BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
  • ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
  • ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
  • ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ
  • ೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

By News Desk BenkiyabaleUpdated:August 28, 2026 5:06 pm

ತುಮಕೂರು: ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ ೬ರಂದು ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ರಜತ ಮಹೋತ್ಸವ, ಬೃಹತ್ ಜನಜಾಗೃತಿ ಸಮಾವೇಶ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ತಿಳಿಸಿದರು.
ನಗರದ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ವಿದ್ಯಾರ್ಥಿ ನಿಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಒಕ್ಕೂಟದಿಂದ ನಿರಂತರ ಹೋರಾಟ ನಡೆಸಲಾಗುವುದು. ಮಾಜಿ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ಜಾತಿಗಳ ಕಲ್ಯಾಣಕ್ಕಾಗಿ ಶ್ರಮಿಸಿದ್ದು, ಅನೇಕ ಕೊಡುಗೆಗಳನ್ನು ನೀಡುವ ಮೂಲಕ ಶೋಷಿತರನ್ನು ಮುನ್ನೆಲೆಗೆ ತರುವ ಕೆಲಸ ಮಾಡಿದ್ದಾರೆ. ಸದ್ಯ ಮಧುಸೂದನ್ ನಾಯಕ್ ಸಮಿತಿಯ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಈ ಸಮಾವೇಶದ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗುವುದು” ಎಂದರು.
ಹಿAದುಳಿದ ವರ್ಗಗಳ ಆಯೋಗದ ಮಾಜಿ ಜೆ.ಡಿ. ಗೋಪಾಲ್ ಮಾತನಾಡಿ ೫-೨-೨೦೦೧ರಂದು ಅಧಿಕೃತವಾಗಿ ನೋಂದಾ ಯಿಸಲ್ಪಟ್ಟ ನಮ್ಮ ಒಕ್ಕೂಟವು ಕಳೆದ ೨೫ ವರ್ಷಗಳಿಂದ ಹಿಂದುಳಿದವರ ನೋವಿಗೆ ಧ್ವನಿಯಾಗಿ, ಹಕ್ಕುಗಳು ಹಾಗೂ ಸಾಂವಿಧಾನಿಕ ಸವಲತ್ತುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನೇಕ ಸವಲತ್ತುಗಳನ್ನು ಕೊಡಿಸುವಲ್ಲಿ ಒಕ್ಕೂಟ ಯಶಸ್ವಿಯಾಗಿದೆ ಎಂದರು.
ಕರ್ನಾಟಕ ಪ್ರದೇಶ ಕುರುಬರ ಸಂಘ ಚಿತ್ರದುರ್ಗದ ನಿರ್ದೇಶಕ ಬಿ.ಟಿ. ಜಗದೀಶ್ ಮಾತನಾಡಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಶ್ರೀ ಮಧುಸೂಧನ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-೨೦೨೫ರ ವರದಿಯು ಸಮಸ್ತ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವರದಾನವಾಗಲಿದೆ. ಈ ಬೃಹತ್ ಸಮಾವೇಶದ ಪ್ರಮುಖ ನಿರ್ಣಯವಾಗಿದೆ.
ಒಕ್ಕೂಟದ ಜಿಲ್ಲಾ ಕಾರ್ಯಾಧ್ಯಕ್ಷ ಕೆಂಪರಾಜು ಮಾತನಾಡಿ “ಒಕ್ಕೂಟವು ೨೫ ವರ್ಷ ಪೂರೈಸಿ ಯಶಸ್ವಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಹಾಗೂ ರಾಜ್ಯದ ಇತಿಹಾಸದಲ್ಲಿ ಸುದೀರ್ಘವಾಗಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಸಮಾವೇಶಕ್ಕೆ ಹಿಂದುಳಿದ ವರ್ಗದ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಆಗಮಿಸಲಿದ್ದು, ರಾಜ್ಯದ ಎಲ್ಲಾ ಹಿಂದುಳಿದ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಆಂತರಿಕ ಲೆಕ್ಕ ಪರಿಶೋಧಕ ಟಿ ಈ ರಘುರಾಮ್, ಸುನಿತ ನಟರಾಜು, ಧರ್ಮರಾಜು, ದೇವರಾಜ್, ರವೀಶ್, ಬಸವರಾಜ್, ಸುಕನ್ಯ, ಹರೀಶ್ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news Mla tumakur tumkur ತುಮಕೂರು:
Previous Articleಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
Next Article ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
News Desk Benkiyabale

Related Posts

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm news
ತಾಜಾ ಸುದ್ಧಿಗಳು
news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm
news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm
Our Youtube Channel
Our Picks

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮದರ್ ಥೆರೆಸಾರವರ ಜನ್ಮದಿನಾಚರಣೆ

By News Desk BenkiyabaleAugust 28, 2026 5:11 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ಮದರ್…

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.