BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
  • ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ
  • ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ
  • ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ
  • ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ
  • ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ
news

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

By News Desk BenkiyabaleUpdated:August 24, 2026 5:45 pm

ಶಿರಾ: ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಮೀಸಲಿಟ್ಟ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ ಎಂಬ ಆರೋಪ, ಅಕ್ರಮ ಲೇಔಟ್‌ಗಳಿಗೆ ಅನುಮೋದನೆ, ವಾರ್ಡ್ಗಳಿಗೆ ಮುನ್ಸಿಪಲ್ ಹಣಕಾಸು ನಿಧಿಗಳ ಅಸಮಾನ ಹಂಚಿಕೆ, ಸಮರ್ಪಕ ಕಸ ವಿಲೇವಾರಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳು ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಸ್ಫೋಟಗೊಂಡವು. ಸದಸ್ಯರ ತೀವ್ರ ವಿರೋಧ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಾಮಾನ್ಯ ಸಭೆಯನ್ನೇ ಮುಂದೂಡಲಾಯಿತು.
ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಹಲವು ಸದಸ್ಯರು ನಗರಸಭೆಯ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಆಶ್ರಯ ಕಮಿಟಿಯ ಸಭೆ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಅಲ್ಲಿ ಸಮಸ್ಯೆ ಬಗೆಹರಿಸುತ್ತೇವೆಂದು ಆಯುಕ್ತ ರುದ್ರೇಶ್ ಹೇಳಿದರೂ ಕೇಳದೆ ಪ್ರತಿಭಟನೆ ಮುಂದುವರಿಸಿದ ಸದಸ್ಯರು.
ಪೌರಕಾರ್ಮಿಕರಿಗೆ ಮೀಸಲಿಟ್ಟ ಜಾಗದಲ್ಲಿ ಅಕ್ರಮ ಕಟ್ಟಡ: ಪೌರಕಾರ್ಮಿಕರಿಗೆ ಮೀಸಲಿಟ್ಟಿರುವ ಜಾಗದಲ್ಲೇ ಅಕ್ರಮವಾಗಿ ಕಟ್ಟಡ ನಿರ್ಮಿಸಲು ಅವಕಾಶ ನೀಡಲಾಗಿದೆ ಎಂದು ಸದಸ್ಯರು ಆರೋಪಿಸಿದರು. ಮೀಸಲಿಟ್ಟ ಜಾಗವನ್ನೇ ನಗರಸಭೆ ರಕ್ಷಿಸಲು ಸಾಧ್ಯವಾಗದಿದ್ದರೆ ಆಡಳಿತದ ಹೊಣೆಗಾರಿಕೆ ಏನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಅಕ್ರಮ ಕಟ್ಟಡ ನಿರ್ಮಾಣದ ಕುರಿತು ತಕ್ಷಣ ಸೂಕ್ತ ಕ್ರಮ ಕೈಗೊಂಡು, ಅಕ್ರಮವನ್ನು ತೆರವುಗೊಳಿಸಬೇಕು. ಸಮಸ್ಯೆ ಬಗೆಹರಿಯುವವರೆಗೆ ಸಾಮಾನ್ಯ ಸಭೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸದಸ್ಯರು ಪಟ್ಟು ಹಿಡಿದರು.
ಅಕ್ರಮ ಲೇಔಟ್‌ಗಳಿಗೆ ಅನುಮೋದನೆ ಆರೋಪ: ನಗರದ ಅಭಿವೃದ್ಧಿಯ ಹೆಸರಿನಲ್ಲಿ ನಿಯಮಗಳನ್ನು ಬದಿಗೊತ್ತಿ ಅಕ್ರಮ ಲೇಔಟ್‌ಗಳಿಗೆ ಅನುಮೋದನೆ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪವೂ ಸಭೆಯಲ್ಲಿ ಕೇಳಿಬಂತು. ನಿಯಮಬಾಹಿರ ಲೇಔಟ್‌ಗಳಿಗೆ ಅನುಮತಿ ನೀಡುವುದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ. ಹೀಗಾಗಿ ನಿಯಮಾನುಸಾರವೇ ಲೇಔಟ್‌ಗಳಿಗೆ ಅನುಮೋದನೆ ನೀಡಬೇಕು ಎಂದು ಸದಸ್ಯರು ಒತ್ತಾಯಿಸಿದರು.
ನ್ಯಾಯ ಸಮ್ಮತವಾಗಿ ಹಂಚಿಕೆಯಾಗದ ಹಣಕಾಸು ನಿಧಿಗಳು: ನಗರಸಭೆಯ ವಿವಿಧ ಹಣಕಾಸು ನಿಧಿಗಳನ್ನು ವಾರ್ಡ್ಗಳಿಗೆ ನ್ಯಾಯಸಮ್ಮತವಾಗಿ ಹಂಚಿಕೆ ಮಾಡುತ್ತಿಲ್ಲ ಎಂಬ ಆರೋಪವೂ ತೀವ್ರವಾಗಿ ಕೇಳಿಬಂತು. ಕೆಲವು ವಾರ್ಡ್ಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಇನ್ನು ಕೆಲವು ವಾರ್ಡ್ಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸದಸ್ಯರು ದೂರಿದರು.
ಜನಸಂಖ್ಯೆ, ಅಗತ್ಯ ಹಾಗೂ ಸಮಸ್ಯೆಗಳ ಆಧಾರದ ಮೇಲೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹಂಚಿಕೆ ಮಾಡಬೇಕು. ನಗರಸಭೆಯ ಹಣ ಎಲ್ಲ ವಾರ್ಡ್ಗಳ ಜನರ ತೆರಿಗೆ ಹಣವಾಗಿದ್ದು, ಯಾವುದೇ ವಾರ್ಡ್ಗೆ ತಾರತಮ್ಯ ಮಾಡಬಾರದು ಎಂದು ಸದಸ್ಯರು ಆಗ್ರಹಿಸಿದರು.
ಕಸ, ಚರಂಡಿ ಸಮಸ್ಯೆ; ದುರ್ವಾಸನೆಯಿಂದ ಜನರ ಪರದಾಟ: ನಗರದ ಹಲವು ವಾರ್ಡ್ಗಳಲ್ಲಿ ಸಮರ್ಪಕ ಕಸ ವಿಲೇವಾರಿ ನಡೆಯುತ್ತಿಲ್ಲ. ಮನೆಮನೆಗೆ ಕಸ ಸಂಗ್ರಹಿಸುವ ವ್ಯವಸ್ಥೆ ಇದ್ದರೂ ಹಲವೆಡೆ ಕಸದ ರಾಶಿಗಳು ಕಂಡುಬರುತ್ತಿವೆ. ಇದರಿಂದ ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸದಸ್ಯರು ಹೇಳಿದರು.
ಚರಂಡಿಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸದ ಪರಿಣಾಮ ತ್ಯಾಜ್ಯ ಹಾಗೂ ಕೊಳಚೆ ನೀರು ನಿಂತುಕೊAಡಿದ್ದು, ಯುಜಿಡಿ ಮ್ಯಾನ್‌ಹೋಲ್‌ಗಳಿಂದ ಕೊಳಚೆ ನೀರು ರಸ್ತೆಗೆ ಹರಿಯುತ್ತಿರುವ ಸಮಸ್ಯೆಯೂ ಇದೆ. ಈ ಬಗ್ಗೆ ನಗರಸಭೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕುಡಿಯುವ ನೀರಿಗೂ ಸಮಸ್ಯೆ: ನಗರದ ಹಲವು ಪ್ರದೇಶಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂಬ ವಿಚಾರವೂ ಸಭೆಯಲ್ಲಿ ಪ್ರತಿಧ್ವನಿಸಿತು. ತೆರಿಗೆ ಪಾವತಿಸುವ ನಾಗರಿಕರಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಸ್ವಚ್ಛತೆ ಹಾಗೂ ಸಮರ್ಪಕ ಕಸ ವಿಲೇವಾರಿ ಒದಗಿಸಲು ನಗರಸಭೆಗೆ ಸಾಧ್ಯವಾಗುತ್ತಿಲ್ಲವೇ ಎಂದು ಸದಸ್ಯರು ಪ್ರಶ್ನಿಸಿದರು.
ಪೌರಕಾರ್ಮಿಕರ ಜಾಗದ ಅಕ್ರಮ ಕಟ್ಟಡ, ಅಕ್ರಮ ಲೇಔಟ್‌ಗಳ ಅನುಮೋದನೆ, ಹಣಕಾಸು ನಿಧಿಗಳ ಹಂಚಿಕೆ, ಕಸ ವಿಲೇವಾರಿ, ಚರಂಡಿ, ಯುಜಿಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.
ಈ ಕುರಿತು ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮದ್ ಹಾಗೂ ಆಯುಕ್ತ ರುದ್ರೇಶ್ ಅವರಿಗೆ ಸದಸ್ಯರು ಪತ್ರ ಸಲ್ಲಿಸಿದರು.
ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರ ದೊರೆಯುವವರೆಗೆ ಸಾಮಾನ್ಯ ಸಭೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸದಸ್ಯರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಯಿತು.
ನಗರಸಭೆ ಆಡಳಿತದ ವಿರುದ್ಧ ಪಕ್ಷಭೇದ ಮರೆತು ಸದಸ್ಯರು ಒಗ್ಗಟ್ಟಾಗಿ ಧ್ವನಿ ಎತ್ತಿ, ಸಾಮಾನ್ಯ ಸಭೆಯನ್ನೇ ಮುಂದೂಡಿಸಿರುವುದು ಶಿರಾ ನಗರಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲಾಧಿಕಾರಿ ಬರುವವರೆಗೆ ಉಪವಾಸ ಸತ್ಯಾಗ್ರಹ: ನಗರದ ಜ್ವಲಂತ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಸ್ಪಷ್ಟ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಅವರು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಮಸ್ಯೆಗಳನ್ನು ಚರ್ಚಿಸಿ ಇತ್ಯರ್ಥಪಡಿಸುವವರೆಗೆ ಉಪವಾಸ ಸತ್ಯಾಗ್ರಹ ಮುಂದುವರಿಸುವುದಾಗಿ ಪಟ್ಟು ಹಿಡಿದರು.
ಕೃಷ್ಣಪ್ಪ ಅವರ ಉಪವಾಸ ಸತ್ಯಾಗ್ರಹಕ್ಕೆ ಪಕ್ಷಭೇದ ಮರೆತು ೧೨ ನಗರಸಭೆ ಸದಸ್ಯರು ಬೆಂಬಲವಾಗಿ ನಿಂತರು.

(Visited 1 times, 1 visits today)
kannada news karnataka local news sira sira news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
Next Article ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
News Desk Benkiyabale

Related Posts

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm news
ತಾಜಾ ಸುದ್ಧಿಗಳು
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm
news

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
news

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm
Our Youtube Channel
Our Picks

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

By News Desk BenkiyabaleOctober 08, 2026 6:05 pm

ಪಾವಗಡ: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್ ವೈ. ರವಿ ನೇತೃತ್ವದ ಅಧಿಕಾರಿಗಳ…

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.