BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
  • ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ
  • ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ
  • ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ
  • ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ದುಡಿಯುವ ಕೈಗಳಿಗೆ ಆರೋಗ್ಯದ ಕಾಳಜಿ: ನೂರಾರು ಕಾರ್ಮಿಕರು, ಕುಟುಂಬಸ್ಥರು ಭಾಗಿ
By News Desk BenkiyabaleUpdated:August 26, 2026 4:07 pm
oplus_2097154

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಹಾಗೂ ನವ ಕರ್ನಾಟಕ ಸಂಘಟನೆ, ತುಮಕೂರು ಇವರ ಸಹಭಾಗಿತ್ವದಲ್ಲಿ ನಡೆದ ಶಿಬಿರದಲ್ಲಿ ನೂರಾರು ಕಟ್ಟಡ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಭಾಗವಹಿಸಿ ವಿವಿಧ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಹಗಲು-ರಾತ್ರಿ ಎನ್ನದೆ ದುಡಿಯುವ ಕಟ್ಟಡ ಕಾರ್ಮಿಕರಿಗೆ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಲು ಸಮಯದ ಕೊರತೆ ಇರುವ ಹಿನ್ನೆಲೆಯಲ್ಲಿ ಶಿಬಿರ ಆಯೋಜಿಸಲಾಗಿತ್ತು.
ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿದ ವೈದ್ಯರು, ಆರೋಗ್ಯ ಸಮಸ್ಯೆಗಳ ಕುರಿತು ಕಾರ್ಮಿಕರಿಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ಕೆಲಸದ ಸಂದರ್ಭದಲ್ಲಿ ಎದುರಾಗುವ ದೈಹಿಕ ಆಯಾಸ, ಆರೋಗ್ಯ ಸಮಸ್ಯೆಗಳು ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವ ಮಹತ್ವದ ಬಗ್ಗೆಯೂ ವೈದ್ಯರು ಮಾಹಿತಿ ನೀಡಿದರು.
ಆರೋಗ್ಯದ ಬಗ್ಗೆ ನಿರ್ಲಕ್ಷ÷್ಯ ಬೇಡ: ಬ್ಲಾಸೆಮ್ ಹಾಸ್ಪಿಟಲ್‌ನ ಡಾ. ಪರೀಕ್ಷಿತ್ ಮಾತನಾಡಿ, ಕಟ್ಟಡ ಕಾರ್ಮಿಕರು ಪ್ರತಿದಿನ ಕಷ್ಟಪಟ್ಟು ದುಡಿಯುವವರು. ತಮ್ಮ ಆರೋಗ್ಯದ ಬಗ್ಗೆ ಸಮಯ ಕೊಡುವುದು ಬಹಳ ಮುಖ್ಯ. ರಾತ್ರಿ ೯ ಗಂಟೆಯಾದರೂ ಸರಿ, ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಅವರಿಗೆ ಸಂಪೂರ್ಣ ಆರೋಗ್ಯ ಮಾಹಿತಿ ನೀಡುವುದು ನಮ್ಮ ಕರ್ತವ್ಯ. ಯಾವುದೇ ಆರೋಗ್ಯ ಸಮಸ್ಯೆ ಕಂಡುಬAದರೆ ನಿರ್ಲಕ್ಷ÷್ಯ ಮಾಡದೆ ಆರಂಭದಲ್ಲೇ ವೈದ್ಯರನ್ನು ಸಂಪರ್ಕಿಸಬೇಕು, ಎಂದು ಹೇಳಿದರು.
ನವ ಕರ್ನಾಟಕ ಕಾರ್ಮಿಕ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬಿಂದು ಮಾತನಾಡಿ, ಕಾರ್ಮಿಕರು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ ದಿನನಿತ್ಯದ ದುಡಿಮೆಯ ನಡುವೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶವಿದೆ, ಎಂದರು.
ಕಾರ್ಮಿಕರಿಗೂ ಸೌಲಭ್ಯಗಳ ಅರಿವು ಅಗತ್ಯ: ನವ ಕರ್ನಾಟಕ ನಗರ ಅಧ್ಯಕ್ಷ ಮಲ್ಲೇಶ್ ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊAಡಿರುವ ಅರ್ಹ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ವಿವಿಧ ಕಲ್ಯಾಣ ಯೋಜನೆಗಳು ಲಭ್ಯವಿವೆ. ವೈದ್ಯಕೀಯ ನೆರವು, ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ನೆರವು, ಅಪಘಾತ ಪರಿಹಾರ, ಮಕ್ಕಳ ಶಿಕ್ಷಣಕ್ಕೆ ಸಹಾಯ, ವಿವಾಹ ಸಹಾಯ ಹಾಗೂ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಮಂಡಳಿಯ ನಿಯಮಾನುಸಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.
ನೋಂದಾಯಿತ ಕಾರ್ಮಿಕರು ತಮ್ಮ ನೋಂದಣಿ ಹಾಗೂ ಚಂದಾ ಪಾವತಿ ವಿವರಗಳನ್ನು ಸರಿಯಾಗಿ ನಿರ್ವಹಿಸಿಕೊಂಡು, ತಮಗೆ ಅರ್ಹವಾಗಿರುವ ಸೌಲಭ್ಯಗಳ ಕುರಿತು ಕಾರ್ಮಿಕ ಇಲಾಖೆ ಅಥವಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ಮಾಹಿತಿ ಪಡೆದುಕೊಳ್ಳಬೇಕು. ಕಾರ್ಮಿಕರ ಆರೋಗ್ಯವೇ ಅವರ ಕುಟುಂಬದ ಭದ್ರತೆ, ಎಂದು ಹೇಳಿದರು.
ಕಾರ್ಮಿಕರ ಮೆಚ್ಚುಗೆ: ಕಾರ್ಮಿಕ ಮಹಮ್ಮದ್ ಆರಿಫ್ ಮಾತನಾಡಿ, ಕೆಲಸದ ಒತ್ತಡದಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಮಯ ಸಿಗುವುದಿಲ್ಲ. ಇಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರಿಂದ ಆರೋಗ್ಯದ ಬಗ್ಗೆ ಮಾಹಿತಿ ಹಾಗೂ ಸಲಹೆ ಪಡೆದುಕೊಂಡಿದ್ದೇವೆ. ಇಂತಹ ಶಿಬಿರಗಳು ನಮ್ಮಂತಹ ಕಾರ್ಮಿಕರಿಗೆ ತುಂಬಾ ಅನುಕೂಲವಾಗಿವೆ, ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಮಿಕ ಸಚಿವರಿಗೆ ಅಭಿನಂದನೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದ ವತಿಯಿಂದ ವಿವಿಧ ಯೋಜನೆಗಳು ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ಕಾರ್ಯ ನಡೆಯುತ್ತಿದೆ. ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಾಗೂ ಕುಟುಂಬದ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಮತ್ತು ಕಾರ್ಮಿಕ ಸಚಿವರ ನೇತೃತ್ವದಲ್ಲಿ ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಕಾರ್ಮಿಕರಿಗೂ ತಲುಪಬೇಕಿದೆ.
ಕಾರ್ಯಕ್ರಮದಲ್ಲಿ ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ಶ್ವೇತಾ, ಕೊರಟಗೆರೆ ತಾಲೂಕು ಮಹಿಳಾ ಉಪಾಧ್ಯಕ್ಷರು, ಸಂಘಟನೆಯ ಸದಸ್ಯರು, ಬ್ಲಾಸೆಮ್ ಹಾಸ್ಪಿಟಲ್ ತಂಡದ ಟೀಮ್ ಲೀಡರ್ ಡಾ. ಅಭಿಷೇಕ್, ಡಾ. ಪ್ರಥಮ್ ಎ. ಪಾಟೀಲ್, ಡಾ. ಪರೀಕ್ಷಿತ್, ನಿರೋಷ, ಕೀರ್ತಿ ಸೇರಿದಂತೆ ಲ್ಯಾಬ್ ಟೆಕ್ನಿಷಿಯನ್‌ಗಳು ಹಾಗೂ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka Koratagere local news madhugiri tumakur tumkur tumkur news ಕೊರಟಗೆರೆ: ತುಮಕೂರು:
Previous Articleಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
Next Article ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
News Desk Benkiyabale

Related Posts

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm news
ತಾಜಾ ಸುದ್ಧಿಗಳು
news

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm
news

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm
news

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
news

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm
Our Youtube Channel
Our Picks

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

By News Desk BenkiyabaleOctober 15, 2026 6:04 pm

ತುಮಕೂರು: ಕಲ್ಪತರು ಹವಮಾನ ಕ್ರಿಯಾ ಸಮಿತಿಯ ಒಕ್ಕೂಟವು ರೈತರ ಪರ ನಿಂತು ರೈತರ ಜೀವನದ ಸುಧಾರಣೆಗೆ ಅಡಿಪಾಯ ಹಾಕಿದೆ ಹಾಗೂ…

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.