ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಮಣೆಚಂಡೂರಿನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಘಟನೆ ಸೋಮವಾರ ನಡೆದಿದೆ.
ವಸತಿ ಶಾಲೆಯ ೬ ಮತ್ತು ೭ನೇ ತರಗತಿಯ ವಿದ್ಯಾರ್ಥಿಗಳು ಬೆಳಗಿನ ತಿಂಡಿ ಸೇವಿಸಿದ್ದಾರೆ. ಸ್ವಲ್ಪ ಸಮಯದಲ್ಲೇ ಮಕ್ಕಳು ಗ್ಯಾಸ್ಟಿçಕ್ ಎಂದು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಶಿಕ್ಷಕರು ಮತ್ತು ವಸತಿ ಶಾಲೆಯ ಸಿಬ್ಬಂದಿಗಳು ೧೨ ವಿದ್ಯಾರ್ಥಿಗಳನ್ನು ಮಾಯಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕರೆತಂದಿದ್ದಾರೆ.
ಅಲ್ಲಿAದ ೧೧ ಗಂಟೆಗೆ ಅಸ್ವಸ್ಥಗೊಂಡ ಮಕ್ಕಳನ್ನು ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮಧ್ಯಾಹ್ನದ ನಂತರ ೯ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಇನ್ನುಳಿದ ೩ ವಿದ್ಯಾರ್ಥಿಗಳಿಗೆ ಪುನಃ ಸುತ್ತಾದ ಕಾರಣ ಇಲ್ಲಿನ ವೈದ್ಯರು ಸಮೀಪದ ಆದಿಚುಂಚನಗಿರಿ ಐಟಿ ಆಸ್ಪತ್ರೆಗೆ ಚಿಕಿತ್ಸೆ ಕರೆದೊಯ್ಯವಂತೆ ಶಿಕ್ಷಕರಿಗೆ ತಿಳಿಸಿದ್ದಾರೆ. ಆಂಬ್ಯೂಲೆನ್ಸ್ ಮೂಲಕ ಐಟಿ ಆಸ್ಪತ್ರೆಗೆ ಮಕ್ಕಳು ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಮಕ್ಕಳು ಸೇವಿಸಿದ ತಿಂಡಿ ಮತ್ತು ನೀರನ್ನು ಸಂಗ್ರಹಿಸಿ ಜಿಲ್ಲಾ ಲ್ಯಾಬಿಗೆ ಪರೀಕ್ಷೆಗೆಂದು ಕಳುಹಿಸಲಾಗಿದೆ ಮತ್ತು ಮಕ್ಕಳು ಅಸ್ವಸ್ಥಗೊಂಡ ವಸತಿ ಶಾಲೆಯಲ್ಲೇ ರಾತಿ ೯ ಗಂಟೆಯ ವರೆಗೂ ಸಮೀಪದ ಸ್ಟಾಫ್ ನರ್ಸ್ ಗಳು ಮಕ್ಕಳ ಆರೋಗ್ಯದ ಬಗ್ಗೆ ನೀಗಾ ವಹಿಸಲಿದ್ದಾರೆ. ಸದ್ಯಕ್ಕೆ ಎಲ್ಲ ಮಕ್ಕಳು ಆರೋಗ್ಯವಾಗಿದ್ದು ಐಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಅಲ್ಲಿನ ವೈದ್ಯರನ್ನು ವಿಚಾರಿಸಲಾಗಿದೆ ಸೋಮವಾರ ರಾತ್ರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಮಂಗಳವಾರ ಹಾಸ್ಟೆಲ್ ಗೆ ಹೋಗುವಂತೆ ಹೇಳಿದ್ದಾರೆಂದು ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ ಪಿ.ಆರ್.ನವೀನ್ ಕುಮಾರ್ ತಿಳಿಸಿದರು.
ತಹಶೀಲ್ದಾರ್ ಎನ್.ಎ.ಅಹಮದ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್, ಸಮಾಜ ಕಲ್ಯಾಣ ಅಧಿಕಾರಿ ರಮೇಶ್ ನಾಯಕ್, ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಶಾಲಾ ಪ್ರಾಂಶುಪಾಲರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
(Visited 1 times, 1 visits today)



