ಕೊರಟಗೆರೆ: ಸ್ವಾತಂತ್ರೊ÷್ಯÃತ್ಸವದ ಸಂಭ್ರಮದಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಮೂಲಕ ಕೊರಟಗೆರೆ ರೋಟರಿ ಸಂಸ್ಥೆ ಅರ್ಥಪೂರ್ಣವಾಗಿ ಸಹಭಾಗಿತ್ವ ವಹಿಸಿತು.
ಕೊರಟಗೆರೆಯಲ್ಲಿ ನಡೆದ ಸ್ವಾತಂತ್ರೊ÷್ಯÃತ್ಸವ ಕಾರ್ಯಕ್ರಮದ ಅಂಗವಾಗಿ ಕೊರಟಗೆರೆ ರೋಟರಿ ಕ್ಲಬ್ ಅಧ್ಯಕ್ಷ ವಿಕೆ ನರಸಿಂಹಮೂರ್ತಿ ಹಾಗೂ ಕಾರ್ಯದರ್ಶಿ ಹೊನ್ನೇಶ್ ನೇತೃತ್ವದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ೨,೦೦೦ ನೋಟ್‌ಬುಕ್‌ಗಳು ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಇದರೊಂದಿಗೆ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸ್ವಾತಂತ್ರೊ÷್ಯÃತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲಾಯಿತು.
ಶಿಕ್ಷಣವೇ ಸಮಾಜದ ಪ್ರಗತಿಯ ಪ್ರಮುಖ ಅಡಿಪಾಯ ಎಂಬ ಆಶಯದೊಂದಿಗೆ ರೋಟರಿ ಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದಿಸಿರುವುದು ವಿಶೇಷ ಗಮನ ಸೆಳೆಯಿತು. ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಕಲಿಕೆಯ ಆಸಕ್ತಿ, ಶಿಸ್ತು ಹಾಗೂ ದೇಶಪ್ರೇಮ ಬೆಳೆಸುವ ನಿಟ್ಟಿನಲ್ಲಿ ಇಂತಹ ಸೇವಾ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬ ಅಭಿಪ್ರಾಯವೂ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೂ ಅಗತ್ಯ ಶೈಕ್ಷಣಿಕ ಸಾಮಗ್ರಿಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ನೋಟ್‌ಬುಕ್ ಮತ್ತು ಲೇಖನಿಗಳನ್ನು ನೀಡಿರುವ ರೋಟರಿ ಸಂಸ್ಥೆಯ ಕಾರ್ಯಕ್ಕೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಾತಂತ್ರೊ÷್ಯÃತ್ಸವವನ್ನು ಕೇವಲ ಧ್ವಜಾರೋಹಣ ಮತ್ತು ಸಾಂಸ್ಕöÈತಿಕ ಕಾರ್ಯಕ್ರಮಗಳಿಗೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಸೇವಾ ಕಾರ್ಯದೊಂದಿಗೆ ಆಚರಿಸಿರುವುದು ಕಾರ್ಯಕ್ರಮದ ವಿಶೇಷತೆಯಾಗಿತ್ತು.
ರೋಟರಿ ಸಂಸ್ಥೆಯ ಅಧ್ಯಕ್ಷ ವಿಕೆ ನರಸಿಂಹಮೂರ್ತಿ ಮತ್ತು ಕಾರ್ಯದರ್ಶಿ ಹೊನ್ನೇಶ್ ಅವರ ನೇತೃತ್ವದಲ್ಲಿ ನಡೆದ ಈ ಸೇವಾ ಕಾರ್ಯಕ್ಕೆ ಕ್ಲಬ್‌ನ ಸದಸ್ಯರು ಸಹಕಾರ ನೀಡಿದರು. ವಿದ್ಯಾರ್ಥಿಗಳ ಮುಖದಲ್ಲಿ ಸಂತಸ ಮೂಡಿಸಿದ ಈ ಕಾರ್ಯಕ್ರಮವು ಸ್ವಾತಂತ್ರೊ÷್ಯÃತ್ಸವದ ಆಶಯಕ್ಕೆ ಮತ್ತಷ್ಟು ಅರ್ಥ ತುಂಬಿತು.
ರೋಟರಿ ಸಂಸ್ಥೆಯ ಶಿಕ್ಷಣ ಕಾಳಜಿಗೆ ಶ್ಲಾಘನೆ: ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ರೋಟರಿ ಸಂಸ್ಥೆ ಹೊಂದಿರುವ ಕಾಳಜಿ ಹಾಗೂ ಸಾಮಾಜಿಕ ಬದ್ಧತೆಯನ್ನು ಕಂಡು ಕೊರಟಗೆರೆ ತಾಲ್ಲೂಕು ದಂಡಾಧಿಕಾರಿಗಳು ಕ್ಲಬ್‌ನ ಅಧ್ಯಕ್ಷರು, ಕಾರ್ಯದರ್ಶಿ ಸೇರಿದಂತೆ ಎಲ್ಲಾ ಸದಸ್ಯರಿಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದರು.
ಸ್ವಾತಂತ್ರೊ÷್ಯÃತ್ಸವದ ಸಂದರ್ಭದಲ್ಲಿ ಮಕ್ಕಳ ಕೈಗೆ ನೋಟ್‌ಬುಕ್, ಲೇಖನಿಗಳನ್ನು ನೀಡಿ ಅವರ ಕಲಿಕೆಯ ಪಯಣಕ್ಕೆ ಪುಟ್ಟ ಬೆಂಬಲ ನೀಡಿದ ಕೊರಟಗೆರೆ ರೋಟರಿ ಸಂಸ್ಥೆಯ ಈ ಕಾರ್ಯವು ‘ಸೇವೆಯ ಮೂಲಕ ಸಮಾಜದ ಅಭಿವೃದ್ಧಿ’ ಎಂಬ ರೋಟರಿಯ ಆಶಯಕ್ಕೆ ತಕ್ಕ ಮಾದರಿ ಕಾರ್ಯವಾಗಿ ಗಮನ ಸೆಳೆಯಿತು.

(Visited 1 times, 1 visits today)