ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ
  • ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ
  • ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ
  • ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ
  • ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ
  • ಹುಳಿಯಾರು ಪ.ಪಂ ಕಸ ವಿಲೇವಾರಿ ಘಟಕಕ್ಕೆ ಭೂಮಿ ಮಂಜೂರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

ಗೆಟ್‌ಔಟ್ ಎಂದ ಗುಬ್ಬಿ ತಹಸೀಲ್ದಾರ್ ವಿರುದ್ಧ ಅಟ್ರಾಸಿಟಿ ಕೇಸ್: ಎನ್.ಕುಮಾರ್
By News Desk BenkiyabaleUpdated:August 10, 2026 5:46 pm

ತುಮಕೂರು: ಗುಬ್ಬಿ ತಾಲ್ಲೂಕು, ಚೇಳೂರು ಹೋಬಳಿಯ ಸಂಗನಹಳ್ಳಿ ಗ್ರಾಮದಲ್ಲಿ ಆಧಾರ್ ಕಾರ್ಡ್ ದುರುಪಯೋಗ ಪಡಿಸಿಕೊಂಡು, ನಕಲಿ ದಾಖಲೆಗಳ ಮೂಲಕ ‘ಸಂಧ್ಯಾಸುರಕ್ಷಾ’ ಹಾಗೂ ವೃದ್ಧಾಪ್ಯ ವೇತನ ಪಡೆದು ಸರ್ಕಾರದ ಖಜಾನೆಗೆ ಮೋಸ ಮಾಡಲಾಗಿರುವ ಶಾಂತಮ್ಮ ಮತ್ತು ಶಶಿಧರ ಎಂಬುವವರ ವಿರುದ್ಧ ಕಾನೂನು ರೀತ್ಯಾ ಕ್ರಮಕೈಗೊಳ್ಳುವುದು ಜೊತೆಗೆ ಗುಬ್ಬಿ ತಾಲ್ಲೂಕು ತಹಶೀಲ್ದಾರ್ ರವರ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ವಿವಿಧ ದಲಿತಪರ ಮುಖಂಡರು ಮತ್ತು ಮಾನವ ಹಕ್ಕುಗಳ ಸಂಘಟನೆಯ ಪದಾಧಿಕಾರಿಗಳು ಗಂಭೀರ ಆರೋಪ ಮಾಡಿ ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಹ ಸಲ್ಲಿಸಲಾಗಿದೆ.
ಮನವಿ ಪತ್ರ ಸಲ್ಲಿಕೆಯ ವೇಳೆ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್. ಕೆ. ನಿಧಕುಮಾರ್ ಮಾತನಾಡುತ್ತಾ ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ವ್ಯಾಪ್ತಿಯ ಸಂಗನಹಳ್ಳಿ ಗ್ರಾಮದ ಶಶಿಧರ್ ಬಿನ್. ಲೇಟ್. ಚಿಕ್ಕಗಂಗಯ್ಯ ಎಂಬುವವರು ಆಧಾರ್ ತಿದ್ದುಪಡಿಯನ್ನು ೦೧-೦೧-೧೯೭೦ ಕ್ಕೆ ಬದಲಾಗಿ ೦೧-೦೧-೧೯೫೨ಕ್ಕೆ ಬದಲಾವಣೆ ಮಾಡಿ ಸುಮಾರು ೧೮ ವರುಷಗಳ ಕಾಲದ ವಯಸ್ಸಿನ ವಯೋಮಿತಿಯನ್ನು ತಿದ್ದುಪಡಿ ಮಾಡಲು ನಕಲಿ ದಾಖಲೆ ಸೃಷ್ಠಿಸಿ ಸಂಧ್ಯಾ ಸುರಕ್ಷಾ ಯೋಜನೆಯ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಜೊತೆಗೆ ಇವರ ಧರ್ಮಪತ್ನಿ ಶಾಂತಮ್ಮ ಕೋಂ. ಶಶಿಧರ ಇವರ ಆಧಾರ್ ಕಾರ್ಡ್ ನ್ನು ೦೧-೦೧-೧೯೬೬ ರ ಇಸವಿಯಿಂದ ೦೧-೦೧-೧೯೫೯ಕ್ಕೆ ಬದಲಾವಣೆ ಮಾಡಿ ಸುಮಾರು ೭ ವರುಷಗಳ ಕಾಲದ ವಯಸ್ಸಿನ ವಯೋಮಿತಿಯನ್ನು ತಿದ್ದುಪಡಿ ಮಾಡಿಕೊಂಡಿದ್ದು ಈ ಎರಡೂ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಹಲವಾರು ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ಅಕ್ರಮವಾಗಿ ತಿದ್ದುಪಡಿ ಮಾಡಿಕೊಂಡು ಸರ್ಕಾರದ ಹಣ ಅಂದರೆ ಸಂಧ್ಯಾ ಸುರಕ್ಷಾ ಯೋಜನೆಯ ಹಣವನ್ನು ದುರ್ಬಳಕೆ ಮಾಡಿಕೊಳ್ಳಲು ಮಾಡಿಸಿಕೊಂಡಿರುತ್ತಾರೆ ಎಂದು ಆರೋಪಿಸಿದ್ದಾರೆ ಅಲ್ಲದೇ ಇವರಿಬ್ಬರೂ ಸಹ ದಂಪತಿಗಳಾಗಿದ್ದು, ಇಬ್ಬರೂ ವಿದ್ಯಾವಂತರೇ, ಸಂಧ್ಯಾ ಸುರಕ್ಷಾ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುವುದರ ಸಲುವಾಗಿ ವಯಸ್ಸಿನ ಅವಧಿಗೂ ಮುನ್ನವೇ ಸುಳ್ಳು ದಾಖಲೆಗಳನ್ನು ಸೃಷ್ಠಿಸಿಕೊಂಡು ಸರ್ಕಾರಕ್ಕೆ ಮೋಸ ಮತ್ತು ವಂಚನೆ ಮಾಡಿ ಹಣವನ್ನು ಅನ್ಯ ಮಾರ್ಗದಲ್ಲಿ ಪಡೆದಿರುತ್ತಾರೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ರಾಜ್ಯ ಮಾದಿಗ ಸಮಾಜದ ಜಿಲ್ಲಾಧ್ಯಕ್ಷರಾದ ರಾಜೇಶ್ ಹೆಚ್.ಬಿ. ಮಾತನಾಡಿ ನಮ್ಮ ಮನವಿ ಪತ್ರದಲ್ಲಿ ಜಾತಿ ನಿಂದನೆ ಹಾಗೂ ಕರ್ತವ್ಯ ಲೋಪ ಎಸಗಿರುವ ತಹಸೀಲ್ದಾರ್ ಅವರನ್ನು ತಕ್ಷಣವೇ ಅಮಾನತುಗೊಳಿಸಿ ಮತ್ತು ಸರ್ಕಾರಕ್ಕೆ ವಂಚಿಸಿರುವ ಈ ದಂಪತಿಗಳ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಲು ಒತ್ತಾಯ ಮಾಡುತ್ತಿದ್ದು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ನ್ಯಾಯ ಸಿಗದಿದ್ದರೆ, ಕಂದಾಯ ಇಲಾಖೆಯ ಆಯುಕ್ತರ ಕಚೇರಿ ಸೇರಿದಂತೆ ವಿಧಾನಸೌಧದವರೆಗೆ ಹೋರಾಟ ನಡೆಸಲು ಸಹ ನಾವು ಸಿದ್ಧರಾಗಿದ್ದೇವೆ ನಮಗೆ ನ್ಯಾಯ ಸಿಗುವವರೆವಿಗೂ ಹೋರಾಟ ಮತ್ತು ಸತ್ಯಾಗ್ರಹ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಕುಮಾರ್, ಡಾ. ಬಿ.ಆರ್. ಅಂಬೇಡ್ಕರ್ ಸ್ವಾಭಿಮಾನಿ ಜನಸೇನೆಯ ಸಂಸ್ಥಾಪಕರಾದ ಎನ್. ಕುಮಾರ್, ದಲಿತ ಮುಖಂಡರುಗಳಾದ ರಾಜೇಶ್ ಹೆಚ್. ಬಿ, ರಂಗಸ್ವಾಮಿ, ಇಶ್ರತ್ ಸುಲ್ತಾನ, ಡಿ.ಕೆ. ಇಂದ್ರಕುಮಾರ್, ಗುರುಪ್ರಸಾದ್ ಟಿ.ಆರ್, ಮನೋಜ್ ಎ.ಎಲ್, ಕೆ.ಸಿ.ಗೋಪಾಲ್ ಕೆಸರಮಡು, ಗಿರೀಶ್ ಜಿ.ಆರ್, ಸೋಮಣ್ಣ, ಪೋಸ್ಟ್ ಮಾಸ್ಟರ್ ಮುನಿಯಪ್ಪ, ನಾಗರಾಜ್, ಅಸೀನಾ, ಕಾವ್ಯ, ಗುಲ್ಜಾರ್ ಖಾನ್, ನಾಜೀಮಾ, ಸೀಮಾ, ನೂರುನ್ನೀಸಾ, ಖುತೇಜ, ಶಾಬಾನ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

(Visited 1 times, 1 visits today)
crime Gubbi kannada news karnataka local news Protest tumakur tumkur ಜಿಲ್ಲಾಡಳಿತ
Previous Articleತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ
Next Article ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
News Desk Benkiyabale

Related Posts

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm news

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm news
ತಾಜಾ ಸುದ್ಧಿಗಳು
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm
news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm
news

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm
news

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm
news

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm
news

ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

September 23, 2026 5:51 pm
Our Youtube Channel
Our Picks

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

By News Desk BenkiyabaleSeptember 24, 2026 6:21 pm

ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಅಕ್ಟೋಬರ್…

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.