ತುಮಕೂರು: ಸರ್ಕಾರದ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯುವ ಮಿಷನ್ ಯೋಜನೆಯು ಯುವಜನರಲ್ಲಿ ಶಿಸ್ತು, ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶ ಹೊಂದಿದ್ದು, ಈ ಯೋಜನೆಯಡಿ ನೋಂದಾಯಿಸಿಕೊAಡಿರುವ ಶಿರಾ ತಾಲೂಕು ಬೇವಿನಹಳ್ಳಿ ಗ್ರಾಮದ ಚಿದಾನಂದ ಹಾಗೂ ಗುಬ್ಬಿ ತಾಲೂಕು ಇರಕಸಂದ್ರ ಗ್ರಾಮದ ಸಂತೋಷ್ ಅವರಿಗೆ ನೋಂದಣಿ ದೃಢೀಕರಣ ಪತ್ರವನ್ನು ಉಪ ಮುಖ್ಯಮಂತ್ರಿ ಹಾಗೂ ಕಂದಾಯ, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಸಚಿವ ಡಾ: ಜಿ. ಪರಮೇಶ್ವರ ಅವರು ಬುಧವಾರ ಸಾಂಕೇತಿಕವಾಗಿ ವಿತರಿಸಿದರು.
ಃಎಙSನಲ್ಲಿ ನೋಂದಾಯಿಸಿಕೊAಡಿರುವ ಯುವಕರನ್ನು ಅಭಿನಂದಿಸಿ ಮಾತನಾಡಿದ ಅವರು, ಯುವಕರಲ್ಲಿ ನಾಯಕತ್ವ ಗುಣ, ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಕಳಕಳಿಯನ್ನು ಬೆಳೆಸುವ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಮಿಷನ್‌ನ ಪ್ರಮುಖ ಉದ್ದೇಶವಾಗಿದ್ದು. ಈ ಹಿನ್ನೆಲೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊAಡು ಯೋಜನೆಯ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಕೆ.ಪಿ. ಸಂಜೀವಪ್ಪ ಹಾಗೂ ಈಶ್ವರಪ್ಪ, ತುಮಕೂರು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷಿö್ಮÃನಾರಾಯಣ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)