ತುಮಕೂರು
ಮಳೆ ಕೊರತೆ ಹಾಗೂ ಬೆಲೆ ಏರಿಕೆ ನಡುವೆಯೂ ಇಷ್ಟಾರ್ಥ ಸಿದ್ದಿಸಿ ಅಷ್ಟೆöÊಶ್ವರ್ಯ ದಯಪಾಲಿಸುವ ವರಮಹಾಲಕ್ಷಿ÷್ಮ ಹಬ್ಬವನ್ನು ನಾಡಿನಾದ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಅಷ್ಟೆöÊಶ್ವರ್ಯ ಸಿದ್ದಿಸುವ ವರಮಹಾಲಕ್ಷಿ÷್ಮ ಹಬ್ಬವನ್ನು ಸಡಗರ ಸಂಭ್ರಮದಿAದ ಆಚರಿಸಿ ಸುಮಂಗಲಿಯರು, ಯುವತಿಯರು, ಮಕ್ಕಳು ವರಮಹಾಲಕ್ಷಿ÷್ಮ ದೇವಿಯನ್ನು ಆರಾಧಿಸಿದರು.
ವರಮಹಾಲಕ್ಷಿ÷್ಮಯನ್ನು ಪ್ರತಿ ಮನೆ ಮನೆಯಲ್ಲೂ ವಿಶೇಷ ಅಲಂಕಾರದೊAದಿಗೆ ಪೂಜಿಸಿ ಮಹಿಳೆಯರು, ಮಕ್ಕಳು ಆಶೀರ್ವಾದ ಪಡೆದು ಪುನೀತರಾದರು.
ಈ ಬಾರಿ ಬೆಲೆ ಏರಿಕೆ ಎಂದಿಗಿAತಲೂ ದುಪ್ಪಟ್ಟಾಗಿದ್ದರೂ ಸಹ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲೂ ತಮ್ಮ ಇಷ್ಟಾರ್ಥ ಸಿದ್ದಿಸುವ ವರಮಹಾಲಕ್ಷಿ÷್ಮ ಹಬ್ಬವನ್ನು ಸಡಗರದಿಂದ ಆಚರಿಸಿದ್ದು ಕಂಡು ಬಂತು.
ಸAಪ್ರದಾಯದAತೆ ಸುಮಂಗಲಿಯರು ಒಳ್ಳೆಯ ಘಳಿಗೆಯಲ್ಲಿ ವರಮಹಾಲಕ್ಷಿ÷್ಮಯನ್ನು ಪೂಜಿಸಬೇಕೆಂದು ಇಡೀ ರಾತ್ರಿ ನಿದ್ದೆ ಮಾಡದೆ ಲಕ್ಷಿ÷್ಮದೇವಿಯನ್ನು ತಮ್ಮ ತಮ್ಮ ಮನೆಗಳಲ್ಲಿ ಸಣ್ಣ ತಾಮ್ರದ ಬಿಂದಿಗೆ ಅಥವಾ ಬೆಳ್ಳಿ ಚೆಂಬನ್ನು ಕಳಶದ ರೂಪದಲ್ಲಿ ಇಟ್ಟು ಅದರಲ್ಲಿ ನೀರು ತುಂಬಿಸಿ ಅದರ ಮೇಲೆ ತೆಂಗಿನ ಕಾಯಿ ಇಟ್ಟು ಅದಕ್ಕೆ ಲಕ್ಷಿ÷್ಮಅಮ್ಮನವರ ಬೆಳ್ಳಿ ಮುಖವಾಡ ಇಟ್ಟು, ಸೀರೆ ಉಡಿಸಿ, ಒಡವೆ, ಹೂವುಗಳಿಂದ ಸಿಂಗರಿಸುವ ಕಾರ್ಯದಲ್ಲಿ ನಿರತರಾಗಿದ್ದ ದೃಶ್ಯಗಳು ಕಂಡು ಬಂದವು.
ಮನೆಗಳಲ್ಲಿ ವರಮಹಾಲಕ್ಷಿ÷್ಮ ದೇವಿಯ ಮುಖವಾಡಕ್ಕೆ ವಿಶೇಷ ಅಲಂಕಾರ ಮಾಡಿ, ಹಬ್ಬದ ಅಂಗವಾಗಿ ತಯಾರಿಸಿದ್ದ ಬಗೆ ಬಗೆಯ ಸಿಹಿ ತಿಂಡಿಗಳು ಸೇರಿದಂತೆ ಇನ್ನಿತರೆ ಖಾದ್ಯಗಳನ್ನು ನೈವೇದ್ಯಕ್ಕೆ ಇಟ್ಟು ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಇಷ್ಟಾರ್ಥ ಸಿದ್ದಿಸುವಂತೆ ಸುಮಂಗಲಿಯರು, ಮಕ್ಕಳು ಪ್ರಾರ್ಥಿಸಿದರು.
ಇಷ್ಟಾರ್ಥಗಳನ್ನು ಸಿದ್ದಿಸುವ ವರಮಹಾಲಕ್ಷಿ÷್ಮ ಹಬ್ಬದಲ್ಲಿ ಮುತ್ತೆöÊದೆಯರು ಮನೆಗಳಿಗೆ ಬಂದು ಅರಿಶಿನ-ಕುಂಕುಮ ಪಡೆದು ಹರಸಿದರೆ ಹಬ್ಬದ ಸಂಭ್ರಮದ ಇಮ್ಮಡಿಗೊಂಡು ಮಹಿಳೆಯರಲ್ಲಿ ಧನ್ಯತಾ ಭಾವ ಎದ್ದು ಕಾಣುತ್ತದೆ. ಅದರಂತೆ ಪ್ರತಿಯೊಬ್ಬರ ಮನೆಯಲ್ಲೂ ಸುಮಂಗಲಿಯರಿಗೆ ಅರಿಶಿನ-ಕುಂಕುಮ ನೀಡಿ ಅವರಿಂದ ಆಶೀರ್ವಾದ ಪಡೆಯುತ್ತಿದ್ದ ದೃಶ್ಯಗಳು ಸಹ ಕಂಡು ಬಂದವು.
ಇAದು ಬೆಳಿಗ್ಗೆಯಿಂದಲೂ ಮಹಿಳೆಯರು, ಮಕ್ಕಳು ನಗರದ ವಿವಿಧ ಬಡಾವಣೆಗಳಲ್ಲಿರುವ ಲಕ್ಷಿ÷್ಮದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ನಗರದ ಬಿ.ಹೆಚ್. ರಸ್ತೆಯಲ್ಲಿರುವ ಟಿಜಿಎಂಸಿ ಬ್ಯಾಂಕ್ ಆವರಣದಲ್ಲಿರುವ ಮಹಾಲಕ್ಷಿ÷್ಮ ದೇವಾಲಯ ಸೇರಿದಂತೆ ವಿವಿಧ ಬಡಾವಣೆಗಳಲ್ಲಿರುವ ಶ್ರೀ ಲಕ್ಷಿ÷್ಮ ದೇವಾಲಯಗಳಲ್ಲಿ ಮುಂಜಾನೆಯಿAದಲೇ ವಿಶೇಷ ಪೂಜೆಗಳು ನೆರವೇರಿದವು.
ಟಿಜಿಎಂಸಿ ಬ್ಯಾಂಕ್ ಆವರಣದಲ್ಲಿ ಶ್ರೀ ಲಕ್ಷಿ÷್ಮದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ಹಬ್ಬದ ಅಂಗವಾಗಿ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ನೆರವೇರಿಸಲಾಗಿದ್ದು, ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಲಾಗಿದೆ.
ಭಕ್ತಾದಿಗಳು ಸಹ ಸರದಿ ಸಾಲಿನಲ್ಲಿ ನಿಂತು ಅಮ್ಮನವರ ದರ್ಶನ ಪಡೆದರು.
ವರಮಹಾಲಕ್ಷಿ÷್ಮ ಹಬ್ಬ ಆಚರಣೆಗೆ ಹೂವು, ಹಣ್ಣು ಹಂಪಲುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದರೂ ಸಹ ಯಾವುದನ್ನೂ ಲೆಕ್ಕಿಸದೆ ಜನಸಾಮಾನ್ಯರು ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದ್ದು ವಿಶೇಷವಾಗಿತ್ತು.
(Visited 1 times, 1 visits today)





