ಕೊರಟಗೆರೆ: ಶ್ರಾವಣ ಮಾಸದ ಶುಕ್ರವಾರದಂದು ವರಮಹಾಲಕ್ಷಿ÷್ಮ ಹಬ್ಬದ ಸಂಭ್ರಮ ಮನೆಮಾಡಿದ್ದು, ತಾಲೂಕಿನ ಪ್ರಸಿದ್ಧ  ಗೊರವನಹಳ್ಳಿ ಶ್ರೀ ಮಹಾಲಕ್ಷಿ÷್ಮ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ತಾಯಿ ಮಹಾಲಕ್ಷಿ÷್ಮಯ ದರ್ಶನ ಪಡೆದು ಪುನೀತರಾದರು.
ಹಬ್ಬದ ಹಿನ್ನೆಲೆಯಲ್ಲಿ ಬೆಳಗ್ಗೆ ೬ ಗಂಟೆಯಿAದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊAಡವು. ತಾಯಿ ಮಹಾಲಕ್ಷಿ÷್ಮಗೆ ಪಂಚಾಮೃತ ಅಭಿಷೇಕ, ಕುಂಕುಮಾಭಿಷೇಕ, ವಿಶೇಷ ಪೂಜೆ, ಹೋಮ-ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಆಡಳಿತ ಮಂಡಳಿ ವತಿಯಿಂದ ನೆರವೇರಿಸಲಾಯಿತು.
ನೂತನ ತೇರು ಪ್ರಮುಖ ಆಕರ್ಷಣೆ: ಈ ಬಾರಿಯ ವರಮಹಾಲಕ್ಷಿ÷್ಮ ಹಬ್ಬದ ಪ್ರಮುಖ ಆಕರ್ಷಣೆಯಾಗಿದ್ದು, ಸುಮಾರು ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ತೇರು. ತೇರಿನಲ್ಲಿ ಸುಮಾರು ೨೩ ಕೆ.ಜಿ. ತೂಕದ ಬೆಳ್ಳಿಯ ಮಹಾಲಕ್ಷಿ÷್ಮ ತಾಯಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ವೈಭವದ ಮೆರವಣಿಗೆ ನಡೆಸಲಾಯಿತು. ಉತ್ಸವ ಮೂರ್ತಿಯ ಮೆರವಣಿಗೆ ಭಕ್ತರ ಕಣ್ಮನ ಸೆಳೆಯಿತು. ಮಧ್ಯಾಹ್ನ ೧೨.೩೦ಕ್ಕೆ ತಾಯಿ ಮಹಾಲಕ್ಷಿ÷್ಮಗೆ ವಿಶೇಷ ಮಹಾಮಂಗಳಾರತಿ ನೆರವೇರಿಸಲಾಯಿತು. ಸಾವಿರಾರು ಭಕ್ತರು ಮಹಾಮಂಗಳಾರತಿಯಲ್ಲಿ ಭಾಗವಹಿಸಿ ತಾಯಿಯ ದರ್ಶನ ಪಡೆದು ಆಶೀರ್ವಾದ ಪಡೆದರು.
ಭಕ್ತರಿಗೆ ನಿರಂತರ ದಾಸೋಹ: ದೇವಾಲಯಕ್ಕೆ ಆಗಮಿಸಿದ ಭಕ್ತರ ಅನುಕೂಲಕ್ಕಾಗಿ ಬೆಳಗ್ಗಿನಿಂದಲೇ ತಿಂಡಿ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ ೯ ಗಂಟೆಯವರೆಗೂ ನಿರಂತರ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಮಧ್ಯಾಹ್ನದ ವೇಳೆಗೆ ಸುಮಾರು ೧೫ ಸಾವಿರಕ್ಕೂ ಅಧಿಕ ಭಕ್ತರು ತಾಯಿ ಮಹಾಲಕ್ಷಿ÷್ಮಯ ದರ್ಶನ ಪಡೆದಿದ್ದಾರೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಸುರಕ್ಷತೆಗೆ ಆದ್ಯತೆ: ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ವರಮಹಾಲಕ್ಷಿ÷್ಮ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಭಕ್ತರ ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗಿದೆ. ಪೊಲೀಸ್, ಕಂದಾಯ ಇಲಾಖೆ ಹಾಗೂ ದೇವಾಲಯದ ಆಡಳಿತ ಮಂಡಳಿ ಸಮನ್ವಯದಿಂದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಭಕ್ತರು ಶಾಂತಿ ಹಾಗೂ ಸುವ್ಯವಸ್ಥೆಯಿಂದ ತಾಯಿ ಮಹಾಲಕ್ಷಿ÷್ಮಯ ದರ್ಶನ ಪಡೆದು ಸಹಕರಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರಿನಿAದ ಬಂದ ಭಕ್ತರ ಸಂತಸ: ಬೆಂಗಳೂರಿನಿAದ ಆಗಮಿಸಿದ್ದ ಹಂಸ ಭಕ್ತಾದಿಯೊಬ್ಬರು ಮಾತನಾಡಿ, ಪ್ರತಿ ವರ್ಷ ವರಮಹಾಲಕ್ಷಿ÷್ಮ ಹಬ್ಬದ ಸಂದರ್ಭದಲ್ಲಿ ಗೊರವನಹಳ್ಳಿಗೆ ಬಂದು ತಾಯಿ ಮಹಾಲಕ್ಷಿ÷್ಮಯ ದರ್ಶನ ಪಡೆಯುತ್ತೇವೆ. ಈ ಬಾರಿ ೨೩ ಕೆ.ಜಿ. ಬೆಳ್ಳಿಯ ಉತ್ಸವ ಮೂರ್ತಿಯ ಮೆರವಣಿಗೆ ನೋಡುವ ಅವಕಾಶ ಸಿಕ್ಕಿದ್ದು ತುಂಬಾ ಸಂತೋಷವಾಗಿದೆ. ದೇವಾಲಯದಲ್ಲಿ ಉತ್ತಮ ವ್ಯವಸ್ಥೆ ಮಾಡಲಾಗಿದೆ. ತಾಯಿ ಮಹಾಲಕ್ಷಿ÷್ಮಯ ದರ್ಶನ ಪಡೆದಿರುವುದು ನಮ್ಮ ಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದರು.
ವರಮಹಾಲಕ್ಷಿ÷್ಮ ಹಬ್ಬದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಗೊರವನಹಳ್ಳಿ ಮಹಾಲಕ್ಷಿ÷್ಮ ಕ್ಷೇತ್ರದಲ್ಲಿ ಭಕ್ತರ ದಂಡು ಕಂಡುಬAದಿದ್ದು, ತಾಯಿ ಮಹಾಲಕ್ಷಿ÷್ಮಗೆ ಜೈ ಎಂಬ ಘೋಷಣೆಗಳು ಮೊಳಗಿದವು. ಇಡೀ ಕ್ಷೇತ್ರ ಭಕ್ತಿಮಯ ವಾತಾವರಣದಿಂದ ಕಂಗೊಳಿಸಿತು.

(Visited 1 times, 1 visits today)