ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೧೫ರ ಶನಿವಾರ ಬೆಳಗ್ಗೆ ೯ ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಸ್ವಾತಂತ್ರö್ಯ ದಿನಾಚರಣೆ-೨೦೨೬’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಚಿವರಾದ ಡಾ: ಜಿ. ಪರಮೇಶ್ವರ ಅವರು ಅಂದು ಬೆಳಗ್ಗೆ ೯ ಗಂಟೆಗೆ ರಾಷ್ಟç ಧ್ವಜಾರೋಹಣ ಮಾಡಿ, ಗೌರವರಕ್ಷೆ ಸ್ವೀಕರಿಸುವರು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರು ಘನ ಉಪಸ್ಥಿತರಿರುವರು. ತುಮಕೂರು ನಗರ ವಿಧಾನಸಭಾ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ನಂತರ ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಸೇರಿದಂತೆ ಗಣ್ಯರು, ಸರ್ಕಾರಿ ಅಧಿಕಾರಿ/ನೌಕರರು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸ್ವಾತಂತ್ರೋತ್ಸವದ ಆಂಗವಾಗಿ ಅಂದು ಸಂಜೆ ೪.೩೦ ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
(Visited 1 times, 1 visits today)



