ತುಮಕೂರು: ಕನ್ನಡ ಉಳಿಸುವ ಪ್ರಶ್ನೆ ಸವಾಲಾಗಿರುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಆದ್ಯತೆ ಕನ್ನಡದ ಉಳಿವಿಗೆ ಮುಖ್ಯವಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಕನ್ನಡ ವಿರೋಧಿ ಶಿಕ್ಷಣ ಇಲಾಖೆ, ಇಲಾಖೆಯಲ್ಲಿ ನೌಕರರಶಾಹಿ ಆಡಳಿತ ನಡೆಸುತ್ತಿರುವುದರಿಂದ ಕನ್ನಡ ಸಂಕಷ್ಟದಲ್ಲಿದೆ. ರಾಜ್ಯ ಶಿಕ್ಷಣ ನೀತಿಯನ್ನು ಸರ್ಕಾರ ಬಹಿರಂಗಪಡಿಸಿ ಚರ್ಚೆಗೆ ಅವಕಾಶ ಮಾಡಿ, ಖಚಿತವಾಗಿ ರೂಪಿಸಬೇಕು ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು.
ಕನ್ನಡ ಮಾಧ್ಯಮ ಜಾರಿಯಾಗಿ ೨೫ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಚಿಂತನ ವೇದಿಕೆ ಭಾನುವಾರ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಚಿಂತನ ಸಮಾವೇಶದಲ್ಲಿ ಆಶಯನುಡಿ ನುಡಿದ ಪ್ರೊ.ಬರಗೂರು, ರಾಜ್ಯದಲ್ಲಿ ರಾಷ್ಟಿçÃಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಶಿಕ್ಷಣ ಇಲಾಖೆಯ ನೌಕರಶಾಹಿ ರಾಷ್ಟಿçÃಯ ಶಿಕ್ಷಣ ನೀತಿಯನ್ನು ಹಿಂಬಾಗಿಲಿನಿAದ ಅನುಷ್ಠಾನಗೊಳಿಸಲು ಹೊರಟಿದೆ. ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರದೆ, ಉಪಾಯವಾಗಿ ರಾಷ್ಟಿçÃಯ ಶಿಕ್ಷಣ ನೀತಿಯನ್ನುಜಾರಿ ಮಾಡುತ್ತಿರುವುದು ಮಹಾನ್ ವಂಚನೆ ಎಂದು ಹೇಳಿದರು.
ತಾವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಂದರ್ಭದಲ್ಲಿ ಜಾರಿಗೆ ಬಂದ ೧ರಿಂದ ೧೦ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ವೃತ್ತಿ ಶಿಕ್ಷಣದಲ್ಲಿ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಶೇಕಡ ೫ರಷ್ಟು ಮೀಸಲಾತಿ ಜಾರಿಯಾಗಿದೆ. ಇದರಿಂದ ಇದೂವರೆಗೂ ಲಕ್ಷಾಂತರ ಜನ ಈ ಮೀಸಲಾತಿ ಸೌಲಭ್ಯ ಪಡೆದಿದ್ದಾರೆ. ಕಿರಿಯ ಪ್ರಾಥಮಿಕ ಶಾಲೆಗಳನ್ನು ಇಲ್ಲದಂತೆ ಮಾಡುವ ಕೆಪಿಎಸ್ ಶಾಲೆಗಳ ನೀತಿ ಮೇಲ್ನೋಟಕ್ಕೆ ಆಕರ್ಷಕವಾಗಿ ಕಾಣುತ್ತದೆ. ಹಳ್ಳಿಗಳ ಕಿರಿಯ ಪ್ರಾಥಮಿಕ ಶಾಲೆಗಳು ಕೇವಲ ಶಿಕ್ಷಣ ಕೇಂದ್ರಗಳಲ್ಲ, ಅವು ಸಾಂಸ್ಕೃತಿಕ ಕೇಂದ್ರ. ರಾಷ್ಟಿçÃಯ, ನಾಡಹಬ್ಬಗಳನ್ನು ಆಚರಿಸುವ ಕೇಂದ್ರ, ಪ್ರಾಥಮಿಕ ಶಾಲೆಗಳನ್ನು ಉಳಿಸಿಕೊಂಡು ಕೆಪಿಎಸ್ ಮಾಡಲು ಸಾಧ್ಯವಿಲ್ಲವೆ? ಚರ್ಚೆ, ಚಿಂತನೆ ನಡೆಯದಿದ್ದರೆ ಅದರ ಬಹುಮುಖತೆ ಹೇಗೆ ಅರ್ಥವಾಗುತ್ತದೆ? ರಾಜ್ಯ ಶಿಕ್ಷಣ ಇಲಾಖೆ ತಮಗೆ ತೋಚಿದಂತೆ ಶಿಕ್ಷಣ ನೀತಿಜಾರಿ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಕನ್ನಡ ವಿಷಯ ಬೋಧಿಸಲು ಕನ್ನಡ ವಿಷಯದಲ್ಲಿ ಪದವಿ ಪಡೆದ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನಮ್ಮಲ್ಲಿ ಕನ್ನಡ ಭಾಷೆಯ ಕಡೆಗಣನೆ ಆಗುತ್ತಿದೆ. ಸಮಾಜ ವಿಷಯ ಶಿಕ್ಷಕರು ಕನ್ನಡ ಬೋಧಿಸುವಂತಹ ಸ್ಥಿತಿಗೆ ತಂದಿದ್ದಾರೆ. ಕನ್ನಡವನ್ನು ಭಾಷೆಯಾಗಿ ಕಲಿಯಲೂ ಪ್ರೋತ್ಸಾಹವಿಲ್ಲ. ಕನ್ನಡ ಶಾಲೆಗಳನ್ನು ಉನ್ನತಿಕರಿಸಬೇಕು. ಕನ್ನಡ ನಾಡಿನ ಸಾಂಸ್ಕೃತಿಕ, ಸಾಮಾಜಿಕ ಅಸ್ಮಿತೆ.ಅದನ್ನು ಉಳಿಸಲು ಕನ್ನಡ ಪರವಾದ ಶಿಕ್ಷಣ ನೀತಿರೂಪಿಸುವ ಅಗತ್ಯವಿದೆ.ಇದಕ್ಕಾಗಿ ಸಂಘಟನಾತ್ಮಕ, ರಚನಾತ್ಮಕ ಹೋರಾಟ ಮಾಡಬೇಕಾಗಿದೆ ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಕನ್ನಡ ಉಳಿವಿಗೆ ಸರ್ಕಾರದ ಮಟ್ಟದಲ್ಲಿ ನೀತಿ ನಿಯಮಗಳನ್ನು ರೂಪಿಸಬೇಕಾಗಿದೆ.ಮುಖ್ಯಮಂತ್ರಿ ಹಾಗೂ ಮಂತ್ರಿಗಳ ಸಭೆ ನಡೆಸಿ ನಿಮ್ಮ ಸಲಹೆ, ಅಭಿಪ್ರಾಯಗಳನ್ನು ಮಂಡನೆ ಮಾಡಿ ಅವುಗಳನ್ನು ಕಾರ್ಯರೂಪಕ್ಕೆ ತರುವ ಪ್ರಯತ್ನ ಮಾಡೋಣ.ಆಡಳಿತದ ಲೋಪದೋಷಗಳನ್ನು ಚರ್ಚಿಸಿ ಸರಿಪಡಿಸೋಣ ಎಂದರು.
ನAತರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ್ ಬಿಳಿಮನೆ ಅಧ್ಯಕ್ಷತೆಯಲ್ಲಿ ನಡೆದ ಸಂವಾದ ಗೋಷ್ಠಿಯಲ್ಲಿ ಕನ್ನಡ ಮಾಧ್ಯಮ ಮೀಸಲಾತಿಯ ಫಲಾನುಭವಿಗಳು ಅನುಭವ, ಅಭಿಪ್ರಾಯ ಹಂಚಿಕೊAಡರು. ಲೇಖಕ ಡಾ.ರಾಜಪ್ಪ ದಳವಾಯಿ ಸಂವಾದ ಸಮನ್ವಯಕಾರರಾಗಿದ್ದರು. ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ನಟರಾಜ್, ಮನೋವೈದ್ಯಾಧಿಕಾರಿ ಡಾ.ಶಮಾ ಬಿ.ಆರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೇವಲ ನಾಯ್ಕ್, ವೈದ್ಯಾಧಿಕಾರಿ ಡಾ.ಟಿಪ್ಪು ಸುಲ್ತಾನ್, ಶಿಕ್ಷಣ ಇಲಾಖೆ ಅಧಿಕಾರಿಕೆ.ಎಸ್. ಮಧುಸೂದನ್ ಅವರು ಕನ್ನಡ ಮಾಧ್ಯಮ ಮೀಸಲಾತಿಯ ಅನುಭವ ಹಂಚಿಕೊAಡರು.
ಸAಘಟಕರಾದ ಹೆಚ್.ಗೋವಿಂದಯ್ಯ, ಎ. ರಾಮಚಂದ್ರಪ್ಪ, ಅಶ್ವತ್ಥ ನಾರಾಯಣಗುಟ್ಟೆ, ನಾಗಭೂಷಣ್ ಬಗ್ಗನಡು, ಡಾ.ಶೈಲಾ ನಾಗರಾಜ್, ಡಾ.ಓ.ನಾಗರಾಜು, ಸತೀಶ್ ಸಿ.ಜಿ, ರಂಗದಾಸಪ್ಪ, ಎಂ.ಜೆ.ಶಿವಣ್ಣ ಸೇರಿದಂತೆ ವಿವಿಧ ಸಾಹಿತಿಗಳು, ಚಿಂತಕರು ಭಾಗವಹಿಸಿದ್ದರು.
(Visited 1 times, 1 visits today)



