ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ.ಬಿ.ವಿ ಅವರು ಜಿಲ್ಲಾ ಪಂಚಾಯತಿಯಲ್ಲಿAದು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್‌ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಜುಲೈ ೧ ರಿಂದ ಆರಂಭವಾಗಿರುವ ವಿಬಿ ಜಿ ರಾಮ್ ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಸದರಿ ಯೋಜನೆಯ ಮಾಹಿತಿಯನ್ನು ಗ್ರಾಮೀಣ ಭಾಗದ ಪ್ರತಿ ಮನೆಗೂ ತಲುಪಿಸುವ ಉದ್ದೇಶದಿಂದ ಈ ಕರಪತ್ರಗಳನ್ನು ಬಿಡುಗಡೆಗೊಳಿಸಲಾಗಿದೆ. ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಕ್ಕೆ ಒಂದು ವರ್ಷದಲ್ಲಿ ೧೨೫ ದಿನಗಳ ಉದ್ಯೋಗ ಮತ್ತು ಒಂದು ಮಾನವ ದಿನಕ್ಕೆ ೩೮೨ ರೂ.ಗಳ ಕೂಲಿಯನ್ನು ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಬರದ ಪರಿಸ್ಥಿತಿ ಇರುವುದರಿಂದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ ಯೋಜನೆಯ ಸದುಪಯೋಗವನ್ನು ಗ್ರಾಮೀಣ ಜನರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿಯಿAದ ಉಚಿತವಾಗಿ ಜಾಬ್ ಕಾರ್ಡ್ ನೀಡಲಾಗುತ್ತಿದೆ. ಅಕುಶಲ ಕೆಲಸ ಬೇಕೆಂದು ಗ್ರಾಮ ಪಂಚಾಯಿತಿಗೆ ನಮೂನೆ ೬ರಲ್ಲಿ ಅರ್ಜಿ ಸಲ್ಲಿಸಿ ಕೆಲಸ ಕೋರಿದ ೧೫ ದಿನಗಳಲ್ಲಿ ಕೆಲಸವನ್ನು ನೀಡಲಾಗುತ್ತದೆ. ಕೆಲಸ ನೀಡಲು ನಿರಾಕರಿಸಿದರೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಕೂಲಿ ಕೆಲಸ ನಿರ್ವಹಿಸಿದ ೧೫ ದಿನದೊಳಗಾಗಿ ಅರ್ಹ ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ ಕೂಲಿಯನ್ನು ಜಮಾ ಮಾಡಲಾಗುತ್ತದೆ. ವಿಶೇಷ ಚೇತನರು, ವೃದ್ಧರು, ಗರ್ಭಿಣಿಯರಿಗೆ ಕೆಲಸದಲ್ಲಿ ಶೇಕಡ ೫೦ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದರು.
ಸAಬAಧಿಸಿದ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ನಮೂನೆ ೬ರಲ್ಲಿ ಅರ್ಜಿ ಸಲ್ಲಿಸುವ ಮೂಲಕ ಕೆಲಸದ ಬೇಡಿಕೆಯನ್ನು ಸಲ್ಲಿಸಬಹುದು ಅಥವಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿರುವ ಕಾಮಗಾರಿ ಬೇಡಿಕೆ ಪೆಟ್ಟಿಗೆಯಲ್ಲಿ ಅರ್ಜಿ ಸಲ್ಲಿಸಬಹುದು. ಉದ್ಯೋಗ ಚೀಟಿ ಪಡೆಯಲು ಸ್ಥಳೀಯ ವಾಸಸ್ಥಳ ದೃಢೀಕರಣ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳೊಂದಿಗೆ ನಮೂನೆ ೧ರಲ್ಲಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಜಾಬ್ ಕಾರ್ಡ್ ಪಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ (ಅಭಿವೃದ್ಧಿ) ಕೆ.ಪಿ ಸಂಜೀವಪ್ಪ, ಉಪ ಕಾರ್ಯದರ್ಶಿ (ಆಡಳಿತ) ಈಶ್ವರಪ್ಪ, ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಯೋಜನಾ ನಿರ್ದೇಶಕರಾದ ನಾರಾಯಣಸ್ವಾಮಿ ಸೇರಿದಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಮತ್ತು ವಿಬಿ ಜಿ ರಾಮ್ ಜಿ ಯೋಜನೆಯ ಸಿಬ್ಬಂದಿ ಭಾಗಿಯಾಗಿದ್ದರು.
(Visited 1 times, 1 visits today)



