ತುಮಕೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬAಧಿಸಿದAತೆ ಕೇಂದ್ರೀಯ ತನಿಖಾ ದಳ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಗಂಭೀರ ಆರೋಪಗಳು ದಾಖಲಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಈ ಕೂಡಲೇ ಸಚಿವ ಸಂಪುಟದಿAದ ವಜಾಗೊಳಿಸಬೇಕು ಎಂದು ಜಿಲ್ಲಾ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದೆ.
ಬಿಜೆಪಿ ನಾಯಕ, ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್‌ಗೌಡರು ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಿ ೩೦ ಮಂದಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದು, ನಾಗೇಂದ್ರ ಅವರಿಗೆ ಸಂಬAಧಿಸಿದAತೆ ಸುಮಾರು ೧.೨೦ ಕೋಟಿ ರೂ. ಅಕ್ರಮ ಹಣದ ಲಾಭ ತಲುಪಿರುವ ಆರೋಪವನ್ನು ತನಿಖಾ ಸಂಸ್ಥೆ ದಾಖಲಿಸಿದೆ.ಜೊತೆಗೆ ನಿಗಮದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಹಂತ ಹಂತವಾಗಿ ವರ್ಗಾಯಿಸಿರುವ ಅಂಶಗಳೂ ತನಿಖೆಯಲ್ಲಿ ಬಹಿರಂಗವಾಗಿವೆ. ಇಂತಹ ಗಂಭೀರ ಆರೋಪಗಳು ಮತ್ತು ಸಿಬಿಐ ಆರೋಪ ಪಟ್ಟಿ ನ್ಯಾಯಾಲಯದ ಮುಂದೆ ಇರುವ ಸಂದರ್ಭದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನೇ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಅತ್ಯಂತ ತಪ್ಪು ಸಂದೇಶವಾಗಿದೆ ಎಂದರು.
ರಾಹುಲ್‌ಗಾAಧಿಗೆ ನಾಚಿಕೆ ಆಗುವುದಿಲ್ಲವೆ?: ಜನರತೆರಿಗೆ ಹಣವನ್ನು ಲೂಟಿ ಮಾಡಿರುವ ಆರೋಪ ಹೊತ್ತಿರುವ ನಾಗೇಂದ್ರ ಅವರನ್ನು ಸಚಿವರನ್ನಾಗಿ ಮಾಡಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಯಾವ ನೈತಿಕತೆ ಇದೆ? ಇಂತಹವರನ್ನು ಸಚಿವ ಸಂಪುಟಕ್ಕೆ ತಂದು ಸಂವಿಧಾನದ ಘನತೆ, ಸದನದ ಮರ್ಯಾದೆಯನ್ನು ಹಾಳು ಮಾಡಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು ಸಂವಿಧಾನರಕ್ಷಿಸುತ್ತೇವೆ ಎಂದು ಹೇಳುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ನಾಚಿಕೆ ಆಗುವುದಿಲ್ಲವೆ? ನಾಗೇಂದ್ರ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲವಾದರೆ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಸುರೇಶ್‌ಗೌಡ ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿ, ನಾಗೇಂದ್ರ ಅವರು ೨೦೨೪ರಲ್ಲಿ ಇದೇ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇದೀಗ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದು ರಾಜ್ಯ ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ. ಸಿಬಿಐ ಆರೋಪ ಪಟ್ಟಿ ಸಲ್ಲಿಸಿರುವ ಸಂದರ್ಭದಲ್ಲಿ ನಾಗೇಂದ್ರರನ್ನು ಸಚಿವರಾಗಿ ಮುಂದುವರಿಸುವುದು ರಾಜ್ಯ ಸರ್ಕಾರದ ನೈತಿಕ ಹೊಣೆಗಾರಿಕೆಯನ್ನೇ ಪ್ರಶ್ನಿಸುವಂತಾಗಿದೆ. ಆರೋಪಗಳು ಸಾಬೀತಾಗುವವರೆಗೆ ಕಾನೂನು ತನ್ನದೇ ಆದ ರೀತಿಯಲ್ಲಿ ಮುಂದುವರಿಯಲಿ; ಆದರೆ ತನಿಖೆ ಎದುರಿಸುತ್ತಿರುವ ವ್ಯಕ್ತಿಗೆ ಸಚಿವ ಸ್ಥಾನ ನೀಡುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದರು.
ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕು. ಇಲ್ಲವಾದರೆ, ಸಾರ್ವಜನಿಕರ ಹಣದ ರಕ್ಷಣೆಗೆ ಮತ್ತು ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರಜಾಸತ್ತಾತ್ಮಕ ಹೋರಾಟವನ್ನು ತೀವ್ರಗೊಳಿಸಲಿದೆ ಎಂದು ಹೇಳಿದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಹೆಚ್. ಹನುಮಂತರಾಜು, ಜಿಲ್ಲಾ ಕಾರ್ಯದರ್ಶಿ ಕೆ. ವೇದಮೂರ್ತಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ದಿಲೀಪ್, ಉಪಾಧ್ಯಕ್ಷ ವಿಜಯಕುಮಾರ್, ಮುಖಂಡ ಮರಿತಿಮ್ಮಯ್ಯ ಭಾಗವಹಿಸಿದ್ದರು.

(Visited 1 times, 1 visits today)